
ಕೊರೋನಾ ಸೋಂಕು ತ್ವರಿತವಾಗಿ ಹರಡುತ್ತಿರುವ ಮಧ್ಯೆ ಹಲವು ರಾಷ್ಟ್ರಗಳಲ್ಲಿ ಮಂಕಿಪಾಕ್ಸ್ ವೇಗವಾಗಿ ಹರಡುತ್ತಿದೆ. ಸಾವಿನ ಪ್ರಮಾಣವು ಸಿಡುಬಿಗಿಂತ ತುಂಬಾ ಕಡಿಮೆಯಾದರೂ, ಇದು ಅಪಾಯಕಾರಿಯೆಂದು ಪರಿಗಣಿಸಲಾಗಿದೆ. ಹೀಗಾಗಿ ಮಂಕಿಪಾಕ್ಸ್‌ನ್ನು ವರ್ಲ್ಡ್ ಹೆಲ್ತ್ ನೆಟ್‌ವರ್ಕ್ ಸಾಂಕ್ರಾಮಿಕ ರೋಗವೆಂದು ಈಗಾಗ್ಲೇ ಘೋಷಿಸಿದೆ. ಈ ಮಧ್ಯೆ ಕೇರಳದಲ್ಲಿ ಮೊದಲ ಶಂಕಿತ ಮಂಕಿಪಾಕ್ಸ್ ಪ್ರಕರಣವೊಂದು ಪತ್ತೆಯಾಗಿದೆ.
ವಿದೇಶದಿಂದ ಕೇರಳಕ್ಕೆ ಮರಳಿದ ವ್ಯಕ್ತಿ
ವಿದೇಶದಿಂದ ಮರಳಿದ ವ್ಯಕ್ತಿಯಲ್ಲಿ ಮಂಕಿಪಾಕ್ಸ್ ರೋಗಲಕ್ಷಣಗಳು ಕಾಣಿಸಿಕೊಂಡಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ತಿಳಿಸಿದ್ದಾರೆ. ಸದ್ಯ ವ್ಯಕ್ತಿಯ ಬ್ಲಡ್ ಸ್ಯಾಂಪಲ್‌ನ್ನು ನ್ಯಾಷನಲ್ ಇನ್ಸಿಟ್ಯೂಟ್ ಆಫ್ ವೈರಾಲಜಿಗೆ ಕಳುಹಿಸಿಕೊಡಲಾಗಿದೆ. ಪರೀಕ್ಷಾ ವರದಿ ನಂತರವಷ್ಟೇ ಇದು ಮಂಕಿಪಾಕ್ಸ್ ಪ್ರಕರಣವೇ ಎಂದು ಖಚಿತವಾಗಬೇಕಿದೆ ಎಂದು ಸಚಿವೆ ವೀಣಾಜಾರ್ಜ್ ತಿಳಿಸಿದ್ದಾರೆ. ವ್ಯಕ್ತಿಯಲ್ಲಿ ಮಂಕಿಪಾಕ್ಸ್‌ನ ಹಲವು ರೋಗ ಲಕ್ಷಣಗಳು ಕಾಣಿಸಿಕೊಂಡಿವೆ. ಮಾತ್ರವಲ್ಲ ವ್ಯಕ್ತಿ ವಿದೇಶದಲ್ಲಿ ಮಂಕಿಪಾಕ್ಸ್ ಸೋಂಕಿಗೆ ಒಳಗಾಗಿದ್ದ ವ್ಯಕ್ತಿಯೊಂದಿಗೆ ನಿಕಟ ಸಂಪರ್ಕ ಹೊಂದಿದ್ದ ಬಗ್ಗೆ ಹೇಳಿದ್ದಾರೆ ಎಂದು ಸಚಿವೆ ತಿಳಿಸಿದ್ದಾರೆ.
ಮಂಕಿಪಾಕ್ಸ್, ಶಂಕಿತ ರೋಗಲಕ್ಷಣ ಹೊಂದಿದ್ದ ಯುವಕನ ವರದಿ ನೆಗೆಟಿವ್
ಮಂಕಿಪಾಕ್ಸ್ ವೈರಸ್ ಪ್ರಪಂಚದ 40ಕ್ಕೂ ಹೆಚ್ಚು ದೇಶಗಳಲ್ಲಿ ಕಂಡುಬಂದಿದೆ. ಅದರಲ್ಲೂ ಯುರೋಪಿನಲ್ಲಿ ಹೆಚ್ಚಿನ ಸಕ್ರಿಯ ಪ್ರಕರಣಗಳು ವರದಿಯಾಗಿವೆ. ಕಳೆದ ತಿಂಗಳವರೆಗೆ, ಮಂಕಿಪಾಕ್ಸ್ ಆಫ್ರಿಕಾದಿಂದ ಹೊರಗೆ ಹೆಚ್ಚು ಪ್ರಕರಣಗಳು ಕಂಡು ಬರಲ್ಲಿಲ್ಲ. ಹೀಗಾಗಿ ಜನರು ಸ್ಪಲ್ಪಮಟ್ಟಿಗೆ ನಿರಾಳವಾಗಿದ್ದರು. ಆದರೆ ಕಳೆದ ತಿಂಗಳು ಕಳೆದ ತಿಂಗಳು ಯುರೋಪಿನಲ್ಲಿ ಪ್ರಕರಣಗಳ ಉಲ್ಬಣವು ಸ್ಪೇನ್ ಮತ್ತು ಬೆಲ್ಜಿಯಂನಲ್ಲಿ ಹೆಚ್ಚಾದ ಪ್ರಕರಣವು ಆತಂಕಕ್ಕೆ ಕಾರಣವಾಗಿದೆ.
ಮಂಕಿಪಾಕ್ಸ್ ಕಾಯಿಲೆ ಎಂದರೇನು ?
ಯುನೈಟೆಡ್ ಸ್ಟೇಟ್ಸ್‌ನ ಸೆಂಟರ್ಸ್ ಫಾರ್ ಡಿಸೀಸ್ ಕಂಟ್ರೋಲ್ (ಸಿಡಿಸಿ) ಪ್ರಕಾರ, ಮಂಕಿಪಾಕ್ಸ್ ವೈರಸ್ ಸೋಂಕಿನಿಂದ ಉಂಟಾಗುವ ಅಪರೂಪದ ಕಾಯಿಲೆಯಾಗಿದೆ. ಮಂಕಿಪಾಕ್ಸ್ ವೈರಸ್ ಪಾಕ್ಸ್‌ವಿರಿಡೆ ಕುಟುಂಬದಲ್ಲಿ ಆರ್ಥೋಪಾಕ್ಸ್‌ವೈರಸ್ ಕುಲಕ್ಕೆ ಸೇರಿದೆ ಎಂದು ಅದು ಹೇಳಿದೆ. ವಿಶ್ವ ಆರೋಗ್ಯ ಸಂಸ್ಥೆ (WHO) ಪ್ರಕಾರ, ಝೂನೋಟಿಕ್ ಕಾಯಿಲೆಯು ಪ್ರಾಥಮಿಕವಾಗಿ ಮಧ್ಯ ಮತ್ತು ಪಶ್ಚಿಮ ಆಫ್ರಿಕಾದ ಉಷ್ಣವಲಯದ ಮಳೆಕಾಡು ಪ್ರದೇಶಗಳಲ್ಲಿ ಕಂಡುಬರುತ್ತದೆ ಮತ್ತು ಸಾಂದರ್ಭಿಕವಾಗಿ ಇತರ ಪ್ರದೇಶಗಳಿಗೆ ರಫ್ತು ಮಾಡಲಾಗುತ್ತದೆ.
ಮಂಕಿಪಾಕ್ಸ್ v/s ಚಿಕನ್ ಪಾಕ್ಸ್: ಎರಡೂ ಸೋಂಕಿನ ಮಧ್ಯೆ ವ್ಯತ್ಯಾಸ ತಿಳಿದುಕೊಳ್ಳುವುದು ಹೇಗೆ ?
ರೋಗದ ಲಕ್ಷಣಗಳು
ಜ್ವರ, ದದ್ದು, ತೀವ್ರವಾದ ತಲೆನೋವು, ಬೆನ್ನು ನೋವು, ಸ್ನಾಯು ನೋವು (ಮೈಯಾಲ್ಜಿಯಾ), ತೀವ್ರವಾದ ಅಸ್ತೇನಿಯಾ (ಶಕ್ತಿಯ ಕೊರತೆ) ಮತ್ತು ಊದಿಕೊಂಡ ದುಗ್ಧರಸ ಗ್ರಂಥಿಗಳು ಮಂಕಿಪಾಕ್ಸ್‌ಗೆ ಸಂಬಂಧಿಸಿದ ಸಾಮಾನ್ಯ ಲಕ್ಷಣಗಳಾಗಿವೆ. WHO ಪ್ರಕಾರ, ಜ್ವರ ಕಾಣಿಸಿಕೊಂಡ 1-3 ದಿನಗಳಲ್ಲಿ ಮಂಕಿಪಾಕ್ಸ್ ರೋಗಿಗಳಲ್ಲಿ ಚರ್ಮದ ಸಮಸ್ಯೆಗಳು ಕಂಡುಬರುತ್ತವೆ. ದದ್ದುಗಳು ಮುಖದ ಮೇಲೆ ಹೆಚ್ಚು ಕೇಂದ್ರೀಕೃತವಾಗಿರುತ್ತವೆ. ಮುಖದ ಹೊರತಾಗಿ, ಇದು ಅಂಗೈಗಳು ಮತ್ತು ಪಾದಗಳ ಅಡಿಭಾಗ, ಬಾಯಿಯ ಲೋಳೆಯ ಪೊರೆಗಳು, ಜನನಾಂಗಗಳು ಮತ್ತು ಕಾಂಜಂಕ್ಟಿವಾ ಮತ್ತು ಕಾರ್ನಿಯಾದ ಮೇಲೆ ಪರಿಣಾಮ ಬೀರುತ್ತದೆ ಎಂದು ಜಾಗತಿಕ ಆರೋಗ್ಯ ಸಂಸ್ಥೆ ಹೇಳಿದೆ. ಮಂಕಿಪಾಕ್ಸ್‌ನ ಕಾವು ಕಾಲಾವಧಿಯು (ಸೋಂಕಿನಿಂದ ರೋಗಲಕ್ಷಣಗಳ ಪ್ರಾರಂಭದವರೆಗೆ) ಸಾಮಾನ್ಯವಾಗಿ 6 ರಿಂದ 13 ದಿನಗಳವರೆಗೆ ಇರುತ್ತದೆ ಎಂದು ತಿಳಿಸಲಾಗಿದೆ.
ಮಂಕಿಪಾಕ್ಸ್ ಸೋಂಕು ಹರಡುವುದನ್ನು ತಡೆಗಟ್ಟಲು ಏನು ಮಾಡಬೇಕು ?
* ಯಾವಾಗಲೂ ಕೈಗಳನ್ನು ಶುಚಿಯಾಗಿಟ್ಟುಕೊಳ್ಳುವುದು. ಸಾಬೂನು ಮತ್ತು ನೀರು ಅಥವಾ ಅಲ್ಕೋಹಾಲ್ ಆಧಾರಿತ ಸ್ಯಾನಿಟೈಸರ್‌ನಿಂದ ಕೈಗಳನ್ನು ತೊಳೆಯುತ್ತಿರುವುದು
* ಪ್ರಾಣಿಗಳಿಂದ ಮನುಷ್ಯರಿಗೆ ಹರಡುವುದನ್ನು ತಡೆಗಟ್ಟಬೇಕು.
* ಮಾಂಸವನ್ನು ಚೆನ್ನಾಗಿ ಬೇಯಿಸಿ ತಿನ್ನಬೇಕು
* ರಾಶಸ್ ಹೊಂದಿರುವವರೊಂದಿಗೆ ಯಾವುದೇ ಸಂಪರ್ಕ ಇಟ್ಟುಕೊಳ್ಳಬಾರದು
* ಅನಾರೋಗ್ಯದ ರೋಗಿಯ ಯಾವುದೇ ದ್ರವ ಅಥವಾ ವಸ್ತುವಿನ ಸಂಪರ್ಕ ಮಾಡಬಾರದು.
ಆರೋಗ್ಯ, ಸೌಂದರ್ಯ, ಫಿಟ್‌ನೆಸ್, ಕಿಚನ್ ಟಿಪ್ಸ್, ಸಂಬಂಧ, ಫ್ಯಾಷನ್, ರೆಸಿಪಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.