Brain Fever: ರಾಜ್ಯಾದ್ಯಂತ ಇಂದಿನಿಂದ ಮಕ್ಕಳಿಗೆ ಮೆದುಳು ಜ್ವರಕ್ಕೆ ಲಸಿಕೆ

By Kannadaprabha News  |  First Published Dec 5, 2022, 9:22 AM IST

ರಾಜ್ಯದಲ್ಲಿ ಇಂದಿನಿಂದ ಜಪಾನಿ ಮೆದುಳು ಜ್ವರಕ್ಕೆ ಮಕ್ಕಳಿಗೆ ಲಸಿಕೆ ನೀಡಲಾಗುತ್ತಿದೆ.10 ಜಿಲ್ಲೆಗಳಲ್ಲಿ 1ರಿಂದ 15 ವರ್ಷದೊಳಗಿನ ಮಕ್ಕಳಿಗೆ ಮೆದುಳು ಜ್ವರ ಲಸಿಕೆ ಅಭಿಯಾನ ನಡೆಸಲಾಗುವುದು ಎಂದು ಸಚಿವ ಡಾ.ಸುಧಾಕರ್‌ ತಿಳಿಸಿದ್ದಾರೆ. 48 ಲಕ್ಷ ಮಕ್ಕಳಿಗೆ ಲಸಿಕೆ ನೀಡುವ ಗುರಿ ಇಟ್ಟುಕೊಳ್ಳಲಾಗಿದೆ.


ಬೆಂಗಳೂರು: ಜೆಇ ಮೆದುಳು ಜ್ವರ (ಜಪಾನೀಸ್‌ ಎನ್‌ಸೆಫಲೈಟಿಸ್‌) ನಿಯಂತ್ರಣಕ್ಕಾಗಿ ಇಂದಿನಿಂದ ರಾಜ್ಯದ 10 ಜಿಲ್ಲೆಗಳಲ್ಲಿ ವಿಶೇಷ ಲಸಿಕಾ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, 1-15 ವರ್ಷದ ಅಂದಾಜು 48 ಲಕ್ಷ ಮಕ್ಕಳಿಗೆ (Children) ಲಸಿಕೆ ನೀಡುವ ಗುರಿ ಹೊಂದಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಸಚಿವ ಡಾ.ಕೆ.ಸುಧಾಕರ್‌ ತಿಳಿಸಿದ್ದಾರೆ.

ಜೆಇ ಲಸಿಕಾ ಅಭಿಯಾನ (Vaccination) ಕುರಿತುಮಾಹಿತಿ ನೀಡಿದ ಅವರು, ‘ಜೆಇ ಮೆದುಳು ಜ್ವರ (Brain fever) ಫ್ಲೇವಿ ವೈರಸ್‌ನಿಂದ ಬರುತ್ತದೆ. ಮಕ್ಕಳಲ್ಲಿ ನರ ದೌರ್ಬಲ್ಯ, ಬುದ್ಧಿಮಾಂದ್ಯತೆ ಸೇರಿದಂತೆ ಶಾಶ್ವತ ಅಂಗವಿಕಲತೆ ಉಂಟುಮಾಡುವ ಸಾಧ್ಯತೆಗಳಿವೆ. ಈಗಾಗಲೇ ರಾಜ್ಯದಲ್ಲಿ ಜೆಇ ಎಂಡೆಮಿಕ್‌ ಪೀಡಿತ ಎಂದು ಗುರುತಿಸಿರುವ 10 ಜಿಲ್ಲೆಗಳಲ್ಲಿ ಮುನ್ನೆಚ್ಚರಿಕಾ ಲಸಿಕೆ ನೀಡಲಾಗುತ್ತಿದೆ. ಸದ್ಯ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ನಿರ್ದೇಶನದಂತೆ ಹೆಚ್ಚುವರಿಯಾಗಿ ಬಾಗಲಕೋಟೆ, ದಕ್ಷಿಣ ಕನ್ನಡ, ಗದಗ, ಹಾಸನ, ಹಾವೇರಿ, ಕಲಬುರಗಿ, ತುಮಕೂರು, ರಾಮನಗರ, ಉಡುಪಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಲಸಿಕಾ ಅಭಿಯಾನ (Campaign) ಹಮ್ಮಿಕೊಳ್ಳಲಾಗಿದೆ' ಎಂದು ಹೇಳಿದರು.

Latest Videos

undefined

Parkinson's Disease: ಮೆದುಳಿನ ನರವನ್ನೇ ನಾಶ ಮಾಡುವ ಅಪಾಯಕಾರಿ ರೋಗ ಪಾರ್ಕಿನ್ಸನ್

ಕೇಂದ್ರ ಸರ್ಕಾರ ಉಚಿತವಾಗಿ ಜೆನವ್ಯಾಕ್‌ ಜೆಇ ಲಸಿಕೆಗಳನ್ನು ಸರಬರಾಜು ಮಾಡಿದ್ದು, ಡಿಸೆಂಬರ್‌ ಮೊದಲನೇ ವಾರದಲ್ಲಿ ಎಲ್ಲ ಸರ್ಕಾರಿ ಹಾಗೂ ಖಾಸಗಿ ಶಾಲೆಗಳಲ್ಲಿ ಲಸಿಕೆ ಹಾಕಿಸಲು ಕ್ರಮ ಕೈಗೊಳ್ಳಲಾಗಿದೆ. ನಂತರದ ಎರಡು ವಾರಗಳಲ್ಲಿ ಎಲ್ಲ ಆರೋಗ್ಯ ಸಂಸ್ಥೆಗಳು, ಅಂಗನವಾಡಿ ಕೇಂದ್ರ ಹಾಗೂ ಸಮುದಾಯದ ಇನ್ನಿತರ ಪ್ರದೇಶಗಳಲ್ಲಿ ಲಸಿಕೆ ನೀಡಲಾಗುವುದು ಎಂದರು.

ಶೇ.20ರಿಂದ 30 ಮರಣ ದರ
ಫ್ಲೇವಿ ವೈರಾಣು ಕ್ಯುಲೆಸ್‌ ಸೊಳ್ಳೆಗಳ ಮೂಲಕ ಹರಡುತ್ತದೆ. ಹಂದಿಗಳು ಮತ್ತು ಕಾಡಿನ ಪಕ್ಷಿಗಳಲ್ಲಿರುವ ಈ ವೈರಾಣುವಿಗೆ ಮಾನವರ ದೇಹ ಕಟ್ಟಕಡೆಯ ಆಶ್ರಯ ತಾಣವಾಗಿರುತ್ತದೆ. ಜೆಇ ಮೆದುಳು ಜ್ವರದ ಮೊದಲ ಪ್ರಕರಣ 1955ರಲ್ಲಿ ತಮಿಳುನಾಡಿನ ವೆಲ್ಲೂರಿನಲ್ಲಿ ವರದಿಯಾಗಿತ್ತು. ರಾಜ್ಯದಲ್ಲಿ 1978ರಲ್ಲಿ ಕೋಲಾರ ಜಿಲ್ಲೆಯಲ್ಲಿ ಮೊದಲ ಪ್ರಕರಣ ಪತ್ತೆಯಾಗಿತ್ತು. ಹೆಚ್ಚಿನ ಪ್ರಕರಣಗಳು 15 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಲ್ಲಿ ಕಂಡುಬರುತ್ತಿದೆ. ಪ್ರಸಕ್ತ ವರ್ಷ 21 ಪ್ರಕರಣಗಳು ಪತ್ತೆಯಾಗಿವೆ. ರೋಗ ಪತ್ತೆಗೆ ನಿಮ್ಹಾನ್ಸ್‌, ರಾಷ್ಟ್ರೀಯ ವೈರಾಣು ಸಂಸ್ಥೆ, ಬಳ್ಳಾರಿಯ ವಿಮ್ಸ್‌, ಹುಬ್ಬಳಿಯ ಕಿಮ್ಸ್‌, ಕೋಲಾರ, ಮಣಿಪಾಲ, ಕೇಂದ್ರಗಳಲ್ಲಿ ಪ್ರಯೋಗಾಲಯ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.

ದೇಹಕ್ಕೆ ಮಾತ್ರವಲ್ಲ, ಮಿದುಳಿಗೂ ವಯಸ್ಸಾಗುತ್ತೆ! ಆಗ ಹೀಗೆಲ್ಲ ಬದಲಾಗುತ್ತೆ

10 ಜಿಲ್ಲೆಗಳಲ್ಲಿ ನಿರಂತರ ಲಸಿಕಾಕರಣ
ಬಳ್ಳಾರಿ, ರಾಯಚೂರು, ಕೊಪ್ಪಳ, ವಿಜಯಪುರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಧಾರವಾಡ, ಚಿತ್ರದುರ್ಗ ಮತ್ತು ದಾವಣಗೆರೆ ಜಿಲ್ಲೆಗಳನ್ನು 10 ಜೆಇ ಎಂಡೆಮಿಕ್‌ ಪೀಡಿತ ಜಿಲ್ಲೆಗಳು ಎಂದು ಗುರುತಿಸಲಾಗಿದೆ. ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದಲ್ಲಿ ಈ ಜಿಲ್ಲೆಗಳಲ್ಲಿನ ಮಕ್ಕಳಿಗೆ 9 ತಿಂಗಳು ತುಂಬಿದ ನಂತರ ಮೊದಲನೇ ಡೋಸ್‌ ಮತ್ತು 1.5 ವರ್ಷದ ವಯಸ್ಸಿನಲ್ಲಿ 2ನೇ ಡೋಸ್‌ ಲಸಿಕೆ ನೀಡಲಾಗುತ್ತಿದೆ ಎಂದು ಸಚಿವರು ಮಾಹಿತಿ ನೀಡಿದರು.

ಭಾರತವೂ ಸೇರಿದಂತೆ ಏಷ್ಯಾದ 11 ಏಷ್ಯಾ ರಾಷ್ಟ್ರಗಳು ಈ ಪಟ್ಟಿಯಲ್ಲಿದೆ. ಪ್ರತಿ ವರ್ಷ ಸರಾಸರಿ 68 ಸಾವಿರ ಪ್ರಕರಣಗಳು ವರದಿಯಾಗುತ್ತಿದ್ದು, ಮರಣ ಪ್ರಮಾಣ (Death rate) ಶೇ.20ರಿಂದ ಶೇ.30ರಷ್ಟಿದೆ. ಗುಣಮುಖರಾದ ಶೇ.30ರಿಂದ ಶೇ.50ರಷ್ಟುಪ್ರಕರಣಗಳಲ್ಲಿ ನರದೌರ್ಬಲ್ಯ, ಬುದ್ಧಿಮಾಂದ್ಯತೆ ಸೇರಿದಂತೆ ಶಾಶ್ವತ ಅಂಗವಿಕಲತೆ ಉಂಟಾಗಿವೆ ಎಂದು ಹೇಳಿದರು.

Varun Dhawan: ದೇಹದ ಹತೋಟಿ ಕಳಕೊಂಡಿದ್ರು ವರುಣ್‌ ಧವನ್‌, ಏನಿದು ವೆಸ್ಟಿಬ್ಯುಲಾರ್‌ ಹೈಪೋಫಂಕ್ಷನ್?

click me!