Ayushmati clinic: ಮಹಿಳೆಯರು ಸುಸ್ಥಿರ ಆರೋಗ್ಯವಂತರಾಗಿರಬೇಕು : ಸುಮಿತ್ರಾ ಆರ್ ನಾಯಕ್

By Ravi Janekal  |  First Published Mar 28, 2023, 8:45 PM IST

ಮಹಿಳೆಯರು ತಮ್ಮ ಆರೋಗ್ಯದ ಸಮಸ್ಯೆಗಳ ಬಗ್ಗೆ ಸಕಾಲದಲ್ಲಿ  ಸೂಕ್ತ ತಪಾಸಣೆ ಮಾಡಿಸಿಕೊಳ್ಳದೇ ಇದ್ದಲ್ಲಿ ಅದರಿಂದ ಆಕೆಯ ಆರೋಗ್ಯ ಮಾತ್ರವಲ್ಲದೇ, ಆಕೆಯ  ಕುಟುಂಬ ಮತ್ತು ಸಮಾಜದ ಆರೋಗ್ಯದ ಮೇಲೆ ಸಹ ವ್ಯತಿರಿಕ್ತ ಪರಿಣಾಮ ಉಂಟಾಗುತ್ತದೆ. ಪ್ರತಿ ಮಹಿಳೆಯು ಆರೋಗ್ಯವಾಗಿರಲು ಆಯುಷ್ಮತಿ ಕ್ಲಿನಿಕ್ ಸಹಕಾರಿಯಾಗಲಿದೆ ಎಂದು ಆರ್ ಸುಮಿತ್ರ ನಾಯಕ್ ಹೇಳಿದರು.


ಉಡುಪಿ (ಮಾ.28) : ಮಹಿಳೆಯರು ತಮ್ಮ ಆರೋಗ್ಯದ ಸಮಸ್ಯೆಗಳ ಬಗ್ಗೆ ಸಕಾಲದಲ್ಲಿ  ಸೂಕ್ತ ತಪಾಸಣೆ ಮಾಡಿಸಿಕೊಳ್ಳದೇ ಇದ್ದಲ್ಲಿ ಅದರಿಂದ ಆಕೆಯ ಆರೋಗ್ಯ ಮಾತ್ರವಲ್ಲದೇ, ಆಕೆಯ  ಕುಟುಂಬ ಮತ್ತು ಸಮಾಜದ ಆರೋಗ್ಯದ ಮೇಲೆ ಸಹ ವ್ಯತಿರಿಕ್ತ ಪರಿಣಾಮ ಉಂಟಾಗಲಿದ್ದು, ಮಹಿಳೆಯರು ಸುಸ್ಥಿರ ಆರೋಗ್ಯವಂತರಾಗಿರಲು ಆಯುಷ್ಮತಿ ಕ್ಲಿನಿಕ್‌ಗಳು ಸಹಕಾರಿಯಾಗಲಿವೆ ಎಂದು  ನಗರಸಭೆ ಅಧ್ಯಕ್ಷೆ ಸುಮಿತ್ರಾ ಆರ್ ನಾಯಕ್ ಹೇಳಿದರು.

ಅವರು ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಹಾಗೂ ರಾಷ್ಟ್ರೀಯ ಆರೋಗ್ಯ ಅಭಿಯಾನ(National Health Campaign) ಉಡುಪಿ ಇವರ ಸಹಯೋಗದಲ್ಲಿ, ಉಡುಪಿ(Udupi)ಯ ಅಲಂಕಾರ್ ಚಿತ್ರಮಂದಿರದ ಬಳಿಯ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆರಂಭಿಸಿರುವ ಆಯುಷ್ಮತಿ ಕ್ಲಿನಿಕ್(Ayushmati clinic inauguration)ಉದ್ಘಾಟಿಸಿ ಮಾತನಾಡಿದರು.

Tap to resize

Latest Videos

undefined

Ayushmati Clinic: ಮಹಿಳೆಯರಿಗೆ ಆರೋಗ್ಯ ಸೇವೆ ನೀಡಲು ಬಂದಿದೆ ಆಯುಷ್ಮತಿ ಕ್ಲಿನಿಕ್

ಮಹಿಳೆಯರು ಮತ್ತು ಹದಿಹರೆಯದ ಹೆಣ್ಣು ಮಕ್ಕಳು ತಮ್ಮ ಹಲವು ಆರೋಗ್ಯ ಸಮಸ್ಯೆಗಳ ಕುರಿತು ಮುಕ್ತವಾಗಿ ಒಂದೇ ಕಡೆಯಲ್ಲಿ ಪರೀಕ್ಷಿಸಿಕೊಳ್ಳಲು ಸೂಕ್ತ ವ್ಯವಸ್ಥೆ ಇಲ್ಲದ ಕಾರಣ ಹಲವು  ಕಾಯಿಲೆಗಳನ್ನು ಸಕಾಲದಲ್ಲಿ ಪರೀಕ್ಷಿಸಿಕೊಳ್ಳದೇ ಅನಾರೋಗ್ಯಕ್ಕೆ ಒಳಗಾಗುತ್ತಿದ್ದಾರೆ. ಇದಕ್ಕೆ ಸೂಕ್ತ ಪರಿಹಾರವೆನ್ನುವಂತೆ ಆಯುಷ್ಮತಿ ಕೇಂದ್ರವನ್ನು ಆರಂಭಿಸಿರುವುದರಿಂದ, ಮಹಿಳೆಯರು ಮತ್ತು ಹದಿಹರೆಯದ ಹೆಣ್ಣು ಮಕ್ಕಳು ಈ ಕ್ಲಿನಿಕ್‌ನಲ್ಲಿ ತಮ್ಮ ಎಲ್ಲಾ ಆರೋಗ್ಯ ಸಮಸ್ಯೆಗಳಿಗೆ ಉಚಿತವಾಗಿ ಸೂಕ್ತ ಚಿಕಿತ್ಸೆ ಪಡೆಯಲು ಸಾಧ್ಯವಾಗಲಿದ್ದು, ಜಿಲ್ಲೆಯ ಮಹಿಳೆಯರು ಈ ಕೇಂದ್ರದ ಸಂಪೂರ್ಣ ಪ್ರಯೋಜನ ಪಡೆದು ಸುಸ್ಥಿರ ಆರೋಗ್ಯ ಪಡೆಯಬೇಕು ಎಂದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗಭೂಷಣ ಉಡುಪ(Dr Bhushan udupa) ಮಾತನಾಡಿ, ಆಯುಷ್ಮತಿ ಕ್ಲಿನಿಕ್‌ನಲ್ಲಿ, ಮಹಿಳೆಯರು ಮತ್ತು ಹದಿಹರೆಯದ ಹೆಣ್ಣು ಮಕ್ಕಳಿಗಾಗಿ ಪ್ರತೀ ದಿನ ಒಬ್ಬ ತಜ್ಞ ವೈದ್ಯರ ಸೇವೆಯು ಲಭ್ಯವಿದ್ದು, ಈ ಕ್ಲಿನಿಕ್‌ನಲ್ಲಿ ಲ್ಯಾಬ್ ಪರೀಕ್ಷೆಗಳ ಸೇವೆ, ವಿವಿಧ ಆರೋಗ್ಯ ಸಮಸ್ಯೆಗಳ ಬಗ್ಗೆ ಆಪ್ತ ಸಮಾಲೋಚನೆ ಮತ್ತು ಉಚಿತ ಔಷಧಿಗಳು ಸಹ ದೊರೆಯಲಿವೆ ಎಂದರು.

 

Ayushmati Clinic: ಸ್ತ್ರೀಯರಿಗೆ ಪ್ರತ್ಯೇಕ ‘ಆಯುಷ್ಮತಿ’ ಕ್ಲಿನಿಕ್‌: ಸಚಿವ ಸುಧಾಕರ್‌

ಕಾರ್ಯಕ್ರಮದಲ್ಲಿ ನಗರಸಭಾ ಸದಸ್ಯೆ ರಶ್ಮಿ ಚಿತ್ತರಂಜನ್ ಭಟ್, ಉಡುಪಿ ತಾಲೂಕು ಆರೋಗ್ಯಾಧಿಕಾರಿ ಡಾ.ವಾಸುದೇವ ಉಪಾಧ್ಯಾಯ, ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ.ಲತಾ ನಾಯಕ್, ಜಿಲ್ಲಾ ಆರ್.ಸಿ.ಹೆಚ್. ಅಧಿಕಾರಿ ಡಾ.ಎಂ.ಜಿ.ರಾಮ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಮರಾವ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ನಾಗರತ್ನ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

click me!