ಭಾರತ ಹಾಕಿ ತಂಡಗಳಿಗೆ ಮೊದಲ ಡೋಸ್‌ ಲಸಿಕೆ

By Suvarna News  |  First Published Apr 30, 2021, 9:23 AM IST

ಟೋಕಿಯೋ ಒಲಿಂಪಿಕ್ಸ್‌ಗೆ ಸಿದ್ದತೆ ನಡೆಸುತ್ತಿರುವ ಭಾರತದ ಪುರುಷರ ಹಾಗೂ ಮಹಿಳಾ ಹಾಕಿ ತಂಡಕ್ಕೆ ಮೊದಲ ಹಂತದ ಕೊರೋನಾ ಲಸಿಕೆ ನೀಡಲಾಗಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.


ನವದೆಹಲಿ(ಏ.30): ಬೆಂಗಳೂರಿನ ಭಾರತೀಯ ಕ್ರೀಡಾ ಪ್ರಾಧಿಕಾರ (ಸಾಯ್‌) ಕೇಂದ್ರದಲ್ಲಿ ಟೋಕಿಯೋ ಒಲಿಂಪಿಕ್ಸ್‌ಗೆ ಅಭ್ಯಾಸ ನಡೆಸುತ್ತಿರುವ ಭಾರತ ಪುರುಷ ಹಾಗೂ ಮಹಿಳಾ ಹಾಕಿ ತಂಡಗಳ ಸದಸ್ಯರು ಗುರುವಾರ ಮೊದಲ ಡೋಸ್‌ ಕೊರೋನಾ ಲಸಿಕೆ ಹಾಕಿಸಿಕೊಂಡರು. 

ತಾರಾ ಗೋಲ್‌ಕೀಪರ್‌ ಪಿ.ಆರ್‌.ಶ್ರೀಜೇಶ್‌ ಲಸಿಕೆ ಹಾಕಿಸಿಕೊಂಡಿದ್ದಾಗಿ ಫೋಟೋ ಸಮೇತ ಟ್ವೀಟ್‌ ಮಾಡಿದ್ದಾರೆ. ನಾನಿಂದು ಮೊದಲ ಕೋವಿಡ್‌ 19 ಲಸಿಕೆ ಹಾಕಿಸಿಕೊಂಡಿದ್ದೇನೆಂದು ಶ್ರೀಜೇಶ್ ಟ್ವೀಟ್‌ ಮಾಡಿದ್ದಾರೆ.

I got my first shot covid-19 vaccine. ( Covishield vaccine ) pic.twitter.com/k1BUl0dgh0

— sreejesh p r (@16Sreejesh)

Latest Videos

undefined

ಇತ್ತೀಚೆಗಷ್ಟೇ ಕೊರೋನಾ ಸೋಂಕಿಗೆ ಒಳಗಾಗಿರುವ ಮಹಿಳಾ ತಂಡದ ನಾಯಕಿ ರಾಣಿ ರಾಂಪಾಲ್‌ ಸೇರಿ 7 ಆಟಗಾರ್ತಿಯರಿಗೆ ಸಾಯ್‌ ಕೇಂದ್ರದಲೇ ಚಿಕಿತ್ಸೆ ಮುಂದುವರಿದಿದ್ದು, ಅವರು ಗುಣಮುಖರಾಗಿ ಕೆಲ ವಾರಗಳ ಬಳಿಕ ಲಸಿಕೆ ಪಡೆಯಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಭಾರತ ಮಹಿಳಾ ಹಾಕಿ ಟೀಂನ 7 ಮಂದಿಗೆ ಕೊರೋನಾ ಸೋಂಕು ದೃಢ!

ಕೋವಿಡ್ 19 ಸೋಂಕಿನ ಯಾವುದೇ ಲಕ್ಷಣಗಳು ಇಲ್ಲದಿದ್ದರೂ ಸಹಾಯಕ ಸಿಬ್ಬಂದಿ ಸೇರಿದಂತೆ 7 ಆಟಗಾರ್ತಿಯರಿಗೆ ಕೋವಿಡ್ ಸೋಂಕು ದೃಢಪಟ್ಟಿತ್ತು. ರಾಣಿ ರಾಂಪಾಲ್‌  ಮಾತ್ರವಲ್ಲದೇ, ಸವಿತ ಪೂನಿಯಾ, ಶರ್ಮಿಳಾ ದೇವಿ, ರಜನಿ, ನವಜೋತ್ ಕೌರ್ ಹಾಗೂ ಶುಶೀಲಾಗೆ ಕೊರೋನಾ ಸೋಂಕು ದೃಢಪಟ್ಟಿತ್ತು.

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

"

click me!