Junior Hockey World Cup: ಕಂಚಿನ ಪದಕಕ್ಕಾಗಿಂದು ಭಾರತ-ಫ್ರಾನ್ಸ್‌ ಕಾದಾಟ

Suvarna News   | Asianet News
Published : Dec 05, 2021, 09:52 AM IST
Junior Hockey World Cup: ಕಂಚಿನ ಪದಕಕ್ಕಾಗಿಂದು ಭಾರತ-ಫ್ರಾನ್ಸ್‌ ಕಾದಾಟ

ಸಾರಾಂಶ

* ಜೂನಿಯರ್ ಹಾಕಿ ವಿಶ್ವಕಪ್‌ನಲ್ಲಿಂದು ಭಾರತ-ಫ್ರಾನ್ಸ್‌ ಕಂಚಿನ ಪದಕಕ್ಕಾಗಿ ಹೋರಾಟ * ಗ್ರೂಪ್ ಹಂತದ ಸೋಲಿಗೆ ಸೇಡು ತೀರಿಸಿಕೊಳ್ಳುತ್ತಾ ಯುವ ಪಡೆ? * ಫೈನಲ್‌ನಲ್ಲಿ ಜರ್ಮನಿ ಹಾಗೂ ಅರ್ಜೆಂಟೀನಾ ಸೆಣಸಾಟ

ಭುವನೇಶ್ವರ್(ಡಿ.05)‌: ಜೂನಿಯರ್‌ ಹಾಕಿ ವಿಶ್ವಕಪ್‌ (Junior Hockey World Cup) ಪ್ರಶಸ್ತಿ ಉಳಿಸಿಕೊಳ್ಳಲು ವಿಫಲವಾಗಿರುವ ಹಾಲಿ ಚಾಂಪಿಯನ್‌ ಭಾರತ, ಕಂಚಿನ ಪದಕಕ್ಕಾಗಿ ಭಾನುವಾರ ಫ್ರಾನ್ಸ್‌ ವಿರುದ್ಧ ಸೆಣಸಾಡಲಿದೆ. ಗುಂಪು ಹಂತದ ಮೊದಲ ಪಂದ್ಯದಲ್ಲಿ 4-5 ಗೋಲುಗಳಲ್ಲಿ ಫ್ರಾನ್ಸ್‌ಗೆ (France) ಶರಣಾಗಿದ್ದ ಭಾರತ, ಆ ಸೋಲಿಗೆ ಸೇಡು ತೀರಿಸಿಕೊಳ್ಳಲು ಕಾಯುತ್ತಿದೆ. 

ಸೆಮಿಫೈನಲ್‌ನಲ್ಲಿ ಜರ್ಮನಿ (Germany Hockey Team) ವಿರುದ್ಧ 2-4 ಗೋಲುಗಳ ಅಂತರದಲ್ಲಿ ಸೋಲನುಭವಿಸಿದ ಭಾರತ, 4ನೇ ಬಾರಿ ಫೈನಲ್‌ ಪ್ರವೇಶಿಸುವ ಅವಕಾಶ ತಪ್ಪಿಸಿಕೊಂಡಿತ್ತು. ಮತ್ತೊಂದು ಸೆಮೀಸ್‌ನಲ್ಲಿ ಫ್ರಾನ್ಸ್‌, ಅರ್ಜೆಂಟೀನಾ ವಿರುದ್ಧ ಪೆನಾಲ್ಟಿ ಶೂಟೌಟ್‌ನಲ್ಲಿ ಸೋಲುಂಡಿತ್ತು. ಜೂನಿಯರ್ ಹಾಕಿ ವಿಶ್ವಕಪ್ ಫೈನಲ್‌ನಲ್ಲಿ ಜರ್ಮನಿ ಹಾಗೂ ಅರ್ಜೆಂಟೀನಾ ಸೆಣಸಾಡಲಿದೆ.

2016ರಲ್ಲಿ ಲಖನೌದಲ್ಲಿ ನಡೆದ ಕಿರಿಯರ ಹಾಕಿ ವಿಶ್ವಕಪ್ ಟೂರ್ನಿಯಲ್ಲಿ ಭಾರತ ಹಾಕಿ ತಂಡವು (Indian Hockey Team) ಚಾಂಪಿಯನ್ ಪಟ್ಟ ಅಲಂಕರಿಸಿತ್ತು. ಆ ಟ್ರೋಫಿಯನ್ನು ಉಳಿಸಿಕೊಳ್ಳಲು ವಿಫಲವಾಗಿತ್ತು. ಇತ್ತೀಚೆಗಷ್ಟೇ ಮುಕ್ತಾಯವಾದ ಟೋಕಿಯೋ ಒಲಿಂಪಿಕ್ಸ್‌ (Tokyo Olympics) ಕ್ರೀಡಾಕೂಟದಲ್ಲಿ ಭಾರತ ಹಾಕಿ ತಂಡವು ಕಂಚಿನ ಪದಕ ಗೆಲ್ಲುವಲ್ಲಿ ಯಶಸ್ವಿಯಾಗಿತ್ತು ಎನ್ನುವುದನ್ನಿಲ್ಲಿ ಸ್ಮರಿಸಬಹುದಾಗಿದೆ. 

FIH Hockey Awards: ವಿಶ್ವ ಹಾಕಿ ವಾರ್ಷಿಕ ಪ್ರಶಸ್ತಿ ಕ್ಲೀನ್‌ಸ್ವೀಪ್‌ ಮಾಡಿದ ಭಾರತ

ಭಾರತ-ಫ್ರಾನ್ಸ್‌ ಪಂದ್ಯ ಆರಂಭ: ಸಂಜೆ 4.30ಕ್ಕೆ , 
ಅರ್ಜೆಂಟೀನಾ-ಜರ್ಮನಿ ಪಂದ್ಯ ಆರಂಭ: ಸಂಜೆ 7.30ಕ್ಕೆ, 
ನೇರ ಪ್ರಸಾರ: ಸ್ಟಾರ್‌ ಸ್ಪೋರ್ಟ್ಸ್‌

ಏಷ್ಯನ್‌ ಚಾಂಪಿಯನ್ಸ್‌ ಹಾಕಿ: ಭಾರತಕ್ಕೆ ಥಾಯ್ಲೆಂಡ್‌ ಸವಾಲು

ಡೊಂಗೇ(ಡಿ.05): 6ನೇ ಆವೃತ್ತಿಯ ಮಹಿಳಾ ಏಷ್ಯನ್‌ ಚಾಂಪಿಯನ್ಸ್‌ ಟ್ರೋಫಿ (Asian Champions Trophy) ಭಾನುವಾರದಿಂದ ಆರಂಭವಾಗಲಿದ್ದು, ಮಾಜಿ ಚಾಂಪಿಯನ್‌ ಭಾರತ ಮೊದಲ ಪಂದ್ಯದಲ್ಲಿ ಥಾಯ್ಲೆಂಡ್‌ ವಿರುದ್ಧ ಸೆಣಸಲಿದೆ. 

Junior Hockey World Cup: ಸೆಮೀಸ್‌ನಲ್ಲಿ ಹಾಲಿ ಚಾಂಪಿಯನ್‌ ಭಾರತಕ್ಕೆ ಶಾಕ್‌..!

ಟೋಕಿಯೋ ಒಲಿಂಪಿಕ್ಸ್‌ ಬಳಿಕ ಮಹಿಳಾ ತಂಡಕ್ಕೆ ಇದು ಮೊದಲ ಟೂರ್ನಿಯಾಗಿದ್ದು, ರಾಣಿ ರಾಂಪಾಲ್‌ (Rani Rampal) ಅನುಪಸ್ಥಿತಿಯಲ್ಲಿ ಗೋಲ್‌ಕೀಪರ್‌ ಸವಿತಾ ಪೂನಿಯಾ (Savita Punia) ತಂಡವನ್ನು ಮುನ್ನಡೆಸಲಿದ್ದಾರೆ. ಭಾರತ ಡಿಸೆಂಬರ್ 6ಕ್ಕೆ ಮಲೇಷ್ಯಾ, ಡಿಸೆಂಬರ್ 8ಕ್ಕೆ ಹಾಲಿ ಚಾಂಪಿಯನ್‌ ದಕ್ಷಿಣ ಕೊರಿಯಾ, ಡಿಸೆಂಬರ್ 9 ಹಾಗೂ ಡಿಸೆಂಬರ್ 11ರಂದು ಕ್ರಮವಾಗಿ ಚೀನಾ ಹಾಗೂ ಜಪಾನ್‌ ವಿರುದ್ಧ ಆಡಲಿದೆ. ಅಗ್ರ 2 ತಂಡಗಳು ಡಿಸೆಂಬರ್ 12ರಂದು ಫೈನಲ್‌ನಲ್ಲಿ ಸೆಣಸಲಿವೆ.

ಕಾಮನ್‌ವೆಲ್ತ್‌ ಗೇಮ್ಸ್‌ಗೆ ಭಾರತದ ಹಾಕಿ ತಂಡಗಳು

ನವದೆಹಲಿ: ಮುಂದಿನ ವರ್ಷ ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆಯಲಿರುವ ಕಾಮನ್‌ವೆಲ್ತ್‌ ಗೇಮ್ಸ್‌ಗೆ (Birmingham Commonwealth Games) ಅರ್ಹತೆ ಪಡೆದರೆ ಭಾರತದ ಹಾಕಿ ತಂಡಗಳು (Indian Hockey Teams) ಕೂಟದಲ್ಲಿ ಪಾಲ್ಗೊಳ್ಳಲಿವೆ ಎಂದು ಕಾಮನ್‌ವೆಲ್ತ್‌ ಗೇಮ್ಸ್‌ ಫೆಡರೇಶನ್‌ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ. ಐಒಎ ಅಧ್ಯಕ್ಷ ನರೀಂದರ್‌ ಬಾತ್ರಾ ಹಾಗೂ ಕೇಂದ್ರ ಕ್ರೀಡಾ ಸಚಿವ ಅನುರಾಗ್‌ ಠಾಕೂರ್‌ (Anurag Thakur) ಅವರ ಮಧ್ಯಸ್ಥಿಕೆಯ ಬಳಿಕ ಈ ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗಿದೆ. 

ಕಾಮನ್‌ವೆಲ್ತ್‌ ಗೇಮ್ಸ್‌ನಿಂದ ಹಿಂದೆ ಸರಿದ ಭಾರತ ಹಾಕಿ ತಂಡ..!

ಕಾಮನ್‌ವೆಲ್ತ್‌ ಗೇಮ್ಸ್‌ ಮುಗಿದ 32 ದಿನಗಳಲ್ಲಿ ಏಷ್ಯನ್‌ ಗೇಮ್ಸ್‌ ಆರಂಭಗೊಳ್ಳಲಿದೆ. ಏಷ್ಯನ್‌ ಗೇಮ್ಸ್‌ (Asian Games 2024), 2024ರ ಒಲಿಂಪಿಕ್ಸ್‌ಗೆ ಅರ್ಹತಾ ಟೂರ್ನಿಯಾಗಿರುವ ಕಾರಣ ಆ ಟೂರ್ನಿ ಮೇಲೆ ಗಮನ ಹರಿಸುವುದಾಗಿ ಹಾಕಿ ಇಂಡಿಯಾ (Hockey India) ತಿಳಿಸಿತ್ತು. ಕಾಮನ್‌ವೆಲ್ತ್‌ ಗೇಮ್ಸ್‌ ಜುಲೈ 28ರಿಂದ ಅಕ್ಟೋಬರ್ 8ರವರೆಗೆ ನಡೆಯಲಿದೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಜೋಹರ್‌ ಕಪ್: ಹಾಕಿ ಪಂದ್ಯದಲ್ಲಿ ಭಾರತ-ಪಾಕ್‌ ಹ್ಯಾಂಡ್‌ಶೇಕ್‌!
ಕ್ರಿಕೆಟ್ ಆಯ್ತು, ಈಗ ಭಾರತ-ಪಾಕ್ ಹಾಕಿಯಲ್ಲೂ ನೋ ಹ್ಯಾಂಡ್ ಶೇಕ್ ?