
ಬೆಂಗಳೂರು(ಮೇ.25): ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ, ಅಥ್ಲೇಟಿಕ್ಸ್ ದಂತಕಥೆ ಪಿ.ಟಿ. ಉಷಾ, ಒಲಿಂಪಿಕ್ ಚಾಂಪಿಯನ್ ಅಭಿನವ್ ಬಿಂದ್ರಾ ಸೇರಿದಂತೆ ಕ್ರೀಡಾ ಕ್ಷೇತ್ರದ ಹಲವು ದಿಗ್ಗಜರು ಸೋಮವಾರ(ಮೇ.25) ನಿಧನರಾದ ಹಾಕಿ ಲೆಜೆಂಡ್ ಬಲ್ಬೀರ್ ಸಿಂಗ್ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ನುಡಿನಮನ ಸಲ್ಲಿಸಿದ್ದಾರೆ.
ಮೂರು ಬಾರಿ ಒಲಿಂಪಿಕ್ಸ್ ಚಿನ್ನದ ಪದಕ ವಿಜೇತ ಹಾಕಿ ಆಟಗಾರ ಬಲ್ಬೀರ್ ಸಿಂಗ್(95) ಇಂದು ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಬಲ್ಬೀರ್ 1948, 1952 ಹಾಗೂ 1956ರಲ್ಲಿ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಪಾಲ್ಗೊಂಡು ಚಿನ್ನದ ಪದಕಕ್ಕೆ ಕೊರಳೊಡ್ಡಿದ್ದರು. ಇನ್ನು 1971ರಲ್ಲಿ ಭಾರತ ತಂಡದ ಕೋಚ್ ಆಗಿಯೂ ಕಾರ್ಯ ನಿರ್ವಹಿಸಿದ್ದರು. ಈ ವೇಳೆ ಒಲಿಂಪಿಕ್ಸ್‌ನಲ್ಲಿ ಭಾರತ ಕಂಚಿನ ಪದಕ ಗೆದ್ದುಕೊಂಡಿತ್ತು. 1975ರಲ್ಲಿ ಭಾರತ ತಂಡ ಹಾಕಿ ವಿಶ್ವಕಪ್ ಚಾಂಪಿಯನ್ ಪಟ್ಟ ಅಲಂಕರಿಸಿತ್ತು. ಈ ವೇಳೆ ಬಲ್ಬೀರ್ ತಂಡದ ಮ್ಯಾನೇಜರ್ ಆಗಿ ಕಾರ್ಯನಿರ್ವಹಿಸಿದ್ದರು.
ಭಾರತದ ಹಾಕಿ ದಿಗ್ಗಜ ಬಲ್ಬೀರ್ ಸಿಂಗ್ ಇನ್ನಿಲ್ಲ..!
ಬಲ್ಬೀರ್ ಸಿಂಗ್ ಸೀನಿಯರ್ ನಿಧನಕ್ಕೆ ಕ್ರೀಡಾಕ್ಷೇತ್ರದ ಮೂಲೆ ಮೂಲೆಗಳಿಂದ ಸಂತಾಪ ವ್ಯಕ್ತವಾಗಿದೆ. ಸಚಿನ್ ತೆಂಡುಲ್ಕರ್ ಬಲ್ಬೀರ್ ನಿಧನಕ್ಕೆ ಕಂಬನಿ ಮಿಡಿದಿದ್ದು, ಅವರ ಸ್ನೇಹಿತರಿಗೆ ಹಾಗೂ ಕುಟುಂಬಕ್ಕೆ ದೇವರು ಅಗಲಿಕೆಯ ನೋವು ಭರಿಸುವ ಶಕ್ತಿ ನೀಡಲಿ ಎಂದು ಟ್ವೀಟ್ ಮಾಡಿದ್ದಾರೆ.
ಇನ್ನುಳಿದಂತೆ ವಿರಾಟ್ ಕೊಹ್ಲಿ, ಹರ್ಭಜನ್ ಸಿಂಗ್, ಪಿ.ಟಿ. ಉಷಾ, ಅಭಿನವ್ ಬಿಂದ್ರಾ ಸೇರಿದಂತೆ ಹಲವು ಕ್ರೀಡಾ ತಾರೆಯರು ಟ್ವೀಟ್ ಮೂಲಕ ನುಡಿನಮನ ಅರ್ಪಿಸಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.