ಬಾಂಗ್ಲಾ ಮಣಿಸಿದರೆ ಅಪರೂಪದ ದಾಖಲೆ ಬರೆಯಲಿದೆ ದಕ್ಷಿಣ ಆಫ್ರಿಕಾ..!

By Web DeskFirst Published Jun 2, 2019, 8:30 PM IST
Highlights

ವಿಶ್ವಕಪ್ ಟೂರ್ನಿಯಲ್ಲಿ ಬಾಂಗ್ಲಾದೇಶ ಇದೇ ಮೊದಲ ಬಾರಿಗೆ 330 ರನ್ ಬಾರಿಸಿದ್ದು, ದಕ್ಷಿಣ ಆಫ್ರಿಕಾ ತಂಡಕ್ಕೆ ಸವಾಲಿನ ಗುರಿ ನೀಡಿದೆ. ಒಂದು ವೇಳೆ ದಕ್ಷಿಣ ಆಫ್ರಿಕಾ ಗುರಿ ಬೆನ್ನಟ್ಟುವಲ್ಲಿ ಯಶಸ್ವಿಯಾದರೆ, ವಿಶ್ವಕಪ್ ಟೂರ್ನಿ ಇತಿಹಾಸದಲ್ಲಿ ಹೊಸ ವಿಶ್ವದಾಖಲೆ ಬರೆಯಲಿದೆ. ಈ ಕುರಿತ ವರದಿ ಇಲ್ಲಿದೆ ನೋಡಿ... 

ಲಂಡನ್[ಜೂ.02]: ಬಾಂಗ್ಲಾದೇಶ ಸಂಘಟಿತ ಬ್ಯಾಟಿಂಗ್ ಪ್ರದರ್ಶನದ ನೆರವಿನಿಂದ ಬೃಹತ್ ಮೊತ್ತ ಕಲೆಹಾಕಿದ್ದು, ದಕ್ಷಿಣ ಆಫ್ರಿಕಾ ತಂಡಕ್ಕೆ ಗೆಲ್ಲಲು 331 ರನ್‌ಗಳ ಗುರಿ ನೀಡಿದೆ. ಒಂದು ವೇಳೆ ಈ ಪಂದ್ಯವನ್ನು ಜಯಿಸಿದರೆ ಫಾಫ್ ಡುಪ್ಲೆಸಿಸ್ ಪಡೆ ವಿಶ್ವಕಪ್ ಟೂರ್ನಿಯಲ್ಲಿ ಅಪರೂಪದ ವಿಶ್ವದಾಖಲೆ ದಾಖಲೆ ಬರೆಯಲಿದೆ.

ಬಾಂಗ್ಲಾದೇಶ ಇದೇ ಮೊದಲ ಬಾರಿಗೆ ಏಕದಿನ ಕ್ರಿಕೆಟ್’ನಲ್ಲಿ ಗರಿಷ್ಠ [330]ರನ್ ಕಲೆಹಾಕಿದ ಸಾಧನೆ ಮಾಡಿದೆ. [ಈ ಮೊದಲು 2015ರಲ್ಲಿ ಪಾಕಿಸ್ತಾನ ಎದುರು 329 ರನ್ ಕಲೆಹಾಕಿತ್ತು]. ಶಕೀಬ್ ಅಲ್ ಹಸನ್, ಮುಷ್ಫಿಕರ್ ರಹೀಮ್ ಆಕರ್ಷಕ ಶತಕದ ಜತೆಯಾಟ, ಮೊಹಮ್ಮದುಲ್ಲಾ ಸ್ಫೋಟಕ ಬ್ಯಾಟಿಂಗ್ ಮೂಲಕ ವಿಶ್ವಕಪ್ ಟೂರ್ನಿಯಲ್ಲಿ ತಾನಾಡುತ್ತಿರುವ ಮೊದಲ ಪಂದ್ಯದಲ್ಲೇ ಬೃಹತ್ ಮೊತ್ತ ಕಲೆಹಾಕಿದೆ. ಆದರೆ ಪಂದ್ಯವನ್ನು ದಕ್ಷಿಣ ಆಫ್ರಿಕಾ ತಂಡ ಜಯಿಸಿದ್ದೇ ಆದರೆ ವಿಶ್ವಕಪ್ ಟೂರ್ನಿಯಲ್ಲಿ ಹೊಸ ಇತಿಹಾಸ ಬರೆಯಲಿದೆ.

ಹರಿಣಗಳಿಗೆ ಕಠಿಣ ಗುರಿ ನೀಡಿದ ಬಾಂಗ್ಲಾ ಹುಲಿಗಳು..!

ಹೌದು, ಒಂದು ವೇಳೆ ಫಾಫ್ ಡುಪ್ಲೆಸಿಸ್ ನೇತೃತ್ವದ ದಕ್ಷಿಣ ಆಫ್ರಿಕಾ ತಂಡ 331 ರನ್’ಗಳ ಗುರಿ ಮುಟ್ಟಿದರೆ, ವಿಶ್ವಕಪ್ ಟೂರ್ನಿಯಲ್ಲಿ ಗರಿಷ್ಠ ರನ್ ಬೆನ್ನಟ್ಟಿ ಯಶಸ್ವಿಯಾದ ಮೊದಲ ತಂಡ ಎನಿಸಿಕೊಳ್ಳಲಿದೆ. ಈ ಮೊದಲು 2011ರ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಐರ್ಲೆಂಡ್ ತಂಡ 328 ರನ್’ಗಳ ಗುರಿಯನ್ನು ಯಶಸ್ವಿಯಾಗಿ ಚೇಸ್ ಮಾಡಿತ್ತು. ಬೆಂಗಳೂರಿನಲ್ಲಿ ಇಂಗ್ಲೆಂಡ್ ವಿರುದ್ಧ ನಡೆದ ಪಂದ್ಯದಲ್ಲಿ ಕೆವಿನ್ ಒಬ್ರಿಯಾನ್ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ಇಂಗ್ಲೆಂಡ್ ನೀಡಿದ್ದ ಗುರಿಯನ್ನು ಯಶಸ್ವಿಯಾಗಿ ಚೇಸ್ ಮಾಡಿತ್ತು. 

ವಿಶ್ವಕಪ್ ಟೂರ್ನಿಯ ಎಲ್ಲಾ ಮಾಹಿತಿಗಳಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ

ಬೃಹತ್ ಮೊತ್ತ ಚೇಸ್ ಮಾಡುವುದು ದಕ್ಷಿಣ ಆಫ್ರಿಕಾಕ್ಕೆ ಹೊಸದೇನಲ್ಲ: 

ಏಕದಿನ ಕ್ರಿಕೆಟ್’ನಲ್ಲಿ ಗರಿಷ್ಠ ರನ್ ಕಲೆಹಾಕಿದ ದಾಖಲೆ ದಕ್ಷಿಣ ಆಫ್ರಿಕಾ ತಂಡದ ಹೆಸರಿನಲ್ಲಿಯೇ ಇದೆ. 2006ರಲ್ಲಿ ಆಸ್ಟ್ರೇಲಿಯಾ ವಿರುದ್ಧ ಜೊಹಾನ್ಸ್‌ಬರ್ಗ್’ನಲ್ಲಿ ನಡೆದ ಪಂದ್ಯದಲ್ಲಿ ಗರಿಷ್ಠ ರನ್ ಗುರಿ ಮುಟ್ಟಿದ ದಾಖಲೆ ಬರೆದಿತ್ತು. ಮೊದಲು ಬ್ಯಾಟಿಂಗ್ ಮಾಡಿದ್ದ ಆಸ್ಟ್ರೇಲಿಯಾ ನಿಗದಿತ 50 ಓವರ್’ಗಳಲ್ಲಿ 434 ರನ್ ಬಾರಿಸಿತ್ತು. ಆ ಬಳಿಕ ಗುರಿ ಬೆನ್ನಟ್ಟಿದ ದಕ್ಷಿಣ ಆಫ್ರಿಕಾ, ಹರ್ಷಲ್ ಗಿಬ್ಸ್ ಆಕರ್ಷಕ ಶತಕದ ನೆರವಿನಿಂದ 49.5 ಓವರ್‌ಗಳಲ್ಲಿ 438 ರನ್ ಬಾರಿಸುವ ಮೂಲಕ ಗೆದ್ದು ಬೀಗಿತ್ತು. 

ಇಂದೂ ಕೂಡಾ ಅಂತಹದ್ದೇ ಪ್ರದರ್ಶನ ಹರಿಣಗಳ ಪಡೆಯಿಂದ ಮೂಡಿ ಬರುತ್ತಾ ಎನ್ನುವುದನ್ನು ಕಾದು ನೋಡಬೇಕಿದೆ. ಯಾಕೆಂದರೆ ದಕ್ಷಿಣ ಆಫ್ರಿಕಾ ಇದೀಗ 19 ಓವರ್ ಮುಕ್ತಾಯದ ವೇಳೆಗೆ ಒಂದು ವಿಕೆಟ್ ಕಳೆದುಕೊಂಡು 100 ರನ್ ಬಾರಿಸಿದ್ದು, ಇನ್ನೂ 231 ರನ್ ಬಾರಿಸಬೇಕಿದೆ. 

ವಿಶ್ವಕಪ್ ಟೂರ್ನಿಯ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ ನೋಡಿ..

click me!