ವಿಶ್ವಕಪ್ 2019: ಸೆಂಚುರಿ ಸಿಡಿಸಿ ದಾಖಲೆ ಬರೆದ ರೋಹಿತ್!

Published : Jun 05, 2019, 10:11 PM IST
ವಿಶ್ವಕಪ್ 2019: ಸೆಂಚುರಿ ಸಿಡಿಸಿ ದಾಖಲೆ ಬರೆದ ರೋಹಿತ್!

ಸಾರಾಂಶ

ವಿಶ್ವಕಪ್ ಟೂರ್ನಿಯ ಮೊದಲ ಪಂದ್ಯದಲ್ಲಿ ರೋಹಿತ್ ಶರ್ಮಾ ಸೆಂಚುರಿ ಸಿಡಿಸಿ ಮಿಂಚಿದ್ದಾರೆ. ಸೌತ್ಆಫ್ರಿಕಾ ವಿರುದ್ಧ ಸಿಡಿಸಿದ ರೋಹಿತ್ ಸೆಂಚುರಿ ಹೈಲೈಟ್ಸ್ ಇಲ್ಲಿದೆ. 

ಸೌಥಾಂಪ್ಟನ್(ಜೂ.05): ವಿಶ್ವಕಪ್ ಟೂರ್ನಿಯ ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾದ ಹಿಟ್ ಮ್ಯಾನ್ ರೋಹಿತ್ ಶರ್ಮಾ ಶತಕ ಸಿಡಿಸಿ ಅಬ್ಬರಿಸಿದ್ದಾರೆ. ಸೌತ್ಆಫ್ರಿಕಾ ವಿರುದ್ದದ ಪಂದ್ಯದಲ್ಲಿ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿದ ರೋಹಿತ್ ಏಕದಿನ ಕ್ರಿಕೆಟ್‌ನಲ್ಲಿ 23ನೇ ಸೆಂಚುರಿ ಸಿಡಿಸಿ ದಾಖಲೆ ಬರೆದರು. ವಿಶ್ವಕಪ್ ಟೂರ್ನಿಯಲ್ಲಿ ರೋಹಿತ್ ಶರ್ಮಾಗಿದು 2ನೇ ಶತಕ.

ಸೌತ್ಆಫ್ರಿಕಾ ನೀಡಿದ 228 ರನ್ ಟಾರ್ಗೆಟ್ ಬೆನ್ನಟ್ಟುತ್ತಿದ್ದ ಟೀಂ ಇಂಡಿಯಾಗೆ ರೋಹಿತ್ ಶರ್ಮಾ ಉತ್ತಮ ಹೋರಾಟ ನೀಡಿದರು. ಹರಿಣಗಳ ದಾಳಿಗೆ ದಿಟ್ಟ ಹೋರಾಟ ನೀಡಿದ ರೋಹಿತ್ ಸೆಂಚುರಿ ಸಿಡಿಸಿ ಮಿಂಚಿದರು. 128 ಎಸೆತದಲ್ಲಿ ರೋಹಿತ್ ಶರ್ಮಾ ಸೆಂಚುರಿ ಪೂರೈಸಿದರು. ರೋಹಿತ್ ಶತಕದಲ್ಲಿ 10 ಬೌಂಡರಿ ಹಾಗೂ 2 ಸಿಕ್ಸರ್ ಒಳಗೊಂಡಿತ್ತು. 

PREV
click me!

Recommended Stories

ವಿಶ್ವಕಪ್ ಫೈನಲ್ ವಿವಾದಾತ್ಮಕ ತೀರ್ಪು; ಮೌನ ಮುರಿದ ಅಂಪೈರ್ ಧರ್ಮಸೇನಾ!
ವಿಶ್ವಕಪ್ ಫೈನಲ್ ಗೆಲುವು ನ್ಯಾಯವಲ್ಲ; ಇಂಗ್ಲೆಂಡ್ ನಾಯಕ ವಿಷಾದ!