ವಿಶ್ವಕಪ್ 2019: ಬಾಂಗ್ಲಾ ವಿರುದ್ಧ ಟಾಸ್ ಗೆದ್ದ ದ. ಆಫ್ರಿಕಾ ಫೀಲ್ಡಿಂಗ್ ಆಯ್ಕೆ

Published : Jun 02, 2019, 02:42 PM ISTUpdated : Jul 01, 2019, 04:42 PM IST
ವಿಶ್ವಕಪ್ 2019: ಬಾಂಗ್ಲಾ ವಿರುದ್ಧ ಟಾಸ್ ಗೆದ್ದ ದ. ಆಫ್ರಿಕಾ ಫೀಲ್ಡಿಂಗ್ ಆಯ್ಕೆ

ಸಾರಾಂಶ

ದಕ್ಷಿಣ ಆಫ್ರಿಕಾ-ಬಾಂಗ್ಲಾದೇಶ ನಡುವಿನ ಪಂದ್ಯದಲ್ಲಿ ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ಫೀಲ್ಡಿಂಗ್ ಆಯ್ದುಕೊಂಡಿದೆ.  ಆಫ್ರಿಕಾ ತಂಡದಲ್ಲಿ 2 ಬದಲಾವಣೆ ಮಾಡಲಾಗಿದೆ.

ಲಂಡನ್[ಜೂ.02]: ದಕ್ಷಿಣ ಆಫ್ರಿಕಾ-ಬಾಂಗ್ಲಾದೇಶ ನಡುವಿನ ಪಂದ್ಯದಲ್ಲಿ ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ಫಿಲ್ಡಿಂಗ್ ಆಯ್ದುಕೊಂಡಿದೆ. ದಕ್ಷಿಣ ಆಫ್ರಿಕಾ ತಂಡದಲ್ಲಿ ಎರಡು ಬದಲಾವಣೆ ಮಾಡಲಾಗಿದೆ.

ದಕ್ಷಿಣ ಆಫ್ರಿಕಾ ತಂಡಕ್ಕೆ ಡೇವಿಡ್ ಮಿಲ್ಲರ್ ಹಾಗೂ ಕ್ರಿಸ್ ಮೋರಿಸ್ ಸೇರ್ಪಡೆಗೊಂಡಿದ್ದು, ಹಾಶೀಂ ಆಮ್ಲಾಗೆ ವಿಶ್ರಾಂತಿ ನೀಡಲಾಗಿದೆ. 

ಈಗಾಗಲೇ ಆತಿಥೇಯ ಇಂಗ್ಲೆಂಡ್ ವಿರುದ್ಧ ಉದ್ಘಾಟನಾ ಪಂದ್ಯದಲ್ಲಿ ಮುಗ್ಗರಿಸಿದ್ದ ದಕ್ಷಿಣ ಆಫ್ರಿಕಾ ಗೆಲುವಿನ ಹಳಿಗೆ ಮರಳಲು ಎದುರು ನೋಡುತ್ತಿದ್ದರೆ, ಬಾಂಗ್ಲಾದೇಶ ಬಲಿಷ್ಠ ಹರಿಣಗಳ ಪಡೆಗೆ ಆಘಾತ ನೀಡಿ ಗೆಲುವಿನೊಂದಿಗೆ ವಿಶ್ವಕಪ್ ಅಭಿಯಾನ ಆರಂಭಿಸುವ ಕನವರಿಕೆಯಲ್ಲಿದೆ. ಇದು ದಕ್ಷಿಣ ಆಫ್ರಿಕಾ ಅನುಭವಿ ಸ್ಪಿನ್ನರ್ ಇಮ್ರಾನ್ ತಾಹಿರ್ ನೂರನೇ ಏಕದಿನ ಪಂದ್ಯವಾಗಿದ್ದು ಮಿಂಚುವ ವಿಶ್ವಾಸದಲ್ಲಿದ್ದಾರೆ. ಈ ಪಂದ್ಯದಲ್ಲೂ ಡೇಲ್ ಸ್ಟೇನ್ ಕಣಕ್ಕಿಳಿಯುತ್ತಿಲ್ಲ.

2007ರ ಏಕದಿನ ವಿಶ್ವಕಪ್ ಟೂರ್ನಿಯಲ್ಲೂ ಬಾಂಗ್ಲಾದೇಶ ತಂಡವು ದಕ್ಷಿಣ ತಂಡಕ್ಕೆ ಸೋಲಿನ ಕಹಿ ಉಣಿಸಿತ್ತು. ಇದೀಗ ಇತಿಹಾಸ ಮರುಕಳಿಸುತ್ತಾ ಎನ್ನುವುದನ್ನು ಕಾದು ನೋಡಬೇಕಿದೆ.

ತಂಡಗಳು ಹೀಗಿವೆ:

ಬಾಂಗ್ಲಾದೇಶ:

ದಕ್ಷಿಣ ಆಫ್ರಿಕಾ:

PREV
click me!

Recommended Stories

ವಿಶ್ವಕಪ್ ಫೈನಲ್ ವಿವಾದಾತ್ಮಕ ತೀರ್ಪು; ಮೌನ ಮುರಿದ ಅಂಪೈರ್ ಧರ್ಮಸೇನಾ!
ವಿಶ್ವಕಪ್ ಫೈನಲ್ ಗೆಲುವು ನ್ಯಾಯವಲ್ಲ; ಇಂಗ್ಲೆಂಡ್ ನಾಯಕ ವಿಷಾದ!