ಆಸ್ಟ್ರೇಲಿಯಾ ಮಣಿಸಿದ ಇಂಗ್ಲೆಂಡ್‌ಗೆ ವಿಶ್ವಕಪ್ ಫೈನಲ್ ಟಿಕೆಟ್!

Published : Jul 11, 2019, 09:46 PM ISTUpdated : Jul 12, 2019, 12:56 PM IST
ಆಸ್ಟ್ರೇಲಿಯಾ ಮಣಿಸಿದ ಇಂಗ್ಲೆಂಡ್‌ಗೆ ವಿಶ್ವಕಪ್ ಫೈನಲ್ ಟಿಕೆಟ್!

ಸಾರಾಂಶ

ವಿಶ್ವಕಪ್ ಟೂರ್ನಿ ಸೆಮಿಫೈನಲ್ ಹೋರಾಟ ಅಂತ್ಯಗೊಂಡಿದೆ. 2ನೇ ಸಮೀಸ್ ಹೋರಾಟದಲ್ಲಿ ಆಸ್ಟ್ರೇಲಿಯಾ ಮಣಿಸಿದ ಇಂಗ್ಲೆಂಡ್ ಫೈನಲ್ ಪ್ರವೇಶಿಸಿದೆ. ಮಹತ್ವದ ಹೋರಾಟದಲ್ಲಿ ದಿಟ್ಟ ಪ್ರದರ್ಶನ ನೀಡಿದ ಇಂಗ್ಲೆಂಡ್ ಗೆಲುವಿನ ಸಂಭ್ರಮ ಆಚರಿಸಿದೆ. 

ಬರ್ಮಿಂಗ್‌ಹ್ಯಾಮ್(ಜು.11): ವಿಶ್ವಕಪ್ ಟೂರ್ನಿಯ ಸೆಮಿಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವನ್ನು ಮಣಿಸಿದ ಆತಿಥೇಯ ಇಂಗ್ಲೆಂಡ್ ಫೈನಲ್ ಟಿಕೆಟ್ ಗಿಟ್ಟಿಸಿಕೊಂಡಿದೆ. ಈ ಮೂಲಕ ಜುಲೈ 14 ರಂದು ಲಾರ್ಡ್ಸ್ ಮೈದಾನದಲ್ಲಿ ನಡೆಯಲಿರುವ ಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ಹಾಗೂ ನ್ಯೂಜಿಲೆಂಡ್ ಪ್ರಶಸ್ತಿಗಾಗಿ ಹೋರಾಟ ನಡೆಸಲಿದೆ.  ಇಂಗ್ಲೆಂಡ್ ವಿರುದ್ದ ಮುಗ್ಗರಿಸಿದ ಆಸ್ಟ್ರೇಲಿಯಾ ಇದೇ ಮೊದಲ ಬಾರಿಗೆ ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ ಮುಗ್ಗರಿಸಿದೆ.

"

ಗೆಲುವಿಗೆ 224 ರನ್ ಟಾರ್ಗೆಟ್ ಪಡೆದ ಇಂಗ್ಲೆಂಡ್ ಆರಂಭದಲ್ಲೇ ಗೆಲುವಿನ ಸೂಚನೆ ನೀಡಿತು. ಜೇಸನ್ ರಾಯ್ ಹಾಗೂ ಜಾನಿ ಬೈರ್‌ಸ್ಟೋ ಜೊತೆಯಾಟ ಆಸ್ಟ್ರೇಲಿಯಾದ ಕೊನೆಯ ಆಸೆಯನ್ನೂ ನುಚ್ಚು ನೂರು ಮಾಡಿತು. ಕಾರಣ ಈ ಜೋಡಿ ಮೊದಲ ವಿಕೆಟ್‌ಗೆ 124 ರನ್ ಜೊತೆಯಾಟ ನೀಡಿತು. ಬೈರ್‌ಸ್ಟೋ 34 ರನ್ ಸಿಡಿಸಿ ಔಟಾದರು. ಆಸೀಸ್ ಮೊದಲ ವಿಕೆಟ್ ಕಬಳಿಸಿದರೂ ಸಂಭ್ರಮ ಇರಲಿಲ್ಲ.

ಸ್ಫೋಟಕ ಬ್ಯಾಟಿಂಗ್ ಪ್ರದರ್ಶನ ನೀಡಿದ ಜೇಸನ್ ರಾಯ್ 85 ರನ್ ಕಾಣಿಕೆ ನೀಡಿದರು. ಈ ಮೂಲಕ ಇಂಗ್ಲೆಂಡ್ ಗೆಲುವಿನ ಹಾದಿಯನ್ನು ಸುಗಮಗೊಳಿಸಿದರು. ಜೋ ರೂಟ್ ಹಾಗೂ ನಾಯಕ ಇಯಾನ್ ಮಾರ್ಗನ್ ಆಸ್ಟ್ರೇಲಿಯಾ ಸೆಮಿಫೈನಲ್ ಉಸಿರಾಟವನ್ನೇ  ನಿಲ್ಲಿಸಿದರು. ರೂಟ್ ಅಜೇಯ 48 ರನ್ ಹಾಗೂ ಮಾರ್ಗನ್ ಅಜೇಯ 45 ರನ್ ಸಿಡಿಸಿದರು. ಈ ಮೂಲಕ ಇಂಗ್ಲೆಂಡ್ 32.1 ಓವರ್‌ಗಳಲ್ಲಿ 2 ವಿಕೆಟ್ ಕಳೆದುಕೊಂಡು ಗುರಿ ತಲುಪಿತು.

ಇಂಗ್ಲೆಂಡ್ 8 ವಿಕೆಟ್ ಗೆಲುವಿನೊಂದಿಗೆ ವಿಶ್ವಕಪ್ ಫೈನಲ್ ಪ್ರವೇಶಿಸಿತು. ಇದೀಗ ಇಂಗ್ಲೆಂಡ್ ಹಾಗೂ ನ್ಯೂಜಿಲೆಂಡ್ ಫೈನಲ್ ಪಂದ್ಯದಲ್ಲಿ ಮುಖಾಮುಖಿಯಾಗಲಿದೆ. ಈ ಪಂದ್ಯದಲ್ಲಿ ಯಾರು ಗೆದ್ದರು ಇತಿಹಾಸ ನಿರ್ಮಾಣವಾಗಲಿದೆ. ಮೊದಲ ಬಾರಿಗೆ ವಿಶ್ವಕಪ್ ಟ್ರೋಫಿ ಗೆಲ್ಲೋ ಸುವರ್ಣ ಅವಕಾಶ ಇಂಗ್ಲೆಂಡ್ ಹಾಗೂ ನ್ಯೂಜಿಲೆಂಡ್ ತಂಡಕ್ಕಿದೆ. ಇತ್ತ ಸೋಲಿನೊಂದಿಗೆ ಆಸ್ಟ್ರೇಲಿಯಾ ಟೂರ್ನಿಯಿಂದ ಹೊರಬಿತ್ತು. 

PREV
click me!

Recommended Stories

ವಿಶ್ವಕಪ್ ಫೈನಲ್ ವಿವಾದಾತ್ಮಕ ತೀರ್ಪು; ಮೌನ ಮುರಿದ ಅಂಪೈರ್ ಧರ್ಮಸೇನಾ!
ವಿಶ್ವಕಪ್ ಫೈನಲ್ ಗೆಲುವು ನ್ಯಾಯವಲ್ಲ; ಇಂಗ್ಲೆಂಡ್ ನಾಯಕ ವಿಷಾದ!