ಇಂಗ್ಲೆಂಡ್ vs ನ್ಯೂಜಿಲೆಂಡ್ ವಿಶ್ವಕಪ್ ಫೈನಲ್; ಯಾರೂ ಗೆದ್ದರೂ ಇತಿಹಾಸ!

By Web Desk  |  First Published Jul 12, 2019, 10:45 AM IST

ವಿಶ್ವಕಪ್ ಟೂರ್ನಿ ಫೈನಲ್ ಪಂದ್ಯಕ್ಕೆ ಕೌಂಟ್‌ಡೌನ್ ಶುರುವಾಗಿದೆ. ಇಂಗ್ಲೆಂಡ್ ಹಾಗೂ ನ್ಯೂಜಿಲೆಂಡ್ ತಂಡ ಪ್ರಶಸ್ತಿಗಾಗಿ ಹೋರಾಟ ನಡೆಸಲಿದೆ. ಈ ಬಾರಿ ಯಾರು ಪ್ರಶಸ್ತಿ ಗೆದ್ದರು ಇತಿಹಾಸ ನಿರ್ಮಾಣವಾಗಲಿದೆ.


ಬರ್ಮಿಂಗ್‌ಹ್ಯಾಮ್(ಜು.12): ವಿಶ್ವಕಪ್ ಟೂರ್ನಿಯಲ್ಲಿ ಆತಿಥೇಯ ಇಂಗ್ಲೆಂಡ್ ಹಾಗೂ ನ್ಯೂಜಿಲೆಂಡ್ ಫೈನಲ್ ಪ್ರವೇಶಿಸಿದೆ. ನ್ಯೂಜಿಲೆಂಡ್ ಸತತ 2ನೇ ಬಾರಿಗೆ ಫೈನಲ್ ಪ್ರವೇಶಿಸಿದ ಸಾಧನೆ ಮಾಡಿದ್ದರೆ, ಇಂಗ್ಲೆಂಡ್ 1992ರ ಬಳಿಕ ಫೈನಲ್ ಪ್ರವೇಶಿಸಿದೆ. ಬರೋಬ್ಬರಿ 27 ವರ್ಷ(9969 ದಿನ)ಗಳ ಬಳಿಕ ತಂಡ ಫೈನಲ್‌ಗೇರಿದೆ. 92ರ ಫೈನಲ್‌ನಲ್ಲಿ ಪಾಕಿಸ್ತಾನ ವಿರುದ್ಧ ಸೋತಿದ್ದ ಇಂಗ್ಲೆಂಡ್‌, ಈ ಬಾರಿ ಟ್ರೋಫಿ ಎತ್ತಿಹಿಡಿಯುವ ವಿಶ್ವಾಸದಲ್ಲಿದೆ.

ಇದನ್ನೂ ಓದಿ: ವಿಶ್ವಕಪ್‌ನಲ್ಲಿ ಐಪಿಎಲ್‌ ಮಾದರಿ ಅಳವಡಿಸಲು ಕೊಹ್ಲಿ ಇಂಗಿತ!

Latest Videos

undefined

ಇಂಗ್ಲೆಂಡ್ ಹಾಗೂ ನ್ಯೂಜಿಲೆಂಡ್ ಇದುವರೆಗೂ ವಿಶ್ವಕಪ್ ಟ್ರೋಫಿ ಗೆದ್ದಿಲ್ಲ. ಕಳೆದ ಬಾರಿ ನ್ಯೂಜಿಲೆಂಡ್  ತಂಡಕ್ಕೆ ಟ್ರೋಫಿ ಗೆಲ್ಲೋ ಅವಕಾಶವಿತ್ತ. ಆದರೆ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ದ ಸೋಲು ಅನುಭವಿಸೋ  ಮೂಲಕ ರನ್ನರ್ ಅಪ್ ಪ್ರಶಸ್ತಿಗೆ ತೃಪ್ತಿಪಟ್ಟುಕೊಂಡಿತ್ತು. 

ಇದನ್ನೂ ಓದಿ: ಆಸ್ಟ್ರೇಲಿಯಾ ಮಣಿಸಿದ ಇಂಗ್ಲೆಂಡ್‌ಗೆ ವಿಶ್ವಕಪ್ ಫೈನಲ್ ಟಿಕೆಟ್!

1996ರ ಬಳಿಕ ಕ್ರಿಕೆಟ್‌ ಜಗತ್ತು ಹೊಸ ವಿಶ್ವ ಚಾಂಪಿಯನ್ನರನ್ನು ಸ್ವಾಗತಿಸಲಿದೆ. 1996ರಲ್ಲಿ ಶ್ರೀಲಂಕಾ ವಿಶ್ವಕಪ್ ಟ್ರೋಫಿ ಗೆದ್ದುಕೊಂಡಿತ್ತು. ಬಳಿಕ ಆಸ್ಟ್ರೇಲಿಯಾ ಪ್ರಾಬಲ್ಯ ಮೆರೆಯಿತು. 1999, 2003, 2007ರಲ್ಲಿ ಆಸ್ಟ್ರೇಲಿಯಾ ಟ್ರೋಫಿ ಗೆದ್ದುಕೊಂಡರೆ, 2011ರಲ್ಲಿ ಭಾರತ ಗೆದ್ದಿತ್ತು. ಇನ್ನು 2015ರಲ್ಲಿ ಮತ್ತೆ ಆಸ್ಟ್ರೇಲಿಯಾ ಪ್ರಶಸ್ತಿ ಗೆದ್ದುಕೊಂಡಿತು. ಹೀಗಾಗಿ 13 ವರ್ಷಗ ಬಳಿಕ ಹೊಸ ತಂಡವೊಂದ ಟ್ರೋಫಿ ಗೆಲ್ಲಲಿದೆ.

click me!