ಇಂಡೋ-ಕಿವೀಸ್ ಪಂದ್ಯಕ್ಕೆ ಇಂಗ್ಲೆಂಡ್ ತೀರ್ಪುಗಾರರು

By Web Desk  |  First Published Jul 8, 2019, 11:35 AM IST

ವಿಶ್ವಕಪ್ ಟೂರ್ನಿಯ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಭಾರತ-ನ್ಯೂಜಿಲೆಂಡ್ ತಂಡಗಳು ಮುಖಾಮುಖಿಯಾಗುತ್ತಿದ್ದು, ಇಂಗ್ಲೆಂಡ್‌ನ ಅಂಪೈರ್‌ಗಳು ತೀರ್ಪುಗಾರರಾಗಿ ಕಾರ್ಯ ನಿರ್ವಹಿಸಲಿದ್ದಾರೆ. ಈ ಬಗೆಗಿನ ವಿವರ ಇಲ್ಲಿದೆ ನೋಡಿ...


ಲೀಡ್ಸ್[ಜು.08]: ಐಸಿಸಿ ಏಕದಿನ ವಿಶ್ವಕಪ್‌ನಲ್ಲಿ ಮಂಗಳವಾರ ಮ್ಯಾಂಚೆಸ್ಟರ್‌ನಲ್ಲಿ ನಡೆಯಲಿರುವ ಭಾರತ-ನ್ಯೂಜಿಲೆಂಡ್ ವಿರುದ್ಧದ ಮೊದಲ ಸೆಮಿಫೈನಲ್ ಪಂದ್ಯಕ್ಕೆ ಇಂಗ್ಲೆಂಡ್‌ನ ರಿಚರ್ಡ್ ಇಲ್ಲಿಂಗ್‌ವರ್ತ್ ಮತ್ತು ರಿಚರ್ಡ್ ಕೆಟಲ್‌ಬೊರೌ ಅಂಪೈರ್ ಆಗಿ ಕಾರ್ಯ ನಿರ್ವಹಿಸಲಿದ್ದಾರೆ ಎಂದು ಐಸಿಸಿ ಪ್ರಕಟಣೆಯಲ್ಲಿ ತಿಳಿಸಿದೆ. 

ವಿಶ್ವಕಪ್ 2019 ಅಂಪೈರ್ ಇಯಾನ್ ಗೌಲ್ಡ್ ವಿದಾಯ

Latest Videos

undefined

ಆಸ್ಟ್ರೇಲಿಯಾದ ರಾಡ್ ಟಕ್ಕರ್ 3ನೇ ಅಂಪೈರ್ ಆಗಿ, ಇಂಗ್ಲೆಂಡ್‌ನ ನಿಗಿಲ್ ಲಾಂಗ್ 4ನೇ ತೀರ್ಪುಗಾರರಾಗಿ ಆಯ್ಕೆಯಾಗಿದ್ದಾರೆ. ಆಸ್ಟ್ರೇಲಿಯಾದ ಡೇವಿಡ್ ಬೂನ್ ಪಂದ್ಯ ರೆಫ್ರಿಯಾಗಿದ್ದಾರೆ.

ಸೆಮಿಫೈನಲ್ ಪಂದ್ಯಕ್ಕೂ ಮುನ್ನ ಆಸ್ಟ್ರೇಲಿಯಾಗೆ ಶುರುವಾಯ್ತು ಸಂಕಷ್ಟ!

ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಮೊದಲ ಪಂದ್ಯಕ್ಕೆ ಮ್ಯಾಂಚೆಸ್ಟರ್ ನ ಓಲ್ಡ್ ಟ್ರಾಫೋರ್ಡ್ ಮೈದಾನ ಸಾಕ್ಷಿಯಾಗಲಿದ್ದು, ವಿಜೇತ ತಂಡವು ಜೂ 14ರಂದು ಲಾರ್ಡ್ಸ್’ನಲ್ಲಿ ನಡೆಯಲಿರುವ ಫೈನಲ್ ಪಂದ್ಯಕ್ಕೆ ಟಿಕೆಟ್ ಗಿಟ್ಟಿಸಿಕೊಳ್ಳಲಿದೆ.
 

click me!