ಟೀಂ ಇಂಡಿಯಾಗೆ ಆಘಾತ- ವಿಶ್ವಕಪ್ ಟೂರ್ನಿಯಿಂದ ಶಿಖರ್ ಧವನ್ ಔಟ್!

Published : Jun 19, 2019, 05:02 PM ISTUpdated : Jun 19, 2019, 05:20 PM IST
ಟೀಂ ಇಂಡಿಯಾಗೆ ಆಘಾತ-  ವಿಶ್ವಕಪ್ ಟೂರ್ನಿಯಿಂದ ಶಿಖರ್ ಧವನ್ ಔಟ್!

ಸಾರಾಂಶ

ಪಾಕಿಸ್ತಾನ ವಿರುದ್ದ ಗೆದ್ದು ಬೀಗಿದ ಟೀಂ ಇಂಡಿಯಾಗೆ ಆಘಾತ ಎದುರಾಗಿದೆ. ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಇಂಜುರಿಗೆ ತುತ್ತಾದ ಎಡಗೈ ಬ್ಯಾಟ್ಸ್‌ಮನ್ ಶಿಖರ್ ಧವನ್  ಇದೀಗ ವಿಶ್ವಕಪ್ ಟೂರ್ನಿಯಿಂದ ಹೊರಬಿದ್ದಿದ್ದಾರೆ. ಧವನ್ ಬದಲು ಯುವ ಕ್ರಿಕೆಟಿಗನಿಗೆ ಆಯ್ಕೆ ಸಮಿತಿ ಅವಕಾಶ ನೀಡಿದೆ. 

ಲಂಡನ್(ಜೂ.19): ವಿಶ್ವಕಪ್ ಲೀಗ್ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಗೆಲುವು ಸಾಧಿಸಿರುವ ಟೀಂ ಇಂಡಿಯಾ ಸಂಭ್ರಮದಲ್ಲಿದೆ. ಅಫ್ಘಾನಿಸ್ತಾನ ವಿರುದ್ಧದ ಪಂದ್ಯಕ್ಕೆ ಸಜ್ಜಾಗುತ್ತಿರುವ ಟೀಂ ಇಂಡಿಯಾಗೆ ಆಘಾತ ಎದುರಾಗಿದೆ. ಇಂಜುರಿಯಿಂದ ತಂಡದಿಂದ ಹೊರಗುಳಿದಿದ್ದ ಶಿಖರ್ ಧವನ್ ಇದೀಗ ವಿಶ್ವಕಪ್ ಟೂರ್ನಿಯಿಂದ ಹೊರಬಿದ್ದಿದ್ದಾರೆ. 

ಇದನ್ನೂ ಓದಿ: ನಾವ್ ಮನೆಗೆ ಹೋಗೋದಿಲ್ಲ : ಪಾಕ್ ಕ್ರಿಕೆಟಿಗರು ಕಂಗಾಲು

ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ನೇಥನ್ ಕೌಲ್ಟರ್ ನೈಲ್ ಎಸೆತದಲ್ಲಿ ಕೈಬೆರಳಿಗೆ ಗಾಯಮಾಡಿಕೊಂಡಿದ್ದರು. ಹೀಗಾಗಿ ಪಾಕಿಸ್ತಾನ ವಿರುದ್ದದ ಪಂದ್ಯದಿಂದ ಹೊರಗುಳಿದಿದ್ದರು. ಬಳಿಕ ಇಂಗ್ಲೆಂಡ್‌ನಲ್ಲೇ ಚಿಕಿತ್ಸೆ ಪಡೆಯುತ್ತಿದ್ದ ಧವನ್ ಇದೀಗ ವಿಶ್ವಕಪ್ ಟೂರ್ನಿಯಿಂದ ಹೊರಬಿದ್ದಿದ್ದಾರೆ. ಧವನ್ ಬದಲು ಇದೀಗ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ರಿಷಬ್ ಪಂತ್ ತಂಡ ಸೇರಿಕೊಂಡಿದ್ದಾರೆ.

 

ಇದನ್ನೂ ಓದಿ: ಗಾಯದ ನಡುವೆಯೂ ಜಿಮ್‌ನಲ್ಲಿ ಧವನ್‌ ಕಸರತ್ತು!

ಧವನ್ ವಿಶ್ವಕಪ್ ಟೂರ್ನಿಯಿಂದ ಹೊರಬಿದ್ದಿರುವುದು ಟೀಂ ಇಂಡಿಯಾಗೆ ತೀವ್ರ ಹಿನ್ನಡೆಯಾಗಿದೆ. ಈ ಬಾರಿಯ ಟೂರ್ನಿಯಲ್ಲಿ ಅದ್ಬುತ ಪ್ರದರ್ಶನ ನೀಡಿದ್ದರು. ಒಂದು ಶತಕ  ಸಿಡಿಸಿ ಟೀಂ ಇಂಡಿಯಾ ಗೆಲುವಿನಲ್ಲೂ ಪ್ರಮುಖ ಪಾತ್ರ ನಿರ್ವಹಿಸಿದ್ದರು.  
 

PREV
click me!

Recommended Stories

ವಿಶ್ವಕಪ್ ಫೈನಲ್ ವಿವಾದಾತ್ಮಕ ತೀರ್ಪು; ಮೌನ ಮುರಿದ ಅಂಪೈರ್ ಧರ್ಮಸೇನಾ!
ವಿಶ್ವಕಪ್ ಫೈನಲ್ ಗೆಲುವು ನ್ಯಾಯವಲ್ಲ; ಇಂಗ್ಲೆಂಡ್ ನಾಯಕ ವಿಷಾದ!