ವಿಶ್ವಕಪ್ ಟೂರ್ನಿಯಲ್ಲಿ ದಾಖಲೆ ಬರೆದ ಮೊಹಮ್ಮದ್ ಶಮಿ!

By Web DeskFirst Published Jun 30, 2019, 7:27 PM IST
Highlights

ಟೀಂ ಇಂಡಿಯಾ ವೇಗಿ ಮೊಹಮ್ಮದ್ ಶಮಿ ವಿಶ್ವಕಪ್ ಟೂರ್ನಿಯಲ್ಲಿ ದಾಖಲೆ ಬರೆದಿದ್ದಾರೆ. ಇಂಗ್ಲೆಂಡ್ ವಿರುದ್ಧ 5 ವಿಕೆಟ್ ಕಬಳಿಸಿ ವಿಶ್ವಕಪ್ ಟೂರ್ನಿಯಲ್ಲಿ ಶಮಿ ಬರೆದ ದಾಖಲೆ ಏನು? ಇಲ್ಲಿದೆ ವಿವರ.

ಭಾರತ-ಇಂಗ್ಲೆಂಡ್ ಸ್ಕೋರ್ ಎಷ್ಟು?

ಬರ್ಮಿಂಗ್‌ಹ್ಯಾಮ್(ಜೂ.30): ವಿಶ್ವಕಪ್ ಟೂರ್ನಿಯಲ್ಲಿ ಟೀಂ ಇಂಡಿಯಾ ವೇಗಿ ಮೊಹಮ್ಮದ್ ಶಮಿ ದಾಖಲೆ ಬರೆದಿದ್ದಾರೆ.  ಇಂಗ್ಲೆಂಡ್ ವಿರುದ್ಧದ ಲೀಗ್ ಪಂದ್ಯದಲ್ಲಿ ಶಮಿ 5 ವಿಕೆಟ್ ಕಬಳಿಸಿ ಮಿಂಚಿದರು. ಈ ಮೂಲಕ ಈ ವಿಶ್ವಕಪ್ ಟೂರ್ನಿಯಲ್ಲಿ 3 ಬಾರಿ 4 ಹಾಗೂ ಅದಕ್ಕಿಂತ ಹೆಚ್ಚು ವಿಕೆಟ್ ಕಬಳಿಸಿ ದಾಖಲೆ ಬರೆದಿದ್ದಾರೆ. ವಿಶ್ವಕಪ್ ಟೂರ್ನಿಯಲ್ಲಿ ಸತತ 3 ಬಾರಿ 4 ಅಥವಾ ಅದಕ್ಕಿಂತ ಹೆಚ್ಚು ವಿಕೆಟ್ ಕಬಳಿಸಿದ  ಭಾರತದ ಮೊಟ್ಟ ಮೊದಲ ವೇಗಿ ಅನ್ನೋ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಇದನ್ನೂ ಓದಿ: ಟೀಂ ಇಂಡಿಯಾ ಕ್ರಿಕೆಟಿಗರ ಖಾಸಗಿತನಕ್ಕೆ ಅಡ್ಡಿ- 3 ಅತಿಥಿಗಳಿಗೆ ವಾರ್ನಿಂಗ್!

ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಶಮಿ ಅದ್ಭುತ ಬೌಲಿಂಗ್ ದಾಳಿಯಿಂದ ಭಾರತ ಸಮಾಧಾನದ ನಿಟ್ಟುಸಿರು ಬಿಟ್ಟಿತು. ಆಂಗ್ಲರ 5 ವಿಕೆಟ್ ಕಬಳಿಸೋ ಮೂಲಕ ಇಂಗ್ಲೆಂಡ್ ತಂಡವನ್ನು 337 ರನ್‌ಗೆ ಕಟ್ಟಿಹಾಕುವಲ್ಲಿ ಯಶಸ್ವಿಯಾದರು. ಮೊಹಮ್ಮದ್ ಶಮಿ,   ಆಫ್ಘಾನಿಸ್ತಾನ ವಿರುದ್ಧ 4  ಹಾಗೂ ವೆಸ್ಟ್ ಇಂಡೀಸ್ ವಿರುದ್ಧ  4 ವಿಕೆಟ್ ಕಬಳಿಸಿದ್ದರು. ಈ ಮೂಲಕ 2011ರ ವಿಶ್ವಕಪ್ ಟೂರ್ನಿಯಲ್ಲಿ ಪಾಕಿಸ್ತಾನದ ಶಾಹಿದ್ ಆಫ್ರಿದಿ ಬಳಿಕ ಸತತ 3 ಬಾರಿ 4 ವಿಕೆಟ್ ಗೊಂಚಲು ಪಡೆದ  2ನೇ ಬೌಲರ್ ಅನ್ನೋ ಖ್ಯಾತಿಗೂ ಪಾತ್ರರಾಗಿದ್ದಾರೆ. 

ಇದನ್ನೂ ಓದಿ: ವಿಶ್ವಕಪ್ 2019: ಭಾರತದ ವಿರುದ್ಧ ದಾಖಲೆ ಬರೆದ ಇಂಗ್ಲೆಂಡ್ ಒಪನರ್ಸ್!

ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಭುವನೇಶ್ವರ್ ಕುಮಾರ್ ಇಂಜುರಿಗೆ ತುತ್ತಾಗಿದ್ದರು. ಹೀಗಾಗಿ ಆಫ್ಘಾನಿಸ್ತಾನ ವಿರುದ್ದ ಪಂದ್ಯದಲ್ಲಿ ಭುವಿ ಬದಲು ಮೊಹಮ್ಮದ್ ಶಮಿ ಅವಕಾಶ ಪಡೆದರು. ಸಿಕ್ಕ ಅವಕಾಶಗಳಲ್ಲಿ ಶಮಿ ಅದ್ಭುತ ಬೌಲಿಂಗ್ ದಾಳಿ ಸಂಘಟಿಸಿದ್ದಾರೆ. 
 

click me!