2019ರ ವಿಶ್ವಕಪ್ ಟೂರ್ನಿಯಲ್ಲಿ ಟೀಂ ಇಂಡಿಯಾ ಸ್ಫೋಟಕ ಬ್ಯಾಟ್ಸ್‌ಮನ್ ರೋಹಿತ್ ಶರ್ಮಾ ದಾಖಲೆ ಬರೆದಿದ್ದಾರೆ. ಬಾಂಗ್ಲಾದೇಶ ವಿರುದ್ಧ ಶತಕ ಸಿಡಿಸೋ ಮೂಲಕ ರೋಹಿತ್ ಬರೆದ ದಾಖಲೆ ಏನು? ಇಲ್ಲಿದೆ ವಿವರ.
ಬರ್ಮಿಂಗ್‌ಹ್ಯಾಮ್(ಜು.02): ಬಾಂಗ್ಲಾದೇಶ ವಿರುದ್ಧದ ವಿಶ್ವಕಪ್ ಲೀಗ್ ಪಂದ್ಯದಲ್ಲಿ ಟೀಂ ಇಂಡಿಯಾ ಆರಂಭಿಕ ಬ್ಯಾಟ್ಸ್‌ಮನ್ ರೋಹಿತ್ ಶರ್ಮಾ ಆಕರ್ಷಕ ಸೆಂಚುರಿ ಸಿಡಿಸಿದ್ದಾರೆ. ಏಕದಿನ ಕ್ರಿಕೆಟ್‌ನಲ್ಲಿ ರೋಹಿತ್ ಶರ್ಮಾ 26ನೇ ಸೆಂಚುರಿ ದಾಖಲಿಸಿದ್ದಾರೆ. ವಿಶೇಷ ಅಂದರೆ ಈ ಬಾರಿಯ ವಿಶ್ವಕಪ್ ಟೂರ್ನಿಯಲ್ಲಿ 4 ಸೆಂಚುರಿ ಸಿಡಿಸಿದ ಸಾಧನೆ ಮಾಡಿದ್ದಾರೆ. ಈ ಮೂಲಕ ಶ್ರೀಲಂಕಾ ದಿಗ್ಗಜ ಬ್ಯಾಟ್ಸ್‌ಮನ್ ಕುಮಾರ್ ಸಂಗಕ್ಕಾರ ದಾಖಲೆ ಸರಿಗಟ್ಟಿದ್ದಾರೆ.
2015ರ ವಿಶ್ವಕಪ್ ಟೂರ್ನಿಯಲ್ಲಿ ಕುಮಾರ ಸಂಗಕ್ಕಾರ 4 ಸೆಂಚುರಿ ಸಿಡಿಸಿ ದಾಖಲೆ ಬರೆದಿದ್ದಾರೆ. ಇದು ವಿಶ್ವಕಪ್ ಟೂರ್ನಿಯೊಂದರಲ್ಲಿ ದಾಖಲಾದ ಗರಿಷ್ಠ ಶತಕ. ಇದೀಗ ರೋಹಿತ್ ಶರ್ಮಾ 2019ರ ವಿಶ್ವಕಪ್ ಟೂರ್ನಿಯಲ್ಲಿ 4 ಸೆಂಚುರಿ ಸಿಡಿಸಿದ್ದಾರೆ. ಈ ಮೂಲಕ ಸಂಗಕ್ಕಾರ ದಾಖಲೆ ಸರಿಗಟ್ಟಿದ್ದಾರೆ. ಇಷ್ಟೇ ಅಲ್ಲ ಈ ವಿಶ್ವಕಪ್ ಟೂರ್ನಿಯಲ್ಲಿ ಗರಿಷ್ಠ ಸೆಂಚುರಿ ಸಿಡಿಸಿದ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ. ವಿಶ್ವಕಪ್ ಟೂರ್ನಿಯಲ್ಲಿ ರೋಹಿತ್ ಶರ್ಮಾ ಒಟ್ಟು 5 ಸೆಂಚುರಿ ಸಿಡಿಸಿದ್ದಾರೆ. ಈ ಮೂಲಕ ವಿಶ್ವಕಪ್ ಟೂರ್ನಿಯಲ್ಲಿ ಗರಿಷ್ಠ ಸೆಂಚುರಿ ಸಿಡಿಸಿದ ಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದ್ದಾರೆ. ಸಚಿನ್ ತೆಂಡುಲ್ಕರ್ ವಿಶ್ವಕಪ್‌ನ 44 ಇನ್ನಿಂಗ್ಸ್‌ಗಳಲ್ಲಿ 6 ಸೆಂಚುರಿ ಸಿಡಿಸೋ ಮೂಲಕ ಮೊದಲ ಸ್ಥಾನದಲ್ಲಿದ್ದಾರೆ. ರೋಹಿತ್ ಶರ್ಮಾ ವಿಶ್ವಕಪ್‌ನ 15 ಇನ್ನಿಂಗ್ಸ್‌ಗಳಲ್ಲಿ 5 ಸೆಂಚುರಿ ಸಾಧನೆ ಮಾಡಿದ್ದಾರೆ.
ವಿಶ್ವಕಪ್ ಟೂರ್ನಿಯಲ್ಲಿ ಗರಿಷ್ಠ ಸೆಂಚುರಿ ಸಾಧನೆ:
6/44 ಸಚಿನ್ ತೆಂಡುಲ್ಕರ್
5/42 ರಿಕಿ ಪಾಂಟಿಂಗ್
5/35 ಕುಮಾರ್ ಸಂಗಕ್ಕಾರ
5/15 ರೋಹಿತ್ ಶರ್ಮಾ
ಬಾಂಗ್ಲಾದೇಶ ವಿರುದ್ಧ ಅಬ್ಬರಿಸಿದ ರೋಹಿತ್ ಶರ್ಮಾ 90 ಎಸೆತದಲ್ಲಿ ಸೆಂಚುರಿ ಪೂರೈಸಿದರು. ರೋಹಿತ್ ಶತಕದಲ್ಲಿ 5 ಬೌಂಡರಿ ಹಾಗೂ 5 ಸಿಕ್ಸರ್ ಒಳಗೊಂಡಿತ್ತು. ಸೆಂಚುರಿ ಸಿಡಿಸಿದ ಬೆನ್ನಲ್ಲೇ ರೋಹಿತ್ ಶರ್ಮಾ ವಿಕೆಟ್ ಕೈಚೆಲ್ಲಿದ್ದಾರೆ. ರೋಹಿತ್ 104 ರನ್ ಸಿಡಿಸಿ ಔಟಾದರು.