ಲಂಕಾ ವಿರುದ್ಧ ರೋಹಿತ್ ಸೆಂಚುರಿ; ಸಚಿನ್, ಸಂಗಕ್ಕಾರ ದಾಖಲೆ ಪುಡಿ ಪುಡಿ!

By Web DeskFirst Published Jul 6, 2019, 9:22 PM IST
Highlights

ವಿಶ್ವಕಪ್ ಟೂರ್ನಿಯಲ್ಲಿ ರೋಹಿತ್ ಶರ್ಮಾ ದಾಖಲೆ ಮೇಲೆ ದಾಖಲೆ ನಿರ್ಮಿಸುತ್ತಿದ್ದಾರೆ. ಶ್ರೀಲಂಕಾ ವಿರುದ್ಧ ಶತಕ ಸಿಡಿಸೋ ಮೂಲಕ ದಿಗ್ಗಜರ ದಾಖಲೆಯನ್ನು ಪುಡಿ ಮಾಡಿದ್ದಾರೆ. ಸೆಂಚುರಿ ಮೂಲಕ ರೋಹಿತ್ ನಿರ್ಮಿಸಿದ ದಾಖಲೆ ಏನು? ಇಲ್ಲಿದೆ ವಿವರ.

ಲೀಡ್ಸ್(ಜು.06): ವಿಶ್ವಕಪ್ ಟೂರ್ನಿಯಲ್ಲಿ ಟೀಂ ಇಂಡಿಯಾ ಆರಂಭಿಕ ಬ್ಯಾಟ್ಸ್‌ಮನ್ ರೋಹಿತ್ ಶರ್ಮಾ 5ನೇ ಶತಕ ದಾಖಲಿಸಿದ್ದಾರೆ. ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಅಬ್ಬರಿಸಿದ ರೋಹಿತ್ 92 ಎಸೆತದಲ್ಲಿ ಸೆಂಚುರಿ ಪೂರೈಸಿದರು. ಈ ಮೂಲಕ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡುಲ್ಕರ್ ಹಾಗೂ ಶ್ರೀಲಂಕಾದ ಕುಮಾರ  ಸಂಗಕ್ಕಾರ ದಾಖಲೆಯನ್ನು ಪುಡಿ ಮಾಡಿದ್ದಾರೆ.

ಲಂಕಾ ವಿರುದ್ಧದ ಶತಕದೊಂದಿಗೆ ರೋಹಿತ್, ವಿಶ್ವಕಪ್ ಟೂರ್ನಿಯೊಂದರಲ್ಲಿ ಗರಿಷ್ಠ ಶತಕ ಸಿಡಿಸಿದ ಕ್ರಿಕೆಟಿಗ ಅನ್ನೋ ದಾಖಲೆ ಬರೆದಿದ್ದಾರೆ. ಈ ಮೂಲಕ ಶ್ರೀಲಂಕಾದ ಕುಮಾರ ಸಂಗಕ್ಕಾರ ದಾಖಲೆಯನ್ನು ಪುಡಿ ಮಾಡಿದ್ದಾರೆ. 2015ರ ವಿಶ್ವಕಪ್ ಟೂರ್ನಿಯಲ್ಲಿ ಸಂಗಕ್ಕಾರ 4 ಸೆಂಚುರಿ ಸಿಡಿಸಿದ್ದರು. ಇದೀಗ ರೋಹಿತ್ 5 ಶತಕ ಸಿಡಿಸಿ ದಾಖಲೆ ಪುಡಿ ಮಾಡಿದ್ದಾರೆ.

2003 ರ ವಿಶ್ವಕಪ್ ಟೂರ್ನಿಯ ಲೀಗ್ ಹಂತದಲ್ಲಿ  ಸಚಿನ್ ತೆಂಡುಲ್ಕರ್ 586  ರನ್ ಸಿಡಿಸೋ ಮೂಲಕ ಗರಿಷ್ಠ ರನ್ ಸಿಡಿಸಿದ ಕ್ರಿಕೆಟಿಗ ಅನ್ನೋ ದಾಖಲೆ ಬರೆದಿದ್ದರು.  ಇದೀಗ ರೋಹಿತ್ ಈ ದಾಖಲೆ ಮುರಿದಿದ್ದಾರೆ. 2019 ವಿಶ್ವಕಪ್ ಟೂರ್ನಿಯಲ್ಲಿ ಸದ್ಯ ರೋಹಿತ್ ಗರಿಷ್ಠ ರನ್ ಸಿಡಿಸಿದ ಪಟ್ಟಿಯಲ್ಲಿ ಮೊದಲ ಸ್ಥಾನ ಅಲಂಕರಿಸಿದ್ದಾರೆ. ವಿಶ್ವಕಪ್ ಟೂರ್ನಿಯಲ್ಲಿ ಸಚಿನ್ ತೆಂಡುಲ್ಕರ್ ಒಟ್ಟು 6 ಶತಕ ಸಿಡಿಸಿದ್ದಾರೆ. ಇದೀಗ ರೋಹಿತ್ ಶರ್ಮಾ ವಿಶ್ವಕಪ್ ಟೂರ್ನಿಯಲ್ಲಿ ಒಟ್ಟು 6 ಶತಕ ಸಿಡಿಸೋ ಮೂಲಕ ಸಚಿನ್ ದಾಖಲೆ ಸರಿಗಟ್ಟಿದ್ದಾರೆ.  

click me!