ವಿಶ್ವಕಪ್ ಟೂರ್ನಿಯ ಸೆಮಿಫೈನಲ್ ಪಂದ್ಯದಲ್ಲಿ ಹಾಫ್ ಸೆಂಚುರಿ ಸಿಡಿಸಿದರೂ ಎಂ.ಎಸ್.ಧೋನಿ ನಿವೃತ್ತಿ ಪ್ರಶ್ನೆ ಎದ್ದಿದೆ. ಇದಕ್ಕೆ ನಾಯಕ ವಿರಾಟ್ ಕೊಹ್ಲಿ ಪ್ರತಿಕ್ರಿಯೆ ನೀಡಿದ್ದಾರೆ.
ಮ್ಯಾಂಚೆಸ್ಟರ್(ಜು.10): ವಿಶ್ವಕಪ್ ಟೂರ್ನಿಯ ಲೀಗ್ ಪಂದ್ಯಗಳಲ್ಲಿ ಎಂ.ಎಸ್.ಧೋನಿ ಸ್ಲೋ ಬ್ಯಾಟಿಂಗ್ ಟೀಕೆಗೆ ಗುರಿಯಾಗಿತ್ತು. ಇಷ್ಟೇ ಅಲ್ಲ ಧೋನಿ ನಿವೃತ್ತಿಗೂ ಒತ್ತಡ ಕೇಳಿ ಬಂದಿತ್ತು. ಆದರೆ ನ್ಯೂಜಿಲೆಂಡ್ ವಿರುದ್ಧದ ಫೈನಲ್ ಪಂದ್ಯದಲ್ಲಿ ಧೋನಿ ಎಲ್ಲಾ ಟೀಕಿಗೆ ಉತ್ತರಿಸಿದ್ದಾರೆ. 50 ರನ್ ಸಿಡಿಸೋ ಮೂಲಕ ಭಾರತದ ದಿಟ್ಟ ಹೋರಾಟದಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದರು. ಆದರೆ ಪಂದ್ಯ ಗೆಲ್ಲಲಿಲ್ಲ ಅನ್ನೋ ಕೊರಗು ಇನ್ನು ಮಾಸಿಲ್ಲ. ಇದರ ನಡುವೆ ಮತ್ತೆ ಧೋನಿ ನಿವೃತ್ತಿ ಪಶ್ನೆ ಎದ್ದಿದೆ. ಇದಕ್ಕೆ ನಾಯಕ ವಿರಾಟ್ ಕೊಹ್ಲಿ ಪ್ರತಿಕ್ರಿಯೆ ನೀಡಿದ್ದಾರೆ.
ಇದನ್ನೂ ಓದಿ: ವಿಶ್ವಕಪ್ 2019: ಪಂದ್ಯ ಸೋತರೂ ದಾಖಲೆ ಬರೆದ ರವೀಂದ್ರ ಜಡೇಜಾ!
ನ್ಯೂಜಿಲೆಂಡ್ ವಿರುದ್ಧ ಸೆಮಿಫೈನಲ್ ಸೋಲಿನ ಬಳಿಕ ಮಾಧ್ಯಮದ ಜೊತೆ ಮಾತನಾಡಿದ ಕೊಹ್ಲಿಗೆ ಧೋನಿ ನಿವೃತ್ತಿ ಪ್ರಶ್ನೆ ಕೇಳಲಾಗಿತ್ತು. ಇದಕ್ಕೆ ಪ್ರತಿಕ್ರಿಯೆ ನೀಡಿದ ಕೊಹ್ಲಿ, ನಿವೃತ್ತಿ ಕುರಿತು ಧೋನಿ ಯಾವುದೇ ಮಾತು ಆಡಿಲ್ಲ. ಕ್ರಿಕೆಟ್ ಭವಿಷ್ಯದ ಕುರಿತು ಧೋನಿ ಇದುವರೆಗೂ ಯಾರ ಜೊತೆಗೂ ಹೇಳಿಕೊಂಡಿಲ್ಲ ಎಂದಿದ್ದಾರೆ. ಈ ಮೂಲಕ ಧೋನಿ ಮತ್ತೆ ಟೀಂ ಇಂಡಿಯಾದಲ್ಲಿ ಆಡಲಿದ್ದಾರೆ ಅನ್ನೋದನ್ನು ಸ್ಪಷ್ಟಪಡಿಸಿದ್ದಾರೆ.
ಇದನ್ನೂ ಓದಿ: ವಿಶ್ವಕಪ್ ಟೂರ್ನಿಯಿಂದ ಹೊರಬಿದ್ದ ಕೊಹ್ಲಿ ಪಡೆ ಸಂತೈಸಿದ ಮೋದಿ!
ನ್ಯೂಜಿಲೆಂಡ್ ವಿರುದ್ಧದ ಸೆಮಿಫೈನಲ್ ಪಂದ್ಯದಲ್ಲಿ ಭಾರತ 18 ರನ್ ಸೋಲು ಅನುಭವಿಸಿತು. ಈ ಮೂಲಕ ವಿಶ್ವಕಪ್ ಟೂರ್ನಿಯಿಂದ ಹೊರಬಿತ್ತು.