ವಿಶ್ವಕಪ್ 2019: ಟಾಸ್ ಗೆದ್ದ ಅಫ್ಘಾನಿಸ್ತಾನ ಬ್ಯಾಟಿಂಗ್- 1 ಬದಲಾವಣೆ!

Published : Jun 29, 2019, 03:02 PM IST
ವಿಶ್ವಕಪ್ 2019: ಟಾಸ್ ಗೆದ್ದ ಅಫ್ಘಾನಿಸ್ತಾನ ಬ್ಯಾಟಿಂಗ್- 1 ಬದಲಾವಣೆ!

ಸಾರಾಂಶ

ಪಾಕಿಸ್ತಾನ ವಿರುದ್ಧದ ಲೀಗ್ ಪಂದ್ಯದಲ್ಲಿ ಟಾಸ್ ಗೆದ್ದಿರುವ ಅಫ್ಘಾನಿಸ್ತಾನ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಉಭಯ ತಂಡದ ಬದಲಾವಣೆ ಏನು? ಇಲ್ಲಿದೆ ವಿವರ.

ಲೀಡ್ಸ್(ಜೂ.29): ವಿಶ್ವಕಪ್ ಟೂರ್ನಿಯ ಲೀಗ್ ಪಂದ್ಯದಲ್ಲಿ ಪಾಕಿಸ್ತಾನ ಹಾಗೂ ಆಫ್ಘಾನಿಸ್ತಾನ ಮುಖಾಮುಖಿಯಾಗುತ್ತಿದೆ. ಟಾಸ್ ಗೆದ್ದಿರುವ ಆಫ್ಘಾನಿಸ್ತಾನ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ತಂಡದಲ್ಲಿ ಒಂದು ಬದಲಾವಣೆ ಮಾಡಿರುವ ಅಫ್ಘಾನಿಸ್ತಾನ, ದವ್ಲತ್ ಜರ್ದಾನ್ ಬದಲು ಹಮೀದ್ ಹಸನ್ ತಂಡ ಸೇರಿಕೊಂಡಿದ್ದಾರೆ. ಇತ್ತ ಪಾಕಿಸ್ತಾನ ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ

ಪಾಕಿಸ್ತಾನ ತಂಡಕ್ಕೆ ಇದು ಗೆಲ್ಲಲೇಬೇಕಾದ ಪಂದ್ಯ. ವಿಶ್ವಕಪ್ ಸೆಮಿಫೈನಲ್ ಸ್ಥಾನಕ್ಕೆ ಅರ್ಹತೆ ಗಿಟ್ಟಿಸಿಕೊಳ್ಳಬೇಕಾದರೆ ಅಫ್ಘಾನಿಸ್ತಾನ ತಂಡವನ್ನು ಮಣಿಸಲೇಬೇಕಿದೆ. ಆದರೆ ಅಫ್ಘಾನ್ ಈಗಾಗಲೇ ಸೆಮೀಸ್ ಹೋರಾಟದಿಂದ ಹೊರಬಿದ್ದಿದೆ. ಹೀಗಾಗಿ ಸೋಲಿನ ಅಂತರ ಕಡಿಮೆ ಮಾಡಿಕೊಳ್ಳಲು ಹೋರಾಟ ನಡೆಸಲಿದೆ.

PREV
click me!

Recommended Stories

ವಿಶ್ವಕಪ್ ಫೈನಲ್ ವಿವಾದಾತ್ಮಕ ತೀರ್ಪು; ಮೌನ ಮುರಿದ ಅಂಪೈರ್ ಧರ್ಮಸೇನಾ!
ವಿಶ್ವಕಪ್ ಫೈನಲ್ ಗೆಲುವು ನ್ಯಾಯವಲ್ಲ; ಇಂಗ್ಲೆಂಡ್ ನಾಯಕ ವಿಷಾದ!