ಪಾಕ್ ವಿರುದ್ಧ ಗೆಲುವಿನ ಬೆನ್ನಲ್ಲೇ ಟೀಂ ಇಂಡಿಯಾಗೆ ಆಘಾತ..!

Published : Jun 18, 2019, 03:48 PM ISTUpdated : Jun 18, 2019, 05:43 PM IST
ಪಾಕ್ ವಿರುದ್ಧ ಗೆಲುವಿನ ಬೆನ್ನಲ್ಲೇ ಟೀಂ ಇಂಡಿಯಾಗೆ ಆಘಾತ..!

ಸಾರಾಂಶ

ಪಾಕಿಸ್ತಾನ ವಿರುದ್ಧ ಗೆದ್ದು ಬೀಗಿದ್ದ ಟೀಂ ಇಂಡಿಯಾಗೆ ಆಘಾತವೊಂದು ಎದುರಾಗಿದ್ದು ತಂಡದ ಸ್ಟಾರ್ ಕ್ರಿಕೆಟಿಗ ಮುಂದಿನ ಮೂರು ಪಂದ್ಯಗಳ ಮಟ್ಟಿಗೆ ಹೊರಗುಳಿಯಲಿದ್ದಾರೆ. ಅಷ್ಟಕ್ಕೂ ಯಾರು ಆ ಕ್ರಿಕೆಟಿಗ ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ..

ಮ್ಯಾಂಚೆಸ್ಟರ್‌[ಜೂ.18]: ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ ಅನಾಯಾಸವಾಗಿ ಗೆದ್ದು ಬೀಗಿದ ಭಾರತಕ್ಕೆ ಇದೀಗ ಆಘಾತವೊಂದು ಎದುರಾಗಿದ್ದು ತಂಡದ ಪ್ರಮುಖ ವೇಗಿ ಭುವನೇಶ್ವರ್ ಕುಮಾರ್ ಗಾಯದ ಸಮಸ್ಯೆಯಿಂದಾಗಿ ಮುಂದಿನ ಎರಡು-ಮೂರು ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ. ಇದು ತಂಡಕ್ಕೆ ಹಿನ್ನಡೆಯಾಗುವ ಸಾಧ್ಯತೆಯಿದೆ.    

ಪಾಕಿಸ್ತಾನ ವಿರುದ್ಧದ ಪಂದ್ಯದ ವೇಳೆ ಸ್ನಾಯು ಸೆಳೆತಕ್ಕೊಳಗಾದ ಭಾರತ ತಂಡದ ವೇಗದ ಬೌಲರ್‌ ಭುವನೇಶ್ವರ್‌ ಕುಮಾರ್‌, ಕನಿಷ್ಠ 2ರಿಂದ 3 ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ ಎಂದು ನಾಯಕ ವಿರಾಟ್‌ ಕೊಹ್ಲಿ ತಿಳಿಸಿದ್ದಾರೆ. ಪಾಕ್ ವಿರುದ್ಧದ ಪಂದ್ಯದಲ್ಲಿ ಭುವನೇಶ್ವರ್ ಕುಮಾರ್ ಕೇವಲ 2.4 ಓವರ್’ಗಳನ್ನಷ್ಟೇ ಬೌಲಿಂಗ್ ಮಾಡಿದ್ದರು. ಆ ಬಳಿಕ ಸ್ನಾಯು ನೋವಿನ ಸಮಸ್ಯೆಯಿಂದಾಗಿ ಮೈದಾನದಿಂದ ಹೊರನಡೆದಿದ್ದರು.

ಇಂಡೋ-ಪಾಕ್ ಪಂದ್ಯ: ಗಾಯಗೊಂಡ ಭುವನೇಶ್ವರ್ ಔಟ್!

ಇದುವರೆಗೂ ಭುವಿ ಮೂರು ಪಂದ್ಯಗಳನ್ನಾಡಿ ಪ್ರಮುಖ 5 ವಿಕೆಟ್ ಕಬಳಿಸಿ ಗಮನ ಸೆಳೆದಿದ್ದಾರೆ. ಭಾರತ ತನ್ನ ಮುಂದಿನ ಪಂದ್ಯವನ್ನು ಜೂ.22ರಂದು ಆಫ್ಘಾನಿಸ್ತಾನ ವಿರುದ್ಧ ಆಡಲಿದ್ದು, ಮೊಹಮದ್‌ ಶಮಿ ಆಡುವ ಹನ್ನೊಂದರಲ್ಲಿ ಸ್ಥಾನ ಪಡೆಯುವ ಸಾಧ್ಯತೆ ಇದೆ. 

ಧವನ್‌ಗೆ ಗಾಯ; ಮತ್ತೋರ್ವ ಡೆಲ್ಲಿ ಕ್ರಿಕೆಟಿಗನಿಗೆ ಹೊಡಿತು ಜಾಕ್‌ಪಾಟ್

ವಿಶ್ವಕಪ್ ಟೂರ್ನಿಯಲ್ಲಿ ಟೀಂ ಇಂಡಿಯಾಗೂ ಗಾಯದ ಸಮಸ್ಯೆ ಕಾಡುತ್ತಿದ್ದು, ಈಗಾಗಲೇ ಶಿಖರ್ ಧವನ್ ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಗಾಯಗೊಂಡು ಮೂರು ವಾರಗಳ ಮಟ್ಟಿಗೆ ವಿಶ್ರಾಂತಿ ಪಡೆಯುತ್ತಿದ್ದಾರೆ. 

PREV
click me!

Recommended Stories

ವಿಶ್ವಕಪ್ ಫೈನಲ್ ವಿವಾದಾತ್ಮಕ ತೀರ್ಪು; ಮೌನ ಮುರಿದ ಅಂಪೈರ್ ಧರ್ಮಸೇನಾ!
ವಿಶ್ವಕಪ್ ಫೈನಲ್ ಗೆಲುವು ನ್ಯಾಯವಲ್ಲ; ಇಂಗ್ಲೆಂಡ್ ನಾಯಕ ವಿಷಾದ!