ಇಂಗ್ಲೆಂಡ್ ತಂಡದ ಸ್ಟಾರ್ ಕ್ರಿಕೆಟಿಗ ಜೋಸ್ ಬಟ್ಲರ್ ಟೀಂ ಇಂಡಿಯಾ ಮಾಜಿ ನಾಯಕ ಧೋನಿಯ ಹೊಸ ಅವತಾರ ಎಂದು ಆಸ್ಟ್ರೇಲಿಯಾ ಕೋಚ್ ಅಭಿಪ್ರಾಯಪಟ್ಟಿದ್ದಾರೆ. ಅಷ್ಟಕ್ಕೂ ಯಾಕೆ ಹೀಗಂದ್ರು..? ನೀವೇ ನೋಡಿ
ಲಂಡನ್[ಜೂ.24]: ಇಂಗ್ಲೆಂಡ್ ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ಜೋಸ್ ಬಟ್ಲರ್ ವಿಶ್ವಕ್ರಿಕೆಟ್ ನ ಹೊಸ ಧೋನಿ ಎಂದು ಆಸ್ಟ್ರೇಲಿಯಾ ತಂಡದ ಕೋಚ್ ಜಸ್ಟಿನ್ ಲ್ಯಾಂಗರ್ ಅಭಿಪ್ರಾಯಪಟ್ಟಿದ್ದಾರೆ. ಧೋನಿ ಸಾಕಷ್ಟು ವರ್ಷಗಳಿಂದ ಫಿನೀಶಿಂಗ್ ಪಾತ್ರವನ್ನು ಯಶಸ್ವಿಯಾಗಿ ನಿಭಾಯಿಸಿಕೊಂಡು ಬರುತ್ತಿರುವ ಧೋನಿಯಂತೆ ಬಟ್ಲರ್ ಯಶಸ್ವಿಯಾಗಲಿದ್ದಾರೆ ಎಂದು ಹೇಳಿದ್ದಾರೆ.
ಜೋಸ್ ಒಬ್ಬ ಅದ್ಭುತ ಆಟಗಾರ. ಅವರು ಬ್ಯಾಟಿಂಗ್ ಮಾಡುವುದನ್ನು ನಾನು ಎಂಜಾಯ್ ಮಾಡುತ್ತೇನೆ. ಅವರು ಧೋನಿಯ ಹೊಸ ಅವತಾರ. ಆದರೆ ನಮ್ಮ ವಿರುದ್ಧ ಅವರು ಸೊನ್ನೆ ಸುತ್ತುತ್ತಾರೆ ಎನ್ನುವ ವಿಶ್ವಾಸವಿದೆ. ಅವರೊಬ್ಬ ಅದ್ಭುತ ಅಥ್ಲೀಟ್ ಹಾಗೆಯೇ ಅಸಾಮಾನ್ಯ ಫಿನೀಶರ್ ಎಂದು ಲ್ಯಾಂಗರ್ ಹೇಳಿದ್ದಾರೆ.
undefined
ಇಂಗ್ಲೆಂಡ್ ಎದುರು ಕಿತ್ತಳೆ ಜರ್ಸಿಯಲ್ಲಿ ಟೀಂ ಇಂಡಿಯಾ ಕಣಕ್ಕೆ..?
ವಿಶ್ವ ಕ್ರಿಕೆಟ್ ನಲ್ಲಿ ಇಂಗ್ಲೆಂಡ್ ತಂಡ ಬಲಿಷ್ಠವಾಗಿ ಬೆಳೆದಿದೆ. ಏಕದಿನ ಕ್ರಿಕೆಟ್ ನಲ್ಲಿ ನಂಬರ್ 01 ತಂಡ ಎನಿಸಿಕೊಳ್ಳುವ ಎಲ್ಲಾ ಅರ್ಹತೆಯನ್ನು ಇಂಗ್ಲೆಂಡ್ ಹೊಂದಿದೆ. ಶ್ರೀಲಂಕಾ ವಿರುದ್ಧ ಸೋತಿದ್ದು ತಂಡದ ಮೇಲೆ ಯಾವುದೇ ಪರಿಣಾಮ ಆಗುವುದಿಲ್ಲ ಎಂದು ಲ್ಯಾಂಗರ್ ಹೇಳಿದ್ದಾರೆ.
ಜೂನ್ 25ರಂದು ಲಾರ್ಡ್ಸ್ ಮೈದಾನದಲ್ಲಿ ಆಸ್ಟ್ರೇಲಿಯಾ ತಂಡವು ತನ್ನ ಸಾಂಪ್ರದಾಯಿಕ ಎದುರಾಳಿ ಇಂಗ್ಲೆಂಡ್ ತಂಡವನ್ನು ಎದುರಿಸಲಿದ್ದು, ಈ ಪಂದ್ಯವನ್ನು ಯಾರು ಜಯಿಸುತ್ತಾರೋ ಅವರ ಸೆಮೀಸ್ ಹಾದಿ ಮತ್ತಷ್ಟು ಸುಗಮವಾಗಲಿದೆ.