ಶ್ರೀಲಂಕಾ ವಿರುದ್ಧದ ವಿಶ್ವಕಪ್ ಲೀಗ್ ಪಂದ್ಯದಲ್ಲಿ ಎಂ.ಎಸ್.ಧೋನಿ ಹಾಗೂ ರವೀಂದ್ರ ಜಡೇಜಾ ಜೋಡಿ ದಾಖಲೆ ಬರೆದಿದ್ದಾರೆ. ಈ ಮೂಲಕ ನಯನ್ ಮೊಂಗಿಯಾ ಹಾಗೂ ವೆಂಕಟೇಶ್ ಪ್ರಸಾದ್ ಅಪರೂಪದ ದಾಖಲೆಯನ್ನ ಮುರಿದಿದೆ.
ಲೀಡ್ಸ್(ಜು.06): ವಿಶ್ವಕಪ್ ಟೂರ್ನಿಯ ಅಂತಿಮ ಲೀಗ್ ಪಂದ್ಯದಲ್ಲಿ ಟೀಂ ಇಂಡಿಯಾ 7 ವಿಕೆಟ್ ಗೆಲುವು ಸಾಧಿಸಿದೆ. ಈ ಪಂದ್ಯದಲ್ಲಿ ಎಂ.ಎಸ್.ಧೋನಿ ಹಾಗೂ ರವೀಂದ್ರ ಜಡೇಜಾ ಜೋಡಿ ಅಪರೂಪದ ದಾಖಲೆ ಬರೆದಿದೆ. ಲಂಕಾ ವಿರುದ್ಧದ ಪಂದ್ಯದಲ್ಲಿ ಮೊಹಮ್ಮದ್ ಶಮಿ ಬದಲು ಸ್ಥಾನ ಪಡೆದ ರವೀಂದ್ರ ಜಡೇಜಾ ಮೊದಲ ಓವರ್‌ನಲ್ಲೇ ವಿಕೆಟ್ ಕಬಳಿಸಿ ಇದೀಗ ದಾಖಲೆ ಬರೆದಿದ್ದಾರೆ.
ಇದನ್ನೂ ಓದಿ: ಏಕದಿನ ಗೆಲುವಿನಲ್ಲಿ ದಾಖಲೆ ಬರೆದ ಟೀಂ ಇಂಡಿಯಾ!
undefined
ರವೀಂದ್ರ ಜಡೇಜಾ, ಲಂಕಾದ ಕುಸಾಲ್ ಮೆಂಡೀಸ್ ವಿಕೆಟ್ ಕಬಳಿಸಿದರು. ಧೋನಿ ಸ್ಟಂಪ್ ಔಟ್‌ನಿಂದ ಭಾರತಕ್ಕೆ ಭರ್ಜರಿ ಮೇಲುಗೈ ತಂದುಕೊಟ್ಟರು. ಈ ಮೂಲಕ ಜಡೇಜಾ ಹಾಗೂ ಧೋನಿ ಜೋಡಿ ಒಟ್ಟು 29 ಬ್ಯಾಟ್ಸ್‌ಮನ್‌ಗಳನ್ನು ಬಲಿಪಡೆದ ಸಾಧನೆ ಮಾಡಿದ್ದಾರೆ. ಇದಕ್ಕೂ ಮೊದಲು ಭಾರತದ ನಯನ್ ಮೋಂಗಿಯಾ ಹಾಗೂ ವೆಂಕಟೇಶ್ ಪ್ರಸಾದ್ ಜೋಡಿ 28 ಬ್ಯಾಟ್ಸ್‌ಮನ್‌ಗಳನ್ನು ಬಲಿಪಡೆದಿದ್ದರು.
ಇದನ್ನೂ ಓದಿ: ಶ್ರೀಲಂಕಾ ವಿರುದ್ಧ ಭರ್ಜರಿ ಗೆಲುವು; ಸೆಮೀಸ್‌ನಲ್ಲಿ ಭಾರತದ ಎದುರಾಳಿ ಯಾರು?
ಈ ಪಟ್ಟಿಯಲ್ಲಿ 3ನೇ ಸ್ಥಾನದಲ್ಲಿ ಧೋನಿ ಹಾಗೂ ಹರ್ಭಜನ್ ಸಿಂಗ್ ಅಲಂಕರಿಸಿದ್ದಾರೆ. ಧೋನಿ-ಭಜ್ಜಿ ಜೋಡಿ 25 ಬಾರಿ ಬ್ಯಾಟ್ಸ್‌ಮನ್‌ಗಳನ್ನು ಬಲಿಪಡೆದಿದ್ದಾರೆ. ವಿಶ್ವಕಪ್ ಟೂರ್ನಿಯಲ್ಲಿ ಸಿಕ್ಕ ಒಂದು ಅವಕಾಶದಲ್ಲಿ ದಾಖಲೆ ಬರೆದ ಧೋನಿ ಹಾಗೂ ಜಡೇಜಾ ಸಾಧನೆಗೆ ಮೆಚ್ಚುಗೆ ವ್ಯಕ್ತವಾಗಿದೆ.