ವಿಶ್ವಕಪ್ 2019: ಟಾಸ್ ಗೆದ್ದ ಸೌತ್ ಆಫ್ರಿಕಾ ಬ್ಯಾಟಿಂಗ್

Published : Jul 06, 2019, 05:44 PM IST
ವಿಶ್ವಕಪ್ 2019: ಟಾಸ್ ಗೆದ್ದ ಸೌತ್ ಆಫ್ರಿಕಾ ಬ್ಯಾಟಿಂಗ್

ಸಾರಾಂಶ

ವಿಶ್ವಕಪ್ ಟೂರ್ನಿಯ ಅಂತಿಮ ಲೀಗ್ ಪಂದ್ಯದಲ್ಲಿ ಟಾಸ್ ಗೆದ್ದಿರುವ  ಸೌತ್ ಆಫ್ರಿಕಾ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಗೆಲುವಿನೊಂದಿಗೆ ಟೂರ್ನಿಗೆ ವಿದಾಯ ಹೇಳಲು ಸೌತ್ ಆಫ್ರಿಕಾ ಬಯಸಿದ್ದರೆ, ಭರ್ಜರಿ ಗೆಲುವಿನ ಮೂಲಕ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿ ಮುಂದುವರಿಯಲು ಆಸ್ಟ್ರೇಲಿಯಾ ಹವಣಿಸುತ್ತಿದೆ.

ಮ್ಯಾಂಚೆಸ್ಟರ್(ಜು.06): ವಿಶ್ವಕಪ್ ಟೂರ್ನಿಯ ಅಂತಿಮ ಲೀಗ್ ಪಂದ್ಯದಲ್ಲಿ ಆಸ್ಟ್ರೇಲಿಯಾ ಹಾಗೂ ಸೌತ್ ಆಫ್ರಿಕಾ ಮುಖಾಮುಖಿಯಾಗುತ್ತಿದೆ. ಈ ಪಂದ್ಯದೊಂದಿಗೆ  ವಿಶ್ವಕಪ್ ಲೀಗ್ ಪಂದ್ಯ ಮುಕ್ತಾಯಗೊಳ್ಳಲಿದೆ. ಅಂತಿಮ ಲೀಗ್ ಪಂದ್ಯದಲ್ಲಿ ಟಾಸ್ ಗೆದ್ದಿರುವ ಸೌತ್ ಆಫ್ರಿಕಾ  ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.

ಆಸ್ಟ್ರೇಲಿಯಾ ಈಗಾಗಲೇ ಸೆಮಿಫೈನಲ್ ಸ್ಥಾನ ಖಚಿತಪಡಿಸಿದೆ. ಇತ್ತ ಸೌತ್ ಆಫ್ರಿಕಾ ಟೂರ್ನಿಯಿಂದ ಹೊರಬಿದ್ದಿದೆ. ಆದರೆ ಈ ಗೆಲುವು ಆಸ್ಟ್ರೇಲಿಯಾಗೆ ಪ್ರಮುಖವಾಗಿದೆ. ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಕಾಯ್ದುಕೊಳ್ಳಲು ಈ ಗೆಲುವು ಮುಖ್ಯವಾಗಿದೆ. ಇಷ್ಟೇ ಅಲ್ಲ ಸೆಮಿಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಎದುರಿಸಲು ಸಜ್ಜಾಗಿರುವ ಆಸಿಸ್, ಸೌತ್ ಆಫ್ರಿಕಾ ವಿರುದ್ಧ ಸೋಲು ಅನುಭವಿಸಿದರೆ, ಸೆಮೀಸ್ ಎದುರಾಳಿ ಇಂಗ್ಲೆಂಡ್ ತಂಡವಾಗಿ ಬದಲಾಗಲಿದೆ.
 

PREV
click me!

Recommended Stories

ವಿಶ್ವಕಪ್ ಫೈನಲ್ ವಿವಾದಾತ್ಮಕ ತೀರ್ಪು; ಮೌನ ಮುರಿದ ಅಂಪೈರ್ ಧರ್ಮಸೇನಾ!
ವಿಶ್ವಕಪ್ ಫೈನಲ್ ಗೆಲುವು ನ್ಯಾಯವಲ್ಲ; ಇಂಗ್ಲೆಂಡ್ ನಾಯಕ ವಿಷಾದ!