
ಕಾರ್ಡಿಫ್(ಜೂ.15): ವಿಶ್ವಕಪ್ ಟೂರ್ನಿಯ 21ನೇ ಲೀಗ್ ಪಂದ್ಯದಲ್ಲಿ ಸೌತ್ ಆಫ್ರಿಕಾ ಹಾಗೂ ಆಫ್ಘಾನಿಸ್ತಾ ತಂಡ ಹೋರಾಟಕ್ಕೆ ಸಜ್ಜಾಗಿದೆ. ಈಗಾಗಲೇ ಟಾಸ್ ಗೆದ್ದಿರುವ ಸೌತ್ ಆಫ್ರಿಕಾ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.
ಈ ಬಾರಿಯಾ ವಿಶ್ವಕಪ್ ಟೂರ್ನಿಯಲ್ಲಿ ಕಳಪೆ ಪ್ರದರ್ಶನ ನೀಡಿರುವ ಸೌತ್ ಆಫ್ರಿಕಾ ಆಡಿರೋ 4 ಪಂದ್ಯದಲ್ಲಿ 3ರಲ್ಲಿ ಸೋಲು ಹಾಗೂ ಒಂದು ಪಂದ್ಯ ಮಳೆಯಿಂದ ರದ್ದಾಗಿದೆ. ಇತ್ತ ಅಫ್ಘಾನಿಸ್ತಾನ 3ರಲ್ಲಿ 3 ಪಂದ್ಯ ಸೋತು ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ.