
World cup Final: ಇಂಗ್ಲೆಂಡ್ vs ನ್ಯೂಜಿಲೆಂಡ್ ಪಂದ್ಯದ ಸ್ಕೋರ್ ಎಷ್ಟು?
ಲಾರ್ಡ್ಸ್(ಜು.14): ಕ್ರಿಕೆಟ್ ಕಾಶಿ ಲಾರ್ಡ್ಸ್ ಮೈದಾನದಲ್ಲಿಂದು ಹೊಸ ಇತಿಹಾಸ ನಿರ್ಮಾಣವಾಗಲಿದೆ. ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಆತಿಥೇಯ ಇಂಗ್ಲೆಂಡ್ ಅಥವಾ ನ್ಯೂಜಿಲೆಂಡ್ ಗೆದ್ದರೂ ದಾಖಲೆ. ಮಹತ್ವದ ಫೈನಲ್ ಫೈಟ್‌ನಲ್ಲಿ ಟಾಸ್ ಗೆದ್ದ ನ್ಯೂಜಿಲೆಂಡ್ ಬ್ಯಾಟಿಂಗ್ಆಯ್ಕೆ ಮಾಡಿಕೊಂಡಿದೆ. ನ್ಯೂಜಿಲೆಂಡ್ ಹಾಗೂ ಇಂಗ್ಲೆಂಡ್ ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.
ಅಂಕಪಟ್ಟಿಯಲ್ಲಿ 4ನೇ ಕ್ರಮಾಂಕದಲ್ಲಿದ್ದ ನ್ಯೂಜಿಲೆಂಡ್ ತಂಡ ಸೆಮಿಫೈನಲ್ ಪಂದ್ಯದಲ್ಲಿ ಅಗ್ರಸ್ಥಾನದ ಟೀಂ ಇಂಡಿಯಾವನ್ನು ಮಣಿಸಿ ಫೈನಲ್ ಪ್ರವೇಶಿಸಿತ್ತು. ಇತ್ತ ಇಂಗ್ಲೆಂಡ್, ಬಲಿಷ್ಠ ಆಸ್ಟ್ರೇಲಿಯಾ ತಂಡವನ್ನು ಮಣಿಸಿ ಪ್ರಶಸ್ತಿ ಸುತ್ತಿಗೆ ಪ್ರವೇಶಿಸಿತ್ತು. ಇಂಗ್ಲೆಂಡ್ ಹಾಗೂ ನ್ಯೂಜಿಲೆಂಡ್ ಇದುವರೆಗೂ ವಿಶ್ವಕಪ್ ಟ್ರೋಫಿ ಗೆದ್ದಿಲ್ಲ.