ಗಾಂಧಿ ಹಂತಕರೇ ದೇಶ ವಿಭಜನೆಗೆ ಕಾರಣ: ಎಚ್‌ಡಿಕೆ

By Kannadaprabha News  |  First Published Aug 17, 2022, 1:01 AM IST

ಗಾಂಧಿ ಹಂತಕರೇ ದೇಶ ವಿಭಜನೆಗೆ ಕಾರಣ. ಆದರೆ ನೆಹರು ಮೇಲೆ ಗೂಬೆ ಕೂರಿಸಲು ಯತ್ನಿಸುತ್ತಿದ್ದಾರೆ ಜೆಡಿಎಸ್‌ ಕಚೇರಿಯಲ್ಲಿ ಮಾಜಿ ಸಿಎಂ ಧ್ವಜಾರೋಹಣ ಮಾಡಿದ ಬಳಿಕ ಹೇಳಿಕೆ.


ಬೆಂಗಳೂರು (ಆ.17) :ಇಂದು ದೇಶ ಪ್ರೇಮವನ್ನು ಗುತ್ತಿಗೆ ಪಡೆದವರಂತೆ ವರ್ತಿಸುತ್ತಿರುವ ಶಕ್ತಿಗಳೇ ಸ್ವಾತಂತ್ರ್ಯಾ ನಂತರ ದೇಶ ವಿಭಜನೆಗೆ ಕಾರಣವಾದವು ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಪರೋಕ್ಷವಾಗಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಮಾಜಿ ಸಿಎಂ ಹೆಚ್ ಡಿಕೆ ವಿರುದ್ದ ಧಿಕ್ಕಾರ ಕೂಗಿ ಕೈ-ಕಮಲ ಸದಸ್ಯರ ಆಕ್ರೋಶ

Latest Videos

undefined

ಸೋಮವಾರ ಜೆಡಿಎಸ್‌ ಕಚೇರಿ(JDS Office)ಯಲ್ಲಿ 75ನೇ ಸ್ವಾತಂತ್ರ್ಯ ದಿನಾಚರಣೆಯ(75th Independence Day) ಅಂಗವಾಗಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ದೇಶದಲ್ಲಿ ಮಾನವೀಯತೆ, ಮಾನವನ ಬದುಕಿನ ಬಗ್ಗೆ ಚಿಂತಿಸುವ ಅಗತ್ಯವಿದ್ದು, ಸರ್ವರಿಗೂ ಸಮಬಾಳು, ಸಮಪಾಲು ಕೊಡಲು ಪ್ರಾಮಾಣಿಕವಾಗಿ ಸ್ಪಂದಿಸಿದಾಗ ಮಾತ್ರ ರಾಷ್ಟ್ರಧ್ವಜಕ್ಕೆ ಗೌರವ ಸಲ್ಲಿಸಿದಂತಾಗುತ್ತದೆ. ಸ್ವಾತಂತ್ರ್ಯ ಬಂದು 75 ವರ್ಷವಾದರೂ ಬಡತನ ನಿವಾರಣೆಯಾಗಿಲ್ಲ. ಶತಮಾನೋತ್ಸವ ಆಚರಿಸುವ ವೇಳೆಗಾದರೂ ದೇಶದ ಜನರು ಸಂಘರ್ಷರಹಿತ, ಶಾಂತಿ ಮತ್ತು ಸಹಬಾಳ್ವೆಯಿಂದ ಬಾಳುವಂತಹ ವಾತಾವರಣ ಸೃಷ್ಟಿಸಬೇಕಿದೆ ಎಂದು ಹೇಳಿದರು.

ಒಂದು ಕಡೆ ಮಾಜಿ ಪ್ರಧಾನಿ ಜವಾಹರ್‌ಲಾಲ್‌ ನೆಹರು(Jawaharlal Nehru) ಭಾವಚಿತ್ರ ಕಣ್ಮರೆ ಮಾಡುತ್ತಾರೆ. ಮತ್ತೊಂದು ಕಡೆ ನೆಹರು ರಾಷ್ಟ್ರವಿಭಜನೆ ಆಗಲು ಕಾರಣ ಎನ್ನುವ ನೆಪ ಹೇಳುತ್ತಾರೆ. ಅಂದು ಗಾಂಧೀಜಿ ಅವರನ್ನು ಕೊಲೆ ಮಾಡಿದವರೇ ದೇಶ ವಿಭಜನೆಯಾಗಲು ಕಾರಣ. ಅಂದು ನಿಮ್ಮ (ಬಿಜೆಪಿ) ಸಂಕುಚಿತ ಮನೋಭಾವವೇ ದೇಶ ವಿಭಜನೆಯಾಗಲು ಕಾರಣ. ಈಗ ನೋಡಿದರೆ ನೆಹರು ಅವರ ಮೇಲೆ ಗೂಬೆ ಕೂರಿಸುವ ಕೆಲಸ ಮಾಡಲಾಗುತ್ತಿದೆ ಎಂದು ಹರಿಹಾಯ್ದರು.ಕಾರ್ಯಕ್ರಮದಲ್ಲಿ ಜೆಡಿಎಸ್‌ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ, ವಿಧಾನಪರಿಷತ್‌ ಸದಸ್ಯ ಟಿ.ಎ.ಶರವಣ, ಜೆಡಿಎಸ್‌ ನಗರ ಘಟಕದ ಅಧ್ಯಕ್ಷ ಆರ್‌.ಪ್ರಕಾಶ್‌ ಇತರರು ಉಪಸ್ಥಿತರಿದ್ದರು.

ಜಾಹೀರಾತುಗಳ ಮೇಲೆ ನಡೆಯುತ್ತಿರುವ, ಟೈಂ ಪಾಸ್‌ ಸರ್ಕಾರ: ಎಚ್‌ಡಿಕೆ

75 ವರ್ಷದ ಸವಿನೆನಪಿಗಾಗಿ ಬಿಜೆಪಿ ಹರ್‌ಘರ್‌ ತಿರಂಗ(Har Ghar Tiranga) ಎಂಬ ಕಾರ್ಯಕ್ರಮ ಮಾಡಿದೆ. ಕಾಂಗ್ರೆಸ್‌ ನಡಿಗೆ ಕಾರ್ಯಕ್ರಮ ಮಾಡಿದೆ. ಎರಡೂ ರಾಷ್ಟ್ರೀಯ ಪಕ್ಷಗಳೂ ಜನರಿಗೆ ಮಂಕುಬೂದಿ ಎರಚುತ್ತಿವೆ. ಸ್ವಾತಂತ್ರ್ಯಕ್ಕಾಗಿ ಹುಟ್ಟಿಕೊಂಡ ಕಾಂಗ್ರೆಸ್‌ ಬೇರೆ. ಇಂದು ಕಾಂಗ್ರೆಸ್‌ ಹೆಸರು ಹೇಳಿ ರಾಜಕೀಯ ಮಾಡುವವರು ನಕಲಿ ಕಾಂಗ್ರೆಸ್ಸಿಗರು. ನೆಹರು ಭಾವಚಿತ್ರ ವಿಚಾರದಲ್ಲಿ ಬಿಜೆಪಿ ಸರ್ಕಾರ ಹೇಗೆ ನಡೆದುಕೊಂಡಿದೆ ಎಂಬುದನ್ನು ನೋಡಿದ್ದೇನೆ. ಅದು ನಾವೆಲ್ಲರೂ ತಲೆ ತಗ್ಗಿಸುವ ಕೆಲಸವಾಗಿದೆ ಎಂಬುದು ನನ್ನ ಅಭಿಪ್ರಾಯ. ನೆಹರು ಕುಟುಂಬ ಸ್ವಾತಂತ್ರ್ಯ ಹೋರಾಟದಲ್ಲಿ ಹೇಗೆ ಭಾಗವಹಿಸಿತ್ತು, ಅವರ ಕೊಡುಗೆ ಏನೆಂಬುದು ಎಲ್ಲರಿಗೂ ಗೊತ್ತಿರುವ ವಿಚಾರವೇ ಎಂದು ಹೇಳಿದರು.

click me!