Azadi Ka Amrit Mahotsav: ಆ.5ರಿಂದ 15ರ ವರೆಗೆ ಹಂಪಿ ಸೇರಿದಂತೆ ಐತಿಹಾಸಿಕ ಸ್ಮಾರಕಗಳ ಭೇಟಿ ಉಚಿತ!

By Santosh Naik  |  First Published Aug 3, 2022, 7:16 PM IST


ಸ್ವಾತಂತ್ರ್ಯದ ಅಮೃತ ಮಹೋತ್ಸವ ಮತ್ತು 75 ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ, 2022 ರ ಆಗಸ್ಟ್ 5 ರಿಂದ 15 ರವರೆಗೆ ದೇಶಾದ್ಯಂತ ತನ್ನ ಎಲ್ಲಾ ಸಂರಕ್ಷಿತ ಸ್ಮಾರಕಗಳು ಅಥವಾ ತಾಣಗಳಿಗೆ ಪ್ರವಾಸಿಗರಿಗೆ ಉಚಿತ ಪ್ರವೇಶವನ್ನು ನೀಡಲಾಗುತ್ತದೆ ಎಂದು ಕೇಂದ್ರ ಸಂಸ್ಕೃತಿ ಸಚಿವ ಜಿ ಕಿಶನ್ ರೆಡ್ಡಿ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.


ನವದೆಹಲಿ (ಆ.3): ದೇಶದ ಪ್ರಮುಖ ಐತಿಹಾಸಿಕ ಸ್ಮಾರಕಗಳು ಹಾಗೂ ಸಂರಕ್ಷಿತ ಪ್ರದೇಶಗಳಲ್ಲಿ ಆಗಸ್ಟ್‌ 5 ರಿಂದ 15ರವರೆಗೆ ಸಾರ್ವಜನಿಕರಿಗೆ ಉಚಿತ ಪ್ರವೇಶ ನೀಡಲಾಗುತ್ತದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ದೇಶದ ಪ್ರಮುಖ ಸ್ಮಾರಕಗಳಾದ ತಾಜ್‌ ಮಹಲ್‌, ಕುತುಬ್‌ ಮಿನಾರ್‌, ರಾಜ್ಯದ ಹಂಪಿ ಸೇರಿದಂತೆ ಐತಿಹಾಸಿಕ ಸ್ಮಾರಕಗಳಲ್ಲಿ ಪ್ರವೇಶ ಉಚಿತವಾಗಿರಲಿದ್ದು, ಕೇಂದ್ರ ಸರ್ಕಾರ ಈ ಕುರಿತಾಗಿ ಆದೇಶವನ್ನು ಹೊರಡಿಸಿದೆ. ಆಗಸ್ಟ್‌ 5 ರಿಂದ ಇದು ಜಾರಿಗೆ ಬರಲಿದೆ. ಇದರ ಅಡಿಯಲ್ಲಿ, ಪ್ರವಾಸಿಗರು ಆಗಸ್ಟ್ 15 ರವರೆಗೆ ದೇಶಾದ್ಯಂತ ಐತಿಹಾಸಿಕ ಕಟ್ಟಡಗಳಲ್ಲಿ ಉಚಿತ ಪ್ರವೇಶವನ್ನು ಪಡೆಯಬಹುದು. ಕೇಂದ್ರ ಸಂಸ್ಕೃತಿ ಸಚಿವಾಲಯವು ಆಗಸ್ಟ್ 5 ರಿಂದ 15 ರವರೆಗೆ ದೇಶದಾದ್ಯಂತ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯಿಂದ ರಕ್ಷಿಸಲ್ಪಟ್ಟ ಎಲ್ಲಾ ಸ್ಮಾರಕಗಳು ಮತ್ತು ಸ್ಥಳಗಳಿಗೆ ಉಚಿತ ಪ್ರವೇಶವನ್ನು ಬುಧವಾರ ಪ್ರಕಟಿಸಿದೆ. ಭಾರತದ ಸ್ವಾತಂತ್ರ್ಯದ 75 ವರ್ಷಗಳ ಸ್ಮರಣಾರ್ಥ ಆಜಾದಿ ಕಾ ಅಮೃತ್ ಮಹೋತ್ಸವದ ಆಚರಣೆಯ ಭಾಗವಾಗಿ ಇದನ್ನು ಮಾಡಲಾಗುತ್ತಿದೆ. ಸ್ವಾತಂತ್ರ್ಯದ ಅಮೃತ ಮಹೋತ್ಸವ ಮತ್ತು 75 ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ, 2022 ರ ಆಗಸ್ಟ್ 5 ರಿಂದ 15 ರವರೆಗೆ ದೇಶಾದ್ಯಂತ ತನ್ನ ಎಲ್ಲಾ ಸಂರಕ್ಷಿತ ಸ್ಮಾರಕಗಳು ಅಥವಾ ತಾಣಗಳಿಗೆ ಪ್ರವಾಸಿಗರಿಗೆ ಉಚಿತ ಪ್ರವೇಶವನ್ನು ನೀಡಿದೆ ಎಂದು ಕೇಂದ್ರ ಸಂಸ್ಕೃತಿ ಸಚಿವ ಜಿ ಕಿಶನ್ ರೆಡ್ಡಿ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

2021ರ ಮಾರ್ಚ್‌ 12 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಅಹಮದಾಬಾದ್‌ನ ಸಬರಮತಿ ಆಶ್ರಮದಿಂದ 'ಪಾದಯಾತ್ರೆ' (ಸ್ವಾತಂತ್ರ್ಯ ಮಾರ್ಚ್) ಆರಂಭ ಮಾಡಿದ್ದರು. ಆ ಮೂಲಕ 'ಆಜಾದಿ ಕಾ ಅಮೃತ್ ಮಹೋತ್ಸವ'ದ ದೇಶಾದ್ಯಂತ ಚಟುವಟಿಕೆಗಳಿಗೆ ಚಾಲನೆ ನೀಡಿದ್ದರು. 15 ಆಗಸ್ಟ್ 2022 ಕ್ಕೆ 75 ವಾರಗಳ ಮೊದಲು 'ಆಜಾದಿ ಕಾ ಅಮೃತ್ ಮಹೋತ್ಸವ'ದ ಪ್ರಾರಂಭವು ಆಗಸ್ಟ್ 15, 2023 ರವರೆಗೆ ಮುಂದುವರಿಯುತ್ತದೆ ಎಂದು ಪ್ರಧಾನಿ ಮೋದಿ ಹೇಳಿದ್ದರು. ಉದ್ಘಾಟನೆಯ ಸಮಯದಲ್ಲಿ ಮಹಾತ್ಮ ಗಾಂಧಿ ಮತ್ತು ಸ್ವಾತಂತ್ರ್ಯ ಹೋರಾಟದಲ್ಲಿ ತಮ್ಮ ಪ್ರಾಣವನ್ನು ಅರ್ಪಿಸಿದ ಮಹಾನ್ ವ್ಯಕ್ತಿಗಳಿಗೆ ಗೌರವ ಸಲ್ಲಿಸಿದ್ದರು.

Tap to resize

Latest Videos

undefined

ಆಜಾದಿ ಕಾ ಅಮೃತ್ ಮಹೋತ್ಸವವು ಭಾರತದ ಸ್ವಾತಂತ್ರ್ಯದ 75 ನೇ ವಾರ್ಷಿಕೋತ್ಸವದ ಸ್ಮರಣಾರ್ಥವಾಗಿ ಭಾರತ ಸರ್ಕಾರವು ಆಯೋಜಿಸಿದ ಕಾರ್ಯಕ್ರಮಗಳ ಸರಣಿಯಾಗಿದೆ. ಜನ್-ಭಾಗಿದರಿಯ ಉತ್ಸಾಹದಲ್ಲಿ ಮಹೋತ್ಸವವನ್ನು ಜನ-ಉತ್ಸವವನ್ನಾಗಿ ಆಚರಿಸಲಾಗುತ್ತಿದೆ. ಸಂಸ್ಕೃತಿ ಸಚಿವಾಲಯವು ಆಜಾದಿ ಕಾ ಅಮೃತ ಮಹೋತ್ಸವವನ್ನು ಆಚರಿಸಲು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಯೋಜಿಸಿದೆ.

ಹಂಪಿ ಸ್ಮಾರಕಗಳು ಜಲಾವೃತ: ಹಂಪಿಯ ಶ್ರೀ ಕೊದಂಡರಾಮ ದೇಗುಲದೊಳಗೆ ನದಿ ನೀರು

ಇತ್ತೀಚೆಗೆ ತಮ್ಮ ಮನ್‌ ಕಿ ಬಾತ್‌ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ, ‘ಆಜಾದಿ ಕಾ ಅಮೃತ ಮಹೋತ್ಸವ’ ಅಭಿಯಾನ ಸಾಮೂಹಿಕ ಚಳುವಳಿಯಾಗಿ ರೂಪುಗೊಳ್ಳುತ್ತಿರುವುದು ತನಗೆ ಸಂತಸ ತಂದಿದೆ ಎಂದಿದ್ದರು. ಸಮಾಜದ ಎಲ್ಲಾ ವರ್ಗದವರು ಮತ್ತು ಸಮಾಜದ ಪ್ರತಿಯೊಂದು ವರ್ಗದ ಜನರು ದೇಶಾದ್ಯಂತ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದಾರೆ ಎಂದು ತಿಳಿಸಿದ್ದರು "ಭಾರತವು ತನ್ನ ಸ್ವಾತಂತ್ರ್ಯದ 75 ವರ್ಷಗಳನ್ನು ಪೂರ್ಣಗೊಳಿಸಿದಾಗ, ನಾವೆಲ್ಲರೂ ಅದ್ಭುತ ಮತ್ತು ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲಿದ್ದೇವೆ" ಎಂದು ಜುಲೈ ತಿಂಗಳ ಕಾರ್ಯಕ್ರಮದಲ್ಲಿ ಹೇಳಿದ್ದರು.

Har Ghar Tiranga : ಪ್ರೇರಣೆ ನೀಡುವ ಸಂಕಲ್ಪದೊಂದಿಗೆ ತಿರಂಗಾ Rallyಯಲ್ಲಿ ಜೋಶಿ ಭಾಗಿ 

ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ದೇಶದಲ್ಲಿ ರಾಷ್ಟ್ರೀಯ ಭಾವನೆಯನ್ನ ಇಮ್ಮಡಿಗೊಳಿಸುವಂತ ಹಲವು ಕಾರ್ಯಕ್ರಮಗಳನ್ನ ಕೇಂದ್ರ ಬಿಜೆಪಿ ಸರ್ಕಾರ ಹಮ್ಮಿಕೊಂಡಿದೆ.. ಪ್ರಧಾನಿ ನರೇಂದ್ರ ಮೋದಿ(PM Narendra Modi) ಅವರು ತಮ್ಮ ಮನ್ ಕೀ ಬಾತ್(Mann Ki Baat) ಕಾರ್ಯಕ್ರಮದಲ್ಲಿ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕು 75 ವರ್ಷ ಪೂರ್ಣಗೊಂಡಿರುವ ಕುರಿತು ತಮ್ಮ ಮನದಾಳದ ಮಾತುಗಳನ್ನ ಆಡಿದ್ದರು.. ಅಮೃತ ಮಹೋತ್ಸವ(Azadi Ka Amrit Mahotsav ) ಒಂದು ಅಭಿಯಾನವಾಗಬೇಕು.. ಈ ನಿಟ್ಟಿನಲ್ಲಿ ದೇಶದ ಪ್ರತಿಯೊಬ್ಬ ಪ್ರಜೆಯೂ ಅಜಾದಿ ಕೀ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ತಮ್ಮ ಪಾಲ್ಗೊಳ್ಳುವಿಕೆಯನ್ನ ತೋರ್ಪಡಿಸುವಂತೆ ಹೇಳಿದ್ದರು.

click me!