ಲಾಕ್ಡೌನ್‌ : 10 ಲಕ್ಷ ಮಕ್ಕಳು ಶಾಲೆಯಿಂದ ಹೊರಕ್ಕೆ

By Kannadaprabha NewsFirst Published Feb 21, 2021, 8:04 AM IST
Highlights

 ಲಾಕ್‌ಡೌನ್‌ನಿಂದಾಗಿ ವಿವಿಧ ಜಿಲ್ಲೆಗಳಲ್ಲಿ 10 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಶಾಲೆಯಿಂದ ಹೊರಗುಳಿದಿದ್ದಾರೆ. 5-6ನೇ ತರಗತಿಗಳಿಗೆ ಪ್ರವೇಶ ಪಡೆದಿದ್ದ 6 ಲಕ್ಷ ವಿದ್ಯಾರ್ಥಿಗಳು ಶಾಲೆಯನ್ನು ಬಿಟ್ಟಿದ್ದರೆ, 8 ಮತ್ತು 9ನೇ ತರಗತಿಯ 4 ಲಕ್ಷ ಮಕ್ಕಳು ಶಾಲೆಯಿಂದ ಹೊರಗೆ ಉಳಿದಿದ್ದಾರೆ.  

ಪಟನಾ (ಫೆ.21): ಕೊರೋನಾ ವೈರಸ್‌ ಲಾಕ್‌ಡೌನ್‌ನಿಂದಾಗಿ ಬಿಹಾರದ ವಿವಿಧ ಜಿಲ್ಲೆಗಳಲ್ಲಿ 10 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಶಾಲೆಯಿಂದ ಹೊರಗುಳಿದಿದ್ದಾರೆ ಎಂದು ಪ್ರಾಥಮಿಕ ಶಿಕ್ಷಣ ಇಲಾಖೆ ಮಾಹಿತಿ ನೀಡಿದೆ. 

5-6ನೇ ತರಗತಿಗಳಿಗೆ ಪ್ರವೇಶ ಪಡೆದಿದ್ದ 6 ಲಕ್ಷ ವಿದ್ಯಾರ್ಥಿಗಳು ಶಾಲೆಯನ್ನು ಬಿಟ್ಟಿದ್ದರೆ, 8 ಮತ್ತು 9ನೇ ತರಗತಿಯ 4 ಲಕ್ಷ ಮಕ್ಕಳು ಶಾಲೆಯಿಂದ ಹೊರಗೆ ಉಳಿದಿದ್ದಾರೆ. 

ಫೆ. 22 ರಿಂದ ಈ 3 ತರಗತಿಗಳು ಪುನರಾರಂಭ : ಸಿದ್ಧತೆಗೆ ಸೂಚನೆ

ಶಾಲೆ ಬಿಟ್ಟಮಕ್ಕಳನ್ನು ಪುನಃ ಶಾಲೆಗೆ ಕರೆತರುವ ಸಲುವಾಗಿ ಬಿಹಾರದ ಶಿಕ್ಷಣ ಇಲಾಖೆ ಏ.1ರಿಂದ ರಾಜ್ಯದೆಲ್ಲೆಡೆ ಶಾಲಾ ಪ್ರವೇಶ ಅಭಿಯಾನ ಹಮ್ಮಿಕೊಂಡಿದೆ. 

ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕರಿಗೆ ಅಭಿಯಾನದ ಜವಾಬ್ದಾರಿಯನ್ನು ವಹಿಸಲಾಗಿದೆ ಎಂದು ಪ್ರಾಥಮಿಕ ಶಿಕ್ಷಣ ಇಲಾಖೆಯ ನಿರ್ದೇಶಕ ಡಾ. ರಂಜಿತ್‌ ಕೆ. ಸಿಂಗ್‌ ತಿಳಿಸಿದ್ದಾರೆ.

click me!