
ಬಡೌನ್(ಜು.31): ಸ್ವಾತಂತ್ರ್ಯೋತ್ಸವ ಸಮೀಪಿಸಿದೆ. ಈಗಾಗಲೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮಕ್ಕೆ ಸಿದ್ಧತೆಗಳು ಭರದಿಂದ ಸಾಗಿದೆ. ಮಕ್ಕಳ ಕಾರ್ಯಕ್ರಮ, ಸ್ಪರ್ಧೆ, ಆಚರಣೆಯ ತಯಾರಿ ನಡೆಯುತ್ತಿದೆ. ಈ ಸಂದರ್ಭ ಉತ್ತರ ಪ್ರದೇಶದ ಹಳ್ಳಿಯೊಂದಲ್ಲಿ ಬಾಲಕ ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಅವರನ್ನು ನೇಣಿಗೆ ಹಾಕುವ ದೃಶ್ಯ ಅಭ್ಯಾಸ ಮಾಡುವಾಗ ಆಕಸ್ಮಿಕವಾಗಿ ಆತ್ಮಹತ್ಯೆಗೆ ಶರಣಾಗಿದ್ದಾನೆ.
ಸ್ವಾತಂತ್ರ್ಯ ದಿನಾಚರಣೆಯಂದು ನಡೆಯಲಿದ್ದ ನಾಟಕಕ್ಕಾಗಿ ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ನನ್ನು ನೇಣಿಗೇರಿಸುವ ದೃಶ್ಯವನ್ನು 10 ವರ್ಷದ ಬಾಲಕ ಉತ್ತರ ಪ್ರದೇಶದ ಬಡೌನ್ ಹಳ್ಳಿಯಲ್ಲಿ ಅಭ್ಯಾಸ ಮಾಡುತ್ತಿದ್ದಾಗ ಶನಿವಾರ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಗುರುವಾರ ಘಟನೆ ನಡೆದ ತಕ್ಷಣ ಕುಟುಂಬವು ಪೊಲೀಸರಿಗೆ ಮಾಹಿತಿ ನೀಡದೆ ಶವವನ್ನು ಸುಟ್ಟು ಹಾಕಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಜಿಲ್ಲೆಯ ಕುನ್ವರ್ಗಾಂವ್ ಪೊಲೀಸ್ ಠಾಣೆ ವ್ಯಾಪ್ತಿಯ ಬಾಬತ್ ಗ್ರಾಮದ ನಿವಾಸಿಯಾದ ಭೂರೆ ಸಿಂಗ್ ಅವರ ಪುತ್ರ ಶಿವಂ ಇತರ ಮಕ್ಕಳೊಂದಿಗೆ ನಾಟಕದ ಅಭ್ಯಾಸ ಮಾಡುತ್ತಿದ್ದ.
ಸೂಟ್‌ಕೇಸಲ್ಲಿ ಸೊಸೆ, ಬ್ಯಾಗ್‌ನಲ್ಲಿ ಅಳಿಯನ ದೇಹವಿಟ್ಟು ತಿಂಗಳುಗಟ್ಟಲೆ ಸುತ್ತಿದ್ಲು
ಭಗತ್ ಸಿಂಗ್ ನನ್ನು ಗಲ್ಲಿಗೇರಿಸುವ ದೃಶ್ಯವನ್ನು ಪುನಃ ಪ್ರದರ್ಶಿಸುವಾಗ ಶಿವಂ ಆತನ ಕುತ್ತಿಗೆಗೆ ಕುಣಿಕೆಯನ್ನು ಕಟ್ಟಿದ್ದಾನೆ. ಆದರೆ ಅವನು ನಿಂತಿದ್ದ ಸ್ಟೂಲ್ ಜಾರಿಹೋಗಿತು ಎಂದು ಸ್ಥಳೀಯರು ಹೇಳಿದ್ದಾರೆ.
ಇತರ ಮಕ್ಕಳು ಗಾಬರಿಗೊಂಡರು ಮತ್ತು ಸಹಾಯಕ್ಕಾಗಿ ಕಿರುಚಿಕೊಂಡಿದ್ದರು. ನಂತರ ಕೆಲವು ಸ್ಥಳೀಯ ನಿವಾಸಿಗಳು ಅಲ್ಲಿಗೆ ಆಗಮಿಸಿದರು. ಕುಣಿಕೆ ಕತ್ತರಿಸಿದ ನಂತರ ಶಿವಂ ಅವರನ್ನು ಕೆಳಕ್ಕೆ ಕರೆತರಲಾಗಿತ್ತು. ಆದರೆ ಅವರು ಆ ವೇಳೆಗೆ ಮೃತಪಟ್ಟಿದ್ದರು ಎಂದು ಜನ ತಿಳಿಸಿದ್ದಾರೆ.
ಕುನ್‌ರಗಾಂವ್ ಪೊಲೀಸ್ ಠಾಣೆಯ ಎಸ್‌ಎಚ್‌ಒ ನೇತೃತ್ವದ ತಂಡವನ್ನು ಶುಕ್ರವಾರ ಗ್ರಾಮಕ್ಕೆ ಕಳುಹಿಸಲಾಗಿದೆ. ಆದರೆ ಹುಡುಗ ಹೇಗೆ ಸಾವನ್ನಪ್ಪಿದ್ದಾನೆ ಎಂಬ ಬಗ್ಗೆ ಯಾವುದೇ ಮಾಹಿತಿಯನ್ನು ನೀಡಲು ಕುಟುಂಬ ಸದಸ್ಯರು ನಿರಾಕರಿಸಿದ್ದಾರೆ ಎಂದು ಎಸ್‌ಎಸ್‌ಪಿ ಬದೌನ್, ಸಂಕಲ್ಪ್ ಶರ್ಮಾ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ