ಪರೀಕ್ಷೆಯಲ್ಲಿ ಕಾಪಿ ಮಾಡಿದವರು 10 ವರ್ಷ ಅನರ್ಹ, ಸಹಾಯ ಮಾಡಿದವರಿಗೆ ಜೀವಾವಧಿ ಶಿಕ್ಷೆ..!

Published : Jan 17, 2023, 09:54 AM IST
 ಪರೀಕ್ಷೆಯಲ್ಲಿ ಕಾಪಿ ಮಾಡಿದವರು 10 ವರ್ಷ ಅನರ್ಹ, ಸಹಾಯ ಮಾಡಿದವರಿಗೆ ಜೀವಾವಧಿ ಶಿಕ್ಷೆ..!

ಸಾರಾಂಶ

ಇತ್ತೀಚೆಗೆ ಉತ್ತರಾಖಂಡದ ಕೆಲವು ಸರ್ಕಾರಿ ನೇಮಕಾತಿ ಪ್ರಶ್ನೆಪತ್ರಿಕೆ ಸೋರಿಕೆಯಾಗಿದ್ದ ಘಟನೆಗಳು ನಡೆದಿದ್ದವು. ಇದರಿಂದ ಎಚ್ಚೆತ್ತಿರುವ ರಾಜ್ಯ ಸರ್ಕಾರ ಈ ರೀತಿ ಪರೀಕ್ಷಾ ಅಕ್ರಮಕ್ಕೆ ಸಹಾಯ ಮಾಡಿದವರಿಗೆ ಜೀವಾವಧಿ ಶಿಕ್ಷೆ ವಿಧಿಸುವ ಕಠಿಣ ಕಾನೂನು ತರಲು ತೀರ್ಮಾನಿಸಿದೆ.

ಡೆಹ್ರಾಡೂನ್‌: ಇತ್ತೀಚೆಗೆ ಉತ್ತರಾಖಂಡದ ಕೆಲವು ಸರ್ಕಾರಿ ನೇಮಕಾತಿ ಪ್ರಶ್ನೆಪತ್ರಿಕೆ ಸೋರಿಕೆಯಾಗಿದ್ದ ಘಟನೆಗಳು ನಡೆದಿದ್ದವು. ಇದರಿಂದ ಎಚ್ಚೆತ್ತಿರುವ ರಾಜ್ಯ ಸರ್ಕಾರ ಈ ರೀತಿ ಪರೀಕ್ಷಾ ಅಕ್ರಮಕ್ಕೆ ಸಹಾಯ ಮಾಡಿದವರಿಗೆ ಜೀವಾವಧಿ ಶಿಕ್ಷೆ ವಿಧಿಸುವ ಕಠಿಣ ಕಾನೂನು ತರಲು ತೀರ್ಮಾನಿಸಿದೆ. ಈ ಕುರಿತು ಭಾನುವಾರ ಚಂಪಾವತ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಪುಷ್ಕರ್‌ ಸಿಂಗ್‌ ಧಾಮಿ, ಸರ್ಕಾರಿ ನೇಮಕಾತಿ ಪರೀಕ್ಷೆಗಳಲ್ಲಿ ನಕಲು ಮಾಡಲು ಸಹಾಯ ಮಾಡುವ ತಪ್ಪಿತಸ್ಥರಿಗೆ ಜೀವಾವಧಿ ಶಿಕ್ಷೆ ವಿಧಿಸುವ ಕಾನೂನು ರೂಪಿಸಲು ನಿರ್ಧರಿಸಲಾಗಿದೆ. ಜತೆಗೆ ಇಂತಹ ವಂಚನೆಗೆ ಅಭ್ಯರ್ಥಿಗಳಿಗೆ ಸಹಾಯ ಮಾಡಿದವರ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲಾಗುತ್ತದೆ ಎಂದರು.

ಅಲ್ಲದೇ ಅಕ್ರಮ ವಿಧಾನಗಳ ಮೂಲಕ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳಿಗೆ 10 ವರ್ಷಗಳ ಕಾಲ ಯಾವುದೇ ಪರೀಕ್ಷೆಗೆ ಹಾಜರಾಗದಂತೆ ಅನರ್ಹಗೊಳಿಸಲಾಗುತ್ತದೆ ಎಂದು ಹೇಳಿದರು. ಸಂಪುಟವು ಜ.13ರಂದು ಕಠಿಣ ಕಾನೂನು ತರಲು ನಿರ್ಧರಿಸಿತ್ತು. ಈಗ ಧಾಮಿ ಅದರಲ್ಲಿ ಇರಬಹುದಾದ ಅಂಶಗಳ ಬಗ್ಗೆ ಹೇಳಿದ್ದಾರೆ.  ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪದ ಮೇಲೆ ಉತ್ತರಾಖಂಡ ರಾಜ್ಯ ಲೋಕಸೇವಾ ಆಯೋಗದ ಸೆಕ್ಷನ್‌ ಆಫೀಸರ್‌ ಸೇರಿ ಐವರನ್ನು ಇತ್ತೀಚೆಗೆ ಬಂಧಿಸಲಾಗಿತ್ತು.

ಕೆಪಿಟಿಸಿಎಲ್ ಪರೀಕ್ಷಾ ಅಕ್ರಮ ಪ್ರಕರಣ; ಮತ್ತೆ ನಾಲ್ವರ ಬಂಧನ ಬಂಧಿತರ ಸಂಖ್ಯೆ 33ಕ್ಕೆ ಏರಿಕೆ!

ಕೆಪಿಟಿಸಿಎಲ್‌ ಪರೀಕ್ಷಾ ಅಕ್ರಮ: ಬೆಳಗಾವಿಯಲ್ಲಿ 6 ಮಂದಿ ಸೆರೆ 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ವಿರೋಧದ ಮಧ್ಯೆ ಬಂಗಾಳದಲ್ಲಿ ಬಾಬ್ರಿ ಮಸೀದಿಗೆ ಶಂಕು
ರಿಲಯನ್ಸ್‌ ಪವರ್‌, 10 ಮಂದಿ ವಿರುದ್ಧ ಇ.ಡಿ.ಚಾರ್ಜ್‌ಶೀಟ್‌