ರಾಜಸ್ಥಾನ ದರ್ಗಾ ಸಭೆಗೆ ನೂರಾರು ಮಂದಿ ಭಾಗಿ!

Published : Apr 02, 2020, 07:43 AM ISTUpdated : Apr 02, 2020, 08:57 AM IST
ರಾಜಸ್ಥಾನ ದರ್ಗಾ ಸಭೆಗೆ ನೂರಾರು ಮಂದಿ ಭಾಗಿ!

ಸಾರಾಂಶ

ದೆಹಲಿಯ ನಿಜಾಮುದ್ದೀನ್‌ ಮಸೀದಿಯಲ್ಲಿ ನಡೆದ ಧಾರ್ಮಿಕ ಸಭೆಯಲ್ಲಿ ಭಾಗಿಯಾಗಿದ್ದ ನೂರಾರು ಜನರಿಗೆ ಕೊರೋನಾ ಸೋಂಕು ತಗುಲಿದ ಘಟನೆ | ರಾಜಸ್ಥಾನ ದರ್ಗಾ ಸಭೆಗೆ ನೂರಾರು ಮಂದಿ ಭಾಗಿ| 

ಜೈಪುರ(ಏ.02): ದೆಹಲಿಯ ನಿಜಾಮುದ್ದೀನ್‌ ಮಸೀದಿಯಲ್ಲಿ ನಡೆದ ಧಾರ್ಮಿಕ ಸಭೆಯಲ್ಲಿ ಭಾಗಿಯಾಗಿದ್ದ ನೂರಾರು ಜನರಿಗೆ ಕೊರೋನಾ ಸೋಂಕು ತಗುಲಿದ ಘಟನೆ ಇನ್ನೂ ದೇಶದಲ್ಲಿ ಜನರಲ್ಲಿ ಅರಿವು ಮೂಡಿಸಿದಂತೆ ಕಾಣಿಸುತ್ತಿಲ್ಲ. ಏಕೆಂದರೆ ಈ ಘಟನೆಯ ಬೆನ್ನಲ್ಲೇ, ರಾಜಸ್ಥಾನದ ಅಜ್ಮೇರ್‌ ಜಿಲ್ಲೆಯ ಸರವಾರ್‌ ಪಟ್ಟಣ ದರ್ಗಾವೊಂದರಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ಧಾರ್ಮಿಕ ಸಭೆಯೊಂದರಲ್ಲಿ 100ಕ್ಕೂ ಹೆಚ್ಚು ಮಂದಿ ಪಾಲ್ಗೊಂಡಿದ್ದಾರೆ.

ಬಳಿಕ ಪೊಲೀಸರು ಬಂದು ಗುಂಪನ್ನು ಚದುರಿಸಿದ್ದು, ಲಾಕ್‌ಡೌನ್‌ ನಿಯಮ ಉಲ್ಲಂಘಿಸಿ ಸಭೆ ಆಯೋಜಿಸಿದ ಕಾರಣಕ್ಕಾಗಿ ಆರು ಮಂದಿಯನ್ನು ಬಂಧಿಸಿದ್ದಾರೆ.

ತಬ್ಲೀಘಿ ಸದಸ್ಯರಿಗಾಗಿ ತೀವ್ರ ಶೋಧ, ವಿದೇಶಿಗರ ಗಡೀಪಾರು!

ಸಂಪ್ರದಾಯದಂತೆ ಪ್ರತಿವರ್ಷ ಸರವಾರ್‌ ದರ್ಗಾಕ್ಕೆ ಅಜ್ಮೇರ್‌ನ ಸೂಫಿ ಸಂತ ಮೊಹಿಮುದ್ದೀನ್‌ ಚಿಸ್ತಿ ದರ್ಗಾದ ಧಾರ್ಮಿಕ ಮುಖಂಡರು ಚಾದರ ಅರ್ಪಿಸುತ್ತಾರೆ. ಆದರೆ, ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಜನರ ಓಡಾಟಕ್ಕೆ ನಿರ್ಬಂಧ ವಿಧಿಸಿದ್ದರೂ ದರ್ಗಾದ ಧಾರ್ಮಿಕ ಸಭೆಯಲ್ಲಿ 100ಕ್ಕೂ ಹೆಚ್ಚು ಮಂದಿ ಪಾಲ್ಗೊಂಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

25 ಜನರ ಬಲಿ ಪಡೆದ ಗೋವಾ ಕ್ಲಬ್ ಬೆಂಕಿ ದುರಂತ ಸಂಭವಿಸಿದ ಕೆಲ ಗಂಟೆಗಳಲ್ಲೇ ಥೈಲ್ಯಾಂಡ್‌ಗೆ ಹಾರಿದ ಕ್ಲಬ್ ಮಾಲೀಕ
Vande Mataram ಎರಡು ಪದಗಳ ಅರ್ಥ ವಿವರಿಸಿದ ಇಕ್ರಾ ಹಸನ್: ಸಂಸದೆಯ ಮಾತು ವೈರಲ್