
ದೆಹಲಿ: ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ಇಂದು ರೈತರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟಿದ್ದಾರೆ. ತೊಗರಿ, ಉದ್ದು ಸೇರಿ ಕೆಲವು ಆಹಾರ ಪದಾರ್ಥಗಳನ್ನು ಕನಿಷ್ಠ ಬೆಂಬಲ ಬೆಲೆಯಲ್ಲಿ ಶೇಕಡಾ 100ರಷ್ಟು ಸರ್ಕಾರವೇ ಖರೀದಿಸಲಿದೆ ಹಾಗೂ 48 ಗಂಟೆಗಳ ಒಳಗೆ ಪಾವತಿಗಳನ್ನು ಖಚಿತಪಡಿಸುವ ವ್ಯವಸ್ಥೆ ಮಾಡುವುದಾಗಿ ಸಚಿವರು ಭರವಸೆ ನೀಡಿದ್ದಾರೆ.
ದೆಹಲಿಯಲ್ಲಿ ಇಂದು ನಡೆದ 'ರಾಷ್ಟ್ರೀಯ ಕೃಷಿ ಸಮ್ಮೇಳನ - ಮುಂಗಾರು ಅಭಿಯಾನ 2026'ರ ಎರಡನೇ ದಿನದ ಕಾರ್ಯಕ್ರಮವನ್ನು ಉದ್ದೇಶಿಸಿ ಅವರು, ರೈತರು ತಮ್ಮ ಕೃಷಿ ಉತ್ಪನ್ನಗಳಿಗೆ ನ್ಯಾಯಯುತ ಮತ್ತು ಲಾಭದಾಯಕ ಬೆಲೆ ಪಡೆಯುವುದನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು ಬಹುಮುಖಿ ಕಾರ್ಯತಂತ್ರವನ್ನು ರೂಪಿಸುತ್ತಿದೆ. ಈ ಕಾರ್ಯತಂತ್ರವು ಕೊಯ್ಲು ನಂತರದ ನಿರ್ವಹಣೆ, ವೈಜ್ಞಾನಿಕ ಉಗ್ರಾಣ ವ್ಯವಸ್ಥೆ ಮತ್ತು ಮಾರುಕಟ್ಟೆ ವ್ಯವಸ್ಥೆಗಳನ್ನು ಬಲಪಡಿಸುವುದನ್ನು ಒಳಗೊಂಡಿದೆ ಎಂದ್ದಿದ್ದಾರೆ.
ಇದೇ ವೇಳೆ ಸಚಿವರು, ತೊಗರಿ, ಉದ್ದು ಮತ್ತು ಮಸೂರ ಬೇಳೆಗಳನ್ನು ಕನಿಷ್ಠ ಬೆಂಬಲ ಬೆಲೆಯಲ್ಲಿ ಶೇಕಡಾ 100ರಷ್ಟು ಸರ್ಕಾರವೇ ಖರೀದಿಸಲಿದೆ ಹಾಗೂ 48 ಗಂಟೆಗಳ ಒಳಗೆ ಪಾವತಿಗಳನ್ನು ಖಚಿತಪಡಿಸುವ ವ್ಯವಸ್ಥೆ ಮಾಡುವುದಾಗಿ ಸಚಿವರು ಭರವಸೆ ನೀಡಿದರು.
ದೇಶದ ಕೃಷಿ ಉತ್ಪನ್ನಗಳು, ಹಣ್ಣುಗಳು, ತರಕಾರಿಗಳು ಮತ್ತು ಆಹಾರ ಧಾನ್ಯಗಳನ್ನು ಜಾಗತಿಕ ಮಾರುಕಟ್ಟೆಗಳೊಂದಿಗೆ ಸಂಪರ್ಕಿಸಲು, ಅಂತರರಾಷ್ಟ್ರೀಯ ಮುಕ್ತ ವ್ಯಾಪಾರ ಒಪ್ಪಂದಗಳಿಂದ ಉದ್ಭವಿಸುವ ಹೊಸ ಮಾರುಕಟ್ಟೆ ಅವಕಾಶಗಳನ್ನು ಭಾರತ ಬಳಸಿಕೊಳ್ಳಲಿದೆ ಎಂದು ಹೇಳಿದರು. ಇದು ರೈತರು ತಮ್ಮ ಉತ್ಪನ್ನಗಳಿಗೆ ಉತ್ತಮ ಆದಾಯವನ್ನು ಪಡೆಯಲು ಸಹಾಯ ಮಾಡುವುದಲ್ಲದೆ, ಭಾರತವು ಜಗತ್ತಿಗೆ ಪ್ರಮುಖ ಆಹಾರ ಪೂರೈಕೆದಾರನಾಗಿ ಹೊರಹೊಮ್ಮಲು ಸಹಕಾರಿಯಾಗಲಿದೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ