
ಹೈದರಾಬಾದ್: ವಿಷದ ಇಂಜೆಕ್ಷನ್ ನೀಡಿ 100ಕ್ಕೂ ಹೆಚ್ಚು ಬೀದಿ ನಾಯಿಗಳನ್ನು ಹತ್ಯೆ ಮಾಡಿದ ಭೀಕರ ಘಟನೆ ಆಂಧ್ರಪ್ರದೇಶದ ರಾಜಧಾನಿ ಹೈದ್ರಾಬಾದ್ ಬಳಿ ನಡೆದಿದೆ.
ರಾಜಧಾನಿ ಹೊರವಲಯದ ಯಚರಂ ಎಂಬ ಗ್ರಾಮದಲ್ಲಿ 100ಕ್ಕೂ ಹೆಚ್ಚು ನಾಯಿಗಳಿಗೆ ವಿಷ ಚುಚ್ಚಿ ಹತ್ಯೆ ಮಾಡಲಾಗಿದೆ ಎಂದು ಪ್ರಾಣಿದಯಾ ಕಾರ್ಯಕರ್ತರೊಬ್ಬರು ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಕೃತ್ಯದಲ್ಲಿ ಭಾಗಿಯಾಗಿರುವ ಶಂಕೆ ಮೇರೆಗೆ ಯಚರಂನ ಸರಪಂಚ್ ಹಾಗೂ ಇನ್ನಿಬ್ಬರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಆದರೆ ತಪಾಸಣೆ ವೇಳೆ 50 ನಾಯಿಗಳ ಶವ ಪತ್ತೆಯಾಗಿದೆ. ಉಳಿದ ನಾಯಿಗಳಿಗಾಗಿ ಹುಡುಕಾಟ ಮುಂದುವರೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಜ.6ರಂದು ತೆಲಂಗಾಣದ ಹನಮಕೊಂಡ ಮತ್ತು ಕಾಮರೆಡ್ಡಿ ಜಿಲ್ಲೆಗಳ ವ್ಯಾಪ್ತಿಯಲ್ಲಿ ಕ್ರಮವಾಗಿ 300 ಮತ್ತು 200 ನಾಯಿಗಳನ್ನು ಇದೇ ರೀತಿ ಹತ್ಯೆ ಮಾಡಲಾಗಿತ್ತು. ಈ ಸಂಬಂಧ ಒಟ್ಟು 14 ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ಅಧಿಕಾರಕ್ಕೆ ಬಂದರೆ ನಾಯಿಗಳನ್ನು ಹತ್ಯೆ ಮಾಡುವುದಾಗಿ ಚುನಾವಣೆ ವೇಳೆ ನೀಡಿದ್ದ ಭರವಸೆ ಈಡೇರಿಸಲು ನಾಯಿಗಳ ಹತ್ಯೆ ಮಾಡಲಾಗಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ