
ವಿಶಾಖಪಟ್ಟಣಂ(ಮಾ.29): ಆಂಧ್ರ ವಿಶ್ವವಿದ್ಯಾಲಯದ ಎಂಜಿನಿಯರಿಂಗ್ ಕಾಲೇಜಿನ 100 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಇದೀಗ ಅಧಿಕಾರಿಗಳು ಹಾಸ್ಟೆಲ್‌ನಲ್ಲಿರುವ ಒಂದು ಬ್ಲಾಕ್ ಅನ್ನು ಪ್ರತ್ಯೇಕ ವಾರ್ಡ್ ಆಗಿ ಪರಿವರ್ತಿಸಿದ್ದಾರೆ.
ಎಂಜಿನಿಯರಿಂಗ್ ಕಾಲೇಜಿನ 102 ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗೆ COVID-19 ಪಾಸಿಟಿವ್ ಬಂದಿದೆ. ವಿಶ್ವವಿದ್ಯಾಲಯದ ಅಧಿಕಾರಿಗಳ ಪ್ರಕಾರ, ಕ್ಯಾಂಪಸ್‌ನಲ್ಲಿ ವರದಿಯಾದ 102 ಕೋವಿಡ್ -19 ಪ್ರಕರಣಗಳಲ್ಲಿ 96 ಪುರುಷ ವಿದ್ಯಾರ್ಥಿಗಳು, ಒಬ್ಬರು ಮಹಿಳಾ ವಿದ್ಯಾರ್ಥಿನಿ ಮತ್ತು ಐದು ಮಂದಿ ಸಿಬ್ಬಂದಿ ಇದ್ದಾರೆ.
ಈ ರೋಗಿಗಳ ಪ್ರಾಥಮಿಕ ಸಂಪರ್ಕಗಳನ್ನು ಕಂಡುಹಿಡಿಯಲಾಗುತ್ತಿದೆ ಮತ್ತು ವೈರಸ್ ಮತ್ತಷ್ಟು ಹರಡುವಿಕೆಯನ್ನು ಕಂಡುಹಿಡಿಯಲು ಅವರ ಮಾದರಿಗಳನ್ನು ಪರೀಕ್ಷಿಸಲಾಗುತ್ತಿದೆ ಎನ್ನಲಾಗಿದೆ. ಪ್ರೋಟೋಕಾಲ್ ಪ್ರಕಾರ ಇದುವರೆಗೆ ಸುಮಾರು ಒಂದು ಸಾವಿರ ವಿದ್ಯಾರ್ಥಿಗಳನ್ನು ಪರೀಕ್ಷಿಸಲಾಯಿತು.
ವೈರಸ್‌ಗೆ ಪಾಸಿಟಿವ್ ಬಂದವರಿಗೆ ಚಿಕಿತ್ಸೆ ನೀಡಲು ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿದ ರಾಜ್ಯ ಪ್ರವಾಸೋದ್ಯಮ ಸಚಿವ ಎಂ.ಎಸ್. ಶ್ರೀನಿವಾಸ ರಾವ್ ಹೇಳಿದ್ದಾರೆ.
ವಸತಿ ಶಾಲೆಯಲ್ಲಿ ಕೊರೋನಾ ಸ್ಫೋಟ: ಪೋಷಕರಲ್ಲಿ ಹೆಚ್ಚಾದ ಆತಂಕ..!
ಸೋಂಕಿಗೆ ಒಳಗಾದವರಿಗೆ ಚಿಕಿತ್ಸೆ ನೀಡಲು ಜಿಲ್ಲಾ ಅಧಿಕಾರಿಗಳು ಅಗತ್ಯವಿರುವ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ಪ್ರತ್ಯೇಕ ಬ್ಲಾಕ್ಗಳನ್ನು ವ್ಯವಸ್ಥೆ ಮಾಡಲಾಗಿದೆ ಮತ್ತು ಅಗತ್ಯವಾದ COVID-19 ಕಿಟ್‌ಗಳನ್ನು ವಿತರಿಸಲಾಗಿದೆ. ಪೋಷಕರು ಚಿಂತಿಸಬೇಕಾಗಿಲ್ಲ, ಎಂದು ಅವರು ಹೇಳಿದ್ದಾರೆ.
ಪ್ರಾಥಮಿಕ ಸಂಪರ್ಕಗಳನ್ನು ಮತ್ತೊಂದು ಪ್ರತ್ಯೇಕ ಬ್ಲಾಕ್ನಲ್ಲಿ ಗಮನಿಸಲಾಗುತ್ತಿದೆ ಎಂದು ಸಚಿವರು ಹೇಳಿದರು. ಕಿಂಗ್ ಜಾರ್ಜ್ ಆಸ್ಪತ್ರೆಯಲ್ಲಿ ಸುಮಾರು 550 ಹಾಸಿಗೆಗಳು ಮತ್ತು ವಿಶಾಕಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ವಿಮ್ಸ್) ನಲ್ಲಿ 650 ಹಾಸಿಗೆಗಳು ತುರ್ತು ಸಂದರ್ಭಗಳಲ್ಲಿ ಸುಲಭವಾಗಿ ಲಭ್ಯವಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ