8 ಕನ್ನಡಿಗರು ಸೇರಿ 106 ಪುರಸ್ಕೃತರಿಗೆ ಇಂದು ಪದ್ಮಪ್ರಶಸ್ತಿ ಪ್ರದಾನ

Published : Mar 22, 2023, 07:25 AM IST
 8 ಕನ್ನಡಿಗರು ಸೇರಿ  106 ಪುರಸ್ಕೃತರಿಗೆ ಇಂದು ಪದ್ಮಪ್ರಶಸ್ತಿ ಪ್ರದಾನ

ಸಾರಾಂಶ

2023ನೇ ಸಾಲಿನಲ್ಲಿ ಪದ್ಮ ಪ್ರಶಸ್ತಿಗೆ ಭಾಜನರಾದ 106 ಮಂದಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಬುಧವಾರ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ, ಸಾಹಿತಿ ಎಸ್‌.ಎಲ್‌.ಭೈರಪ್ಪ ಸೇರಿದಂತೆ ಹಲವರು ಪ್ರಶಸ್ತಿ ಸ್ವೀಕರಿಸಲಿದ್ದಾರೆ.

ನವದೆಹಲಿ: 2023ನೇ ಸಾಲಿನಲ್ಲಿ ಪದ್ಮ ಪ್ರಶಸ್ತಿಗೆ ಭಾಜನರಾದ 106 ಮಂದಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಬುಧವಾರ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ, ಸಾಹಿತಿ ಎಸ್‌.ಎಲ್‌.ಭೈರಪ್ಪ ಸೇರಿದಂತೆ ಹಲವರು ಪ್ರಶಸ್ತಿ ಸ್ವೀಕರಿಸಲಿದ್ದಾರೆ.

2023ನೇ ಸಾಲಿನಲ್ಲಿ 6 ಪದ್ಮವಿಭೂಷಣ, 9 ಪದ್ಮಭೂಷಣ ಮತ್ತು 91 ಪದ್ಮ ಪ್ರಶಸ್ತಿಗಳನ್ನು ಘೋಷಿಸಲಾಗಿತ್ತು. ಮಂಗಳವಾರ ರಾಷ್ಟ್ರಪತಿ ಭವನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮುರ್ಮು (President Draupadi Murmu) ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ (S.M.Krishna) ಅವರು ಪದ್ಮವಿಭೂಷಣ ಪ್ರಶಸ್ತಿಗೆ ಭಾಜನರಾಗಿದ್ದು, ಸಾಹಿತಿ ಭೈರಪ್ಪ (Bhairappa) ಹಾಗೂ ಸುಧಾಮೂರ್ತಿ ಪದ್ಮಭೂಷಣ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಉಳಿದಂತೆ ಕರ್ನಾಟಕದಿಂದ ವಿಜ್ಞಾನಿ ಖಾದರ್‌ವಲ್ಲಿ ದುಡೇಕುಲ, ಉಮ್ಮತ್ತಾಟ್‌ (Ummattat dance)ನೃತ್ಯ ಕಲಾವಿದೆ ರಾಣಿ ಮಾಚಯ್ಯ, ತಮಟೆ ವಾದಕ ಮುನಿವೆಂಕಟಪ್ಪ, ರಶೀದ್‌ ಅಹಮದ್‌ ಖಾದ್ರಿ, ಎಸ್‌.ಸುಬ್ಬರಾಮನ್‌ ಅವರು ಪ್ರಶಸ್ತಿಗೆ ಭಾಜನರಾಗಿದ್ದಾರೆ. ಇವರಲ್ಲದೇ ಖ್ಯಾತ ಗಾಯಕಿ ವಾಣಿ ಜಯರಾಂ ಹಾಗೂ ಆಸ್ಕರ್‌ ಪ್ರಶಸ್ತಿ ಗೆದ್ದ ಸಂಗೀತ ನಿರ್ದೇಶಕ ಎಂ.ಎಂ.ಕೀರವಾಣಿ ಅವರು ಸಹ ಪ್ರಶಸ್ತಿ ಸ್ವೀಕರಿಸಲಿದ್ದಾರೆ.

ದೇಶದ್ರೋಹಿ ಮುಲಾಯಂ ಸಿಂಗ್‌ಗೆ ನೀಡಿರುವ ಪದ್ಮ ಪ್ರಶಸ್ತಿ ಹಿಂಪಡೆಯಿರಿ: ಪ್ರಮೋದ್‌ ಮುತಾಲಿಕ್

 

ಮುಲಾಯಂಗೆ ಭಾರತ ರತ್ನ ನೀಡ್ಬೇಕಿತ್ತು, ಪದ್ಮವಿಭೂಷಣ ನೀಡಿ ಅವಮಾನ ಮಾಡಿದ್ದೀರಿ ಎಂದ ಎಸ್‌ಪಿ ನಾಯಕ!

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಅರಾವಳಿ ಉಳಿಸಿ: ಜನವರಿ 7 ರಿಂದ ಯುವ ಕಾಂಗ್ರೆಸ್‌ನಿಂದ 1,000 ಕಿ.ಮೀ ಬೃಹತ್ ಪಾದಾಯಾತ್ರೆ!
ಲಕ್ನೋ: ಪ್ರಧಾನಿ ಮೋದಿ ಕಾರ್ಯಕ್ರಮ ಮುಗಿಯುತ್ತಿದ್ದಂತೆಯೇ ಹೂಕುಂಡಗಳ ಲೂಟಿ; ವಿಡಿಯೋ ವೈರಲ್