
ಮುಂಬೈ (ಏ.17): ಮಹಾರಾಷ್ಟ್ರದ ಖರ್ಘರ್‌ನಲ್ಲಿ ಆಯೋಜಿಸಲಾಗಿದ್ದ ‘ಮಹಾರಾಷ್ಟ್ರ ಭೂಷಣ್’ ಪ್ರಶಸ್ತಿ ವಿತರಣಾ ಸಮಾರಂಭದ ವೇಳೆ ಭಾರೀ ಬಿಸಿಲಿನ ಹೊಡೆತ ತಾಳಲಾಗದೇ 11 ಜನರು ಸಾವನ್ನಪ್ಪಿದ ಕರುಣಾಜನಕ ಘಟನೆ ಭಾನುವಾರ ನಡೆದಿದೆ. ಘಟನೆಯಲ್ಲಿ 600ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿದ್ದಾರೆ. ಈ ಪೈಕಿ ಕೆಲವರಿಗೆ ಪ್ರಾಥಮಿಕ ಚಿಕಿತ್ಸೆ ನೀಡಿ ಮನೆಗೆ ಕಳುಹಿಸಲಾಗಿದೆ. ಇನ್ನು ಕೆಲವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ, ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್ ಶಿಂಧೆ, ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಸೇರಿದಂತೆ ಹಲವು ರಾಜಕೀಯ ನಾಯಕರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ದುರಂತದ ಬಗ್ಗೆ ಮುಖ್ಯಮಂತ್ರಿ ಶಿಂಧೆ ತೀವ್ರ ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ. ಜೊತೆಗೆ ಸಾವನ್ನಪ್ಪಿದವರ ಕುಟುಂಬಕ್ಕೆ ತಲಾ 5 ಲಕ್ಷ ರು. ಪರಿಹಾರ ಘೋಷಿಸಿದ್ದಾರೆ.
ದೆಹಲಿ ಮದ್ಯ ಹಗರಣ: ಸಿಎಂ ಕೇಜ್ರಿಗೆ ಸಿಬಿಐ ಸತತ 9 ತಾಸು ಗ್ರಿಲ್!
ಏನಾಯ್ತು?:
ಮಹಾರಾಷ್ಟ್ರ ಸರ್ಕಾರ ಕೊಡಮಾಡುವ ‘ಮಹಾರಾಷ್ಟ್ರ ಭೂಷಣ್’ ಪ್ರಶಸ್ತಿ(Maharashtra Bhushan Award)ಯನ್ನು ಈ ಬಾರಿ ಸಮಾಜ ಸುಧಾರಕ ಮತ್ತು ಧಾರ್ಮಿಕ ನಾಯಕ ಅಪ್ಪಾಸಾಹೇಬ್ ಧರ್ಮಾಧಿಕಾರಿ(Appasaheb Dharmadhikari) ಅವರಿಗೆ ಘೋಷಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ನವಿ ಮುಂಬೈ(Navi mumbai)ನಲ್ಲಿ ಪ್ರಶಸ್ತಿ ವಿತರಣಾ ಕಾರ್ಯಕ್ರಮ ಆಯೋಜಿಸಲಾಗಿತ್ತು. ಅಪ್ಪಾಸಾಹೇಬ್ ಅವರ ಬೆಂಬಲಿಗರು ಭಾರೀ ಪ್ರಮಾಣದಲ್ಲಿ ಸೇರುವ ಸಾಧ್ಯತೆ ಇದ್ದ ಕಾರಣ 306 ಎಕರೆ ಜಾಗದ ತೆರೆದ ಮೈದಾನದಲ್ಲಿ ಬೃಹತ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮ ಆಯೋಜಕರು ಸ್ಥಳದಲ್ಲಿ 20 ಲಕ್ಷ ಜನರು ನೆರೆದಿದ್ದರು ಎಂದು ಹೇಳಿದ್ದರೆ, ಪೊಲೀಸರು ಕನಿಷ್ಠ 3 ಲಕ್ಷ ಜನರು ಕಾರ್ಯಕ್ರಮಕ್ಕೆ ಆಗಮಿಸಿದ್ದರು ಎಂದು ಮಾಹಿತಿ ನೀಡಿದ್ದರು. ಈ ಪೈಕಿ ಕೆಲವರು ಶನಿವಾರವೇ ಕಾರ್ಯಕ್ರಮ ಸ್ಥಳಕ್ಕೆ ಆಗಮಿಸಿ ಭಾನುವಾರ ಸಂಜೆಯವರೆಗೂ ಅಲ್ಲಿಯೇ ಇದ್ದರು.
ಆದರೆ ಭಾನುವಾರ ಕಾರ್ಯಕ್ರಮದ ಸ್ಥಳದಲ್ಲಿ ಉಷ್ಣಾಂಶ() 38-42(High temperature) ಡಿ.ಸೆ.ವರೆಗೂ ತಲುಪಿದ ಕಾರಣ ನೂರಾರು ಜನರು ನಿರ್ಜಲೀಕರಣ(Dehydration), ಹೃದಯ ಸಂಬಂಧ ಸಮಸ್ಯೆಗಳಿಗೆ(, heart related problem)) ತುತ್ತಾಗಿ ಏಕಾಏಕಿ ಕುಸಿದು ಬಿದ್ದು 11 ಜನರು ಸಾವನ್ನಪ್ಪಿದ್ದಾರೆ. ಈ ವೇಳೆ ಉಳಿದ ಜನರು ಆತಂಕಗೊಂಡು ಕಾಲ್ತುಳಿತದಂಥ ಹಲವು ಘಟನೆಗಳು ಕಾರ್ಯಕ್ರಮದ ಸ್ಥಳದಲ್ಲಿ ಸಂಭವಿಸಿದೆ. ತೀವ್ರವಾಗಿ ಅಸ್ವಸ್ಥಗೊಂಡವರ ಪೈಕಿ 15ಕ್ಕೂ ಹೆಚ್ಚು ಜನರನ್ನು ಐಸಿಯುನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ