ಅಭಿವೃದ್ಧಿಯ ನಡುವೆಯೂ ಭಾರತದಲ್ಲಿ 12.9 ಕೋಟಿ ಕಡು ಬಡವರು: ವಿಶ್ವ ಬ್ಯಾಂಕ್

Published : Oct 17, 2024, 10:45 AM IST
ಅಭಿವೃದ್ಧಿಯ ನಡುವೆಯೂ ಭಾರತದಲ್ಲಿ 12.9 ಕೋಟಿ ಕಡು ಬಡವರು: ವಿಶ್ವ ಬ್ಯಾಂಕ್

ಸಾರಾಂಶ

ಭಾರತದಲ್ಲಿ 12.9 ಕೋಟಿ ನಾಗರಿಕರು ತೀವ್ರ  ಬಡತನದಲ್ಲಿ ಜೀವನ ನಡೆಸುತ್ತಿದ್ದಾರೆ ಎಂದು ವಿಶ್ವ ಬ್ಯಾಂಕ್ ವರದಿ ಹೇಳಿದೆ. 

ನವದೆಹಲಿ: ಭಾರತದಲ್ಲಿ 12.9 ಕೋಟಿ ನಾಗರಿಕರು ತೀವ್ರ  ಬಡತನದಲ್ಲಿ ಜೀವನ ನಡೆಸುತ್ತಿದ್ದಾರೆ ಎಂದು ವಿಶ್ವ ಬ್ಯಾಂಕ್ ವರದಿ ಹೇಳಿದೆ. ಆದರೆ 2021ಕ್ಕೆ ಹೋಲಿಸಿದರೆ ಈ ಪ್ರಮಾಣ 3.8 ಕೋಟಿಯಷ್ಟು ಕಡಿಮೆಯಾಗಿದೆ ಎಂದು ವಿಶ್ವ ಬ್ಯಾಂಕ್ ಅಂಕಿ ಅಂಶ ಹೇಳಿದೆ. ವರದಿ ಪ್ರಕಾರ, 'ಭಾರತದಲ್ಲಿ ಪ್ರಸ್ತಕ ವರ್ಷದಲ್ಲಿ 12.9 ಕೋಟಿ ಜನರು ದಿನಕ್ಕೆ 181 ರು.ಗಿಂತಲೂ ಕಡಿಮೆ ಆದಾಯವನ್ನು ಹೊಂದಿದ್ದಾರೆ. 2021 ರಲ್ಲಿ ಭಾರತದಲ್ಲಿ ಬಡತನದ ಪ್ರಮಾಣ 16.7 ಕೋಟಿಯಷ್ಟಿತ್ತು. ಆದರೆ 2 ವರ್ಷಗಳಲ್ಲಿ ಈ ಪ್ರಮಾಣ 3.8 ಕೋಟಿಯಷ್ಟು ಇಳಿಕೆಯಾಗಿದೆ. ಈ ಪ್ರಮಾಣ ಮುಂದಿನ ದಿನಗಳಲ್ಲಿ ಮತ್ತಷ್ಟು ಕಡಿಮೆಯಾಗಲಿದೆ' ಎಂದು ಹೇಳಿದೆ.

ನೈಜೀರಿಯಾ ಪೆಟ್ರೋಲ್ ಟ್ಯಾಂಕರ್ ಸ್ಫೋಟಕ್ಕೆ 140 ಬಲಿ
ಅಬುಜಾ: ಪೆಟ್ರೋಲ್ ಟ್ಯಾಂಕರ್ ಸ್ಫೋಟಗೊಂಡು ಕನಿಷ್ಠ 140 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು, 50 ಮಂದಿ ಗಾಯಗೊಂಡ ದುರ್ಘಟನೆ ನೈಜೀರಿಯಾದ ಜಿಗಾವಾ ರಾಜ್ಯದಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ. ಮಜಿಯಾದಲ್ಲಿನ ವಿಶ್ವವಿದ್ಯಾನಿಲಯದ ಸಮೀಪದ ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪೆಟ್ರೋಲ್ ಟ್ಯಾಂಕರ್‌ ಉರುಳಿ ಬಿದ್ದಿತ್ತು. ಟ್ಯಾಂಕರ್‌ನಿಂದ ಪೆಟ್ರೋಲ್ ಸಂಗ್ರಹಿಸಲು ಅಲ್ಲಿನ ಸ್ಥಳೀಯರು ಹೆಚ್ಚಿನ ಸಂಖ್ಯೆಯಲ್ಲಿ ಒಮ್ಮೆಲೆ ಆಗಮಿಸಿದ್ದರು. ಇದರಿಂದಲೇ ಸ್ಫೋಟ ಸಂಭವಿಸಿದೆ. ಈ ಘಟನೆಯಲ್ಲಿ ಗಾಯಗೊಂಡ ವರನ್ನು ಹತ್ತಿರದ ಆಸ್ಪತ್ರೆಗೆ ಸೇರಿಸಲಾಗಿದೆ.

ಜೀವಂತ ಪ್ರಾಣಿಗಳ ಫೋಟೋ, ವಿಡಿಯೋಗಳಿಗೆ ತಾಲಿಬಾನ್ ಬ್ಯಾನ್
ಇಸ್ಲಾಮಾಬಾದ್‌: ಈಗಾಗಲೇ ಮಹಿಳೆಯರ ಶಿಕ್ಷಣ, ಸಂಗೀತ, ಹೊರ ಸಂಚಾರದ ಮೇಲೆ ನಾನಾ ರೀತಿಯ ನಿಷೇಧ ಹೇರಿರುವ ಅಫ್ಘಾನಿಸ್ತಾನದ ತಾಲಿಬಾನ್ ಸರ್ಕಾರ, ಇದೀಗ ಮಾಧ್ಯಮಗಳ ಮೇಲೂ ಕೆಲ ನಿಷೇಧ ಹೇರಿದೆ. ಯಾವುದೇ ಜೀವಂತ ಪ್ರಾಣಿಗಳ ಫೋಟೋ, ವಿಡಿಯೋ ಪ್ರಸಾರದ ಮೇಲೆ ತಾಲಿಬಾನ್ ನಿಷೇಧ ಹೇರಿದೆ. ಇಂಥದ್ದೊಂದು ಆದೇಶ ದೇಶದ ಹಲವು ಪ್ರದೇಶಗಳಲ್ಲಿ ಜಾರಿಗೆ ಬಂದಿದೆ. ಸರ್ಕಾರದ ಅಧೀನದಲ್ಲಿರುವ ಟೀವಿ ಮತ್ತು ಇತರೆ ಮಾಧ್ಯಮಗಳಲ್ಲಿ ಈ ನೀತಿ ಜಾರಿ ಮಾಡಲಾಗಿದೆ. ನೈತಿಕ ಕಾನೂನಿನ ಪಾಲನೆಗಾಗಿ ಈ ನಿಯಮ ಜಾರಿಗೆ ತರಲಾಗಿದೆ ಎಂದು ತಾಲಿಬಾನ್ ಸರ್ಕಾರ ಹೇಳಿಕೊಂಡಿದೆ. ಜೀವಂತ ಪ್ರಾಣಿಗಳ ಪಟ್ಟಿಯಲ್ಲಿ ಮಾನವರು, ಪ್ರಾಣಿಗಳು ಕೂಡಾ ಸೇರಿವೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಬಾಬ್ರಿ ಮಸೀದಿಗೆ ಅಡಿಗಲ್ಲು ವಿವಾದ ಬೆನ್ನಲ್ಲೇ ಬಂಗಾಳದಲ್ಲಿ 5 ಲಕ್ಷ ಹಿಂದೂಗಳಿಂದ ಭಗವದ್ಗೀತೆ ಪಠಣ
ಖ್ಯಾತ ಸ್ಟಾರ್ ನಟನಿಗೆ ಬಿಷ್ಟೋಯ್ ಗ್ಯಾಂಗ್ ಬೆದರಿಕೆ! ಆತಂಕದಲ್ಲಿರುವ ಫ್ಯಾನ್ಸ್, ಏನಾಗ್ತಿದೆ ಅಲ್ಲೀಗ?