
ಮುಂಬೈ: ಚಿತ್ರ ವಿಚಿತ್ರ ಪ್ರಾಣಿಗಳ ಕಳ್ಳಸಾಗಣೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತರು ಬ್ಯಾಂಕಾಕ್‌ನಿಂದ ಭಾರತಕ್ಕೆ ಈ ವಿಚಿತ್ರ ವಿಲಕ್ಷಣ ಹಾಗೂ ಅತೀ ಅಪರೂಪದ ಪ್ರಾಣಿಗಳನ್ನು ಕಳ್ಳಸಾಗಣೆ ಮಾಡಿದ್ದರು. ಬಂಧಿತರಿಬ್ಬರು ಭಾರತ ಮುಂಬೈ ನಿವಾಸಿಗಳಾಗಿದ್ದು, ಛತ್ರಪತಿ ಶಿವಾಜಿ ಮಹಾರಾಜ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅವರನ್ನು ಬಂಧಿಸಲಾಗಿದೆ. ಬಂಧಿತರಿಂದ 120 ಜೀವಂತವಿದ್ದ ವಿವಿಧ ಜಾತಿಯ ಪ್ರಾಣಿಗಳನ್ನು ವಶಕ್ಕೆ ಪಡೆಯಲಾಗಿದೆ.
ಇವರು ಬ್ಯಾಂಕಾಕ್‌ನಿಂದ ಭಾರತಕ್ಕೆ ಕಳ್ಳಸಾಗಣೆ ಮಾಡಿದ ಪ್ರಾಣಿಗಳಲ್ಲಿಇಗುವಾನಾಗಳು, ಸುಮಾತ್ರನ್ ಪಟ್ಟೆ ಮೊಲಗಳು (Sumatran striped rabbits), ಬೆಸಿಲಿಸ್ಕ್ ಹಲ್ಲಿಗಳು(Basilisk lizards) ಮತ್ತು ಕಸ್ಕಸ್ (cuscus) ಸೇರಿವೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಈ ಕಳ್ಳಸಾಗಣೆ ಬಗ್ಗೆ ನಿರ್ದಿಷ್ಟ ಮಾಹಿತಿಯ ಮೇರೆಗೆ ಮುಂಬೈ ಏರ್‌ಪೋರ್ಟ್‌ನ ಕಸ್ಟಮ್ಸ್ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಈ ಇಬ್ಬರು ಸ್ಮಗ್ಮರ್‌ಗಳನ್ನು ಬಂಧಿಸಿದ್ದಾರೆ. ಬ್ಯಾಂಕಾಕ್‌ನಿಂದ ಬಂದ ಇಬ್ಬರು ಪ್ರಯಾಣಿಕರನ್ನು ತಡೆದು ಅವರ ಚೀಲಗಳನ್ನು ಪರಿಶೀಲಿಸಿದಾಗ ಅದರಲ್ಲಿದ್ದ ಪ್ಲಾಸ್ಟಿಕ್ ಮತ್ತು ಸೆಣಬಿನ ಪೆಟ್ಟಿಗೆಗಳಲ್ಲಿ ಪ್ರಾಣಿಗಳನ್ನು ತುಂಬಿರುವುದು ಕಂಡುಬಂದಿದೆ. ಈ ಪ್ರಾಣಿಗಳನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ವನ್ಯಜೀವಿ ಸಂರಕ್ಷಣಾ ಕಾಯ್ದೆ ಸೇರಿದಂತೆ ಹಲವು ಸೆಕ್ಷನ್‌ಗಳಡಿ ಪ್ರಕರಣ ದಾಖಲಾಗಿದೆ. ಕಸ್ಟಮ್ಸ್ ಅಧಿಕಾರಿಗಳು ಈ ಪ್ರಾಣಿಗಳನ್ನು ವನ್ಯಜೀವಿ ಸಂರಕ್ಷಣಾ ಕಾಯ್ದೆ ಮತ್ತು ಕಸ್ಟಮ್ಸ್ ಮತ್ತು ವನ್ಯಜೀವಿ ಅಪರಾಧ ನಿಯಂತ್ರಣ ಬ್ಯೂರೋದ ನಿಯಮಗಳ ಅಡಿಯಲ್ಲಿ ಸೂಕ್ತ ಕಾರ್ಯವಿಧಾನವನ್ನು ಅನುಸರಿಸಿದ ನಂತರ ಅವುಗಳನ್ನು ವಾಪಾಸ್ ಅವುಗಳ ಮೂಲ ದೇಶಕ್ಕೆ ಕಳುಹಿಸಲಾಗುತ್ತಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ