PM-CMs Meeting ಮುಖ್ಯಮಂತ್ರಿಗಳ ಜತೆ ಗುರುವಾರ ಪ್ರಧಾನಿ ಸಭೆ, ಎದುರುನೋಡುತ್ತಿರುವ ಕರ್ನಾಟಕ

By Suvarna News  |  First Published Jan 12, 2022, 9:42 PM IST

* ದೇಶದಲ್ಲಿ ಕೊರೋನಾ ಹಾಗೂ ಒಮಿಕ್ರಾನ್ ಹೆಚ್ಚಳ
* ಮುಖ್ಯಮಂತ್ರಿಗಳ ಜತೆ ಗುರುವಾರ(ಜ.13) ಪ್ರಧಾನಿ ಮೋದಿ ಸಭೆ
* ಸಿಎಂ-ಪಿಎಂ ಸಭೆ ಎದುರುನೋಡುತ್ತಿರುವ ಕರ್ನಾಟಕ
* ಕರ್ನಾಟಕದಲ್ಲಿ ಲಾಕ್‌ಡೌನ್ ಆಗುತ್ತಾ? ಅಥವಾ ಮತ್ತಷ್ಟು ಟಫ್ ರೂಲ್ಸ್ ಜಾರಿಯಾಗುತ್ತಾ?


ಬೆಂಗಳೂರು, (ಜ.12): ಭಾರತದಲ್ಲಿ(India)  ಕೊರೋನಾ ಹಾಗೂ ಒಮಿಕ್ರಾನ್ (Coronavrius and Omicron)  ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ನಾಳೆ ಅಂದ್ರೆ ಜನವರಿ 13ರಂದು ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಲಿದ್ದಾರೆ. 

ಮುಖ್ಯಮಂತ್ರಿಗಳ ಜತೆ ಗುರುವಾರ(ಜ.13) ಪ್ರಧಾನಿಮಂತ್ರಿ ನರೇಂದ್ರ ಮೋದಿ ಸಭೆಯನ್ನು ಕರ್ನಾಟಕ (Karnataka) ಎದುರುನೋಡುತ್ತಿದೆ. ಯಾಕಂದ್ರೆ, ಕರ್ನಾಟಕದಲ್ಲಿ  ಕೊರೋನಾ ಸೋಂಕಿನ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಫೆಬ್ರವರಿಯಲ್ಲಿ ಗರಿಷ್ಠ ಪ್ರಮಾಣಕ್ಕೆ ಕೊರೊನಾ 3ನೇ ಅಲೆ ಹೋಗಲಿದೆ ಎಂದು ತಜ್ಞರು ಎಚ್ಚರಿಕೆ ನೀಡಿದ ಬೆನ್ನಲ್ಲೇ ಈ ಸಭೆ ಮಹತ್ವ ಪಡೆದಿದೆ.

Tap to resize

Latest Videos

undefined

Covid In Bengaluru: 'ಲಕ್ಷಣರಹಿತ ಸೋಂಕಿತರಿಗೆ ಮನೆಯಲ್ಲೇ ಐಸೋಲೇಷನ್‌'

ವೀಕೆಂಡ್, ನೈಟ್ ಕರ್ಫ್ಯೂ (Weekend and Night Curfew) ಸೇರಿದಂತೆ ಇತರೆ ಕಠಿಣ ನಿಯಮ ಜಾರಿಗೆ ತಂದರೂ ಸೋಂಕು ನಿಯಂತ್ರಣವಾಗುತ್ತಿಲ್ಲ. ಇದರಿಂದ ಲಾಕ್‌ಡೌನ್ ಮಾತುಗಳು ಕೇಳಿಬರುತ್ತಿವೆ. ಇದರ ಮಧ್ಯೆ ಮುಖ್ಯಮಂತ್ರಿಗಳ ಜತೆ ಮೋದಿ ಸಭೆ ಮಾಡುತ್ತಿದ್ದು, ಲಾಕ್‌ಡೌನ್, ಟಫ್‌ರೂಲ್ಸ್ ಬಗ್ಗೆ ಚರ್ಚೆಯಾಗಲಿದೆ. ಅಲ್ಲದೇ ಇನ್ನಷ್ಟು ಕಠಿಣ ಕ್ರಮಕೈಗೊಳ್ಳಿ ಎಂದು ಮೋದಿ ಸಲಹೆ ನೀಡುವ ಸಾಧ್ಯತೆಗಳಿವೆ.

ಆಸ್ಪತ್ರೆಗಳ(Hospital) ಸಿದ್ಧತೆ, ಕೊವೀಡ್ ಆಸ್ಪತ್ರೆಗಳ ಪುನಾರಂಭ, ಐಸಿಯು, ಆಕ್ಸಿಜನ್ ಬೆಡ್, ಆಕ್ಸಿಜನ್ ಲಭ್ಯತೆ, ಔಷಧಿಗಳ ಲಭ್ಯತೆ ಬಗ್ಗೆ ಪರಾಮರ್ಶೆ ನಡೆಯಬಹುದು. ಮಕ್ಕಳಿಗಾಗಿ ಮಾಡಿಕೊಂಡ ವಿಶೇಷ ತಯಾರಿಗಳು, ಕೇಂದ್ರ ತಾಂತ್ರಿಕ ನೆರವಿನ ಅವಶ್ಯಕತೆ ಕೇಳಬಹುದು. ಸೋಂಕು ನಿಯಂತ್ರಣಕ್ಕೆ ಟಫ್ ರೂಲ್ಸ್ ಜಾರಿ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆಯಿದೆ. 

Covid 19 Control: ಗುರುವಾರ ಸಿಎಂಗಳ ಜೊತೆ ಪ್ರಧಾನಿ ಮೋದಿ ಸಭೆ, ರಾಜ್ಯದ ಲಾಕ್‌ಡೌನ್ ಭವಿಷ್ಯ ನಿರ್ಧಾರ?

ಕರ್ನಾಟಕದಲ್ಲಿ ಮತ್ತಷ್ಟು ಕಠಿಣ ನಿಯಮ
ಲಾಕ್‍ಡೌನ್ ಹೆಸರು ಹೇಳದೇ ಕರ್ನಾಟಕ ಸರ್ಕಾರ ಕಠಿಣ ನಿಯಮಗಳನ್ನು ಜಾರಿ ಮಾಡುವ ಸಾಧ್ಯತೆಯಿದೆ. ಪ್ರಧಾನಿ ಮೋದಿ ಸಲಹೆ ಸೂಚನೆಗಳನ್ನ ಆಧರಿಸಿ ಬಳಿಕ ತಜ್ಞರ ವರದಿಯನ್ನು ನೋಡಿಕೊಂಡು ಕಠಿಣ ಕ್ರಮಕೈಗೊಳ್ಳಬಹುದು.. 

ಈಗಾಗಲೇ ಕರ್ನಾಟಕ ಆರೋಗ್ಯ ಸಚಿವ ಡಾ ಕೆ ಸುಧಾಕರ್(dr K Sudhakar) ಅವರು ಲಾಕ್‌ಡೌನ್ ಮಾಡುವುದಿಲ್ಲ. ಅದೊಂದೇ ಪರಿಹಾರವಲ್ಲ ಎಂದು ಈಗಾಗಲೇ ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಲಾಕ್‌ಡೌನ್ ಮಾಡುವ ಬದಲಿಗೆ ಇನ್ನಷ್ಟು ಕಟ್ಟುನಿಟ್ಟಿನ ಕ್ರಮಗಳನ್ನ ಜಾರಿಗೆ ತರುವ ಸಾಧ್ಯತೆಗಳಿವೆ. ಒಂದು ವೇಳೆ ಪರಿಸ್ಥಿತಿ ಕೈಮೀರಿದ್ರೆ ಅಂತಿಮವಾಗಿ ಕರ್ನಾಟಕವನ್ನು ಸಂಪೂರ್ಣವಾಗಿ ಲಾಕ್‌ಡೌನ್ ಎಂದು ಘೋಷಣೆ ಮಾಡಿದರೂ ಅಚ್ಚರಿಪಡಬೇಕಿಲ್ಲ.

ಒಟ್ಟಿನಲ್ಲಿ ಗುರುವಾರದ ಮೋದಿ ಸಭೆ ಮಹತ್ವ ಪಡೆದುಕೊಂಡಿದ್ದು, ಏನೆಲ್ಲಾ ಆಗಬಹುದು ಎನ್ನುವುದನ್ನು ಕರ್ನಾಟಕದ ಜನತೆ ಕಾತರದಿಂದ ಕಾಯುತ್ತಿದ್ದಾರೆ.

ದೇಶದಲ್ಲಿ ಕೊರೋಬಾ ಅಬ್ಬರ 
ಒಮಿಕ್ರಾನ್ ಸೋಂಕು ಭೀತಿ ನಡುವೆಯೇ ದೇಶದಲ್ಲಿ ಮತ್ತೆ ಕೋವಿಡ್ ಸ್ಫೋಟಗೊಂಡಿದ್ದು, ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 1,94,720 ಹೊಸ ಪ್ರಕರಣಗಳು ಪತ್ತೆಯಾಗಿದ್ದು 442 ಮಂದಿ ಸಾವನ್ನಪ್ಪಿದ್ದಾರೆ.

ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 3,60,70,510ಕ್ಕೆ ಏರಿಕೆಯಾಗಿದೆ. ಅಲ್ಲದೇ ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 4,84,655ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಹೇಳಿದೆ.

ದೇಶದಲ್ಲಿ ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 9,55,319ಕ್ಕೆ ತಲುಪಿದೆ. ಈ ನಡುವೆ ಕಳೆದ 24 ಗಂಟೆಗಳಲ್ಲಿ 60,405 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,46,30,536ಕ್ಕೆ ತಲುಪಿದೆ.

ಇನ್ನು ಭಾರತದಲ್ಲಿ ಒಂದೇ 17,61,900 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈ ವರೆಗೂ 69,52,74,380 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಕರ್ನಾಟಕದ ಅಂಕಿ-ಸಂಖ್ಯೆ
ಕರ್ನಾಟಕದಲ್ಲಿ ಕಳೆದ 24 ಗಂಟೆಗಳಲ್ಲಿ 21,390 ಹೊಸ ಪಾಸಿಟಿವ್ ಕೇಸ್ ಪತ್ತೆಯಾಗಿದ್ರೆ, ಈ ಪೈಕಿ ಬೆಂಗಳೂರು ನಗರದಲ್ಲಿಯೇ 15,617 ಕೇಸ್ ದೃಢಪಟ್ಟಿವೆ.ಈ ಮೂಲಕ ರಾಜ್ಯದಲ್ಲಿ ಒಟ್ಟು ಕೊರೋನಾ ಸೋಂಕಿತರ ಸಂಖ್ಯೆ 3099519ಕ್ಕೇರಿದ್ರೆ, ಬೆಂಗಳೂರಿನಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 1334957. ಇದುವರೆಗೂ ನಗರದಲ್ಲಿ 16433 ಜನರು ಮೃತಪಟ್ಟಿದ್ದಾರೆ.

ರಾಜ್ಯದ ಸಕ್ರಿಯ ಪ್ರಕರಣಗಳ ಸಂಖ್ಯೆ 93,009ಕ್ಕೆ ಏರಿಯಾಗಿದ್ರೆ, ಬೆಂಗಳೂರಿನಲ್ಲಿ ನಗರದಲ್ಲಿಯೇ 73 ಸಾವಿರ ಸಕ್ರಿಯ ಪ್ರಕರಣಗಳಿವೆ. ರಾಜ್ಯದಲ್ಲಿ 24 ಗಂಟೆಯಲ್ಲಿ 1,95,047 ಮಾದರಿಗಳ ಕೋವಿಡ್ ಪರೀಕ್ಷೆ ಮಾಡಲಾಗಿದ್ದು, ರಾಜ್ಯದ ಪಾಸಿಟಿವಿಟಿ ದರ ಶೇ 10.96ಕ್ಕೆ ಏರಿಕೆಯಾಗಿದೆ.  ಎಂದು ಆರೋಗ್ಯ ಸಚಿವ ಡಾ ಕೆ ಸುಧಾಕರ್ ಮಾಹಿತಿ ನೀಡಿದ್ದಾರೆ.

click me!