ಟಿಟಿ ವಾಹನ- ಲಾರಿ ನಡುವೆ ಭೀಕರ ಅಪಘಾತ : ಸ್ಥಳದಲ್ಲೇ 14 ಸಾವು

Kannadaprabha News   | Asianet News
Published : Feb 14, 2021, 12:14 PM IST
ಟಿಟಿ ವಾಹನ- ಲಾರಿ ನಡುವೆ ಭೀಕರ ಅಪಘಾತ : ಸ್ಥಳದಲ್ಲೇ 14 ಸಾವು

ಸಾರಾಂಶ

ಟಿಟಿ ವಾಹನ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 14 ಮಂದಿ ಸ್ಥಳದಲ್ಲೇ ಸಾವಿಗೀಡಾದ ಭೀಕರ ಘಟನೆ ಬೆಳ್ಳಂಬೆಳಗ್ಗೆಯೇ ನಡೆದಿದೆ. 

ಕೋಲಾರ (ಫೆ.14) :  ಆಂಧ್ರದ ಕರ್ನೂಲ್ ಜಿಲ್ಲೆಯ ವೆಲ್ಡೂರ್ತಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು ಸ್ಥಳದಲ್ಲೇ 14 ಮಂದಿ ಮೃತಪಟ್ಟಿದ್ದಾರೆ. 

ರಾಷ್ಟ್ರೀಯ ಹೆದ್ದಾರಿ 44 ರ ಮದರ್ಪುರಂ ಫ್ಲೈಓವರ್ ನಲ್ಲಿ ಟಿಟಿ ವಾಹನ ಹಾಗೂ ಲಾರಿ ನಡುವೆ ಡಿಕ್ಕಿ ಸಂಭವಿಸಿ ಈ ಅವಘಡವಾಗಿದೆ.

ಬೆಳ್ಳಂಬೆಳಗ್ಗೆ ಅಜ್ಮೀರ್‌ಗೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಟಿಟಿ ವಾಹನದಲ್ಲಿ ಒಟ್ಟು 18 ಜನರು ಪ್ರಯಾಣ ಮಾಡುತ್ತಿದ್ದರು. 

ಆತ್ಮಹತ್ಯೆಗೆ ಯತ್ನ: ತಾಯಿ ಪಾರು, 9 ತಿಂಗಳ ಹಸುಗೂಸು ನೀರುಪಾಲು .

ಈ ಎಲ್ಲರೂ ಕೂಡ ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯ ಮದನಪಲ್ಲಿಗೆ ಸೇರಿದವರು ಎಂದು ಗುರುತಿಸಲಾಗಿದೆ. 8 ಮಹಿಳೆ,5 ಪುರುಷರು ಹಾಗೂ ಒರ್ವ ಬಾಲಕ ಸ್ಥದಲ್ಲಿ ಸಾವಿಗೀಡಾಗಿದ್ದು,  ನಾಲ್ವರು ಮಕ್ಕಳು ಈ ಅಪಘಾತದಲ್ಲಿ ಪವಾಡ ಸದೃಶವಾಗಿ ಬದುಕುಳಿದಿದ್ದಾರೆ. 

  4 ಬಾಲಕರು ಗಂಭೀರವಾಗಿದ್ದು ಕನೂರ್ಲ್ ಅಸ್ಪತ್ರೆಗೆ ದಾಖಲಿಸಲಾಗಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

Vande Mataram ಎರಡು ಪದಗಳ ಅರ್ಥ ವಿವರಿಸಿದ ಇಕ್ರಾ ಹಸನ್: ಸಂಸದೆಯ ಮಾತು ವೈರಲ್
ವಿದೇಶಗಳಿಗೆ ಭಾರತೀಯ ಪ್ರತಿಭೆ : ನಷ್ಟವೋ ? ಪ್ರಭಾವವೋ?