
ನವದೆಹಲಿ (ಜುಲೈ 5): ಬಿಜೆಪಿಯಿಂದ (BJP) ಅಮಾನತುಗೊಂಡಿರುವ ವಕ್ತಾರೆ ನೂಪುರ್ ಶರ್ಮ (Nupur Sharma) ವಿರುದ್ಧ ಸುಪ್ರೀಂ ಕೋರ್ಟ್ (Supreme Court ) ನೀಡಿರುವ ಇತ್ತೀಚಿನ ಅವಲೋಕನಗಳನ್ನು ಮಾಜಿ ನ್ಯಾಯಮೂರ್ತಿಗಳು ಹಾಗೂ ಅಧಿಕಾರಿಗಳ ಗುಂಪು ಮಂಗಳವಾರ ಟೀಕಿಸಿದೆ. ಸುಪ್ರೀಂ ಕೋರ್ಟ್ ತನ್ನ ಲಕ್ಷ್ಣಣ ರೇಖೆ ದಾಟಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿರುವ ಇವರು, ತುರ್ತಾಗಿ ಈ ಮಾತುಗಳನ್ನು ತಿದ್ದುಪಡಿ ಮಾಡುವ ಅಗತ್ಯವಿದೆ ಎಂದು ಹೇಳಿದೆ.
"ನ್ಯಾಯಾಂಗದ ಹಾದಿಗಳಲ್ಲಿ ದುರದೃಷ್ಟಕರ ಕಾಮೆಂಟ್‌ಗಳಿಗೆ ಯಾವುದೇ ಸಮಾನಾಂತರವಿಲ್ಲ ಮತ್ತು ಅತಿದೊಡ್ಡ ಪ್ರಜಾಪ್ರಭುತ್ವದ ನ್ಯಾಯ ವ್ಯವಸ್ಥೆಯಲ್ಲಿ ಅಳಿಸಲಾಗದ ಗಾಯವಾಗಿದೆ. ಇವುಗಳು ಪ್ರಜಾಪ್ರಭುತ್ವದ ಮೌಲ್ಯಗಳು ಮತ್ತು ದೇಶದ ಭದ್ರತೆಯ ಮೇಲೆ ಗಂಭೀರ ಪರಿಣಾಮಗಳನ್ನು ಬೀರುವ ಕಾರಣ ತುರ್ತು ಸರಿಪಡಿಸುವ ಕ್ರಮಗಳಿಗೆ ಕರೆ ನೀಡಲಾಗಿದೆ' ಎಂದು 15 ಮಾಜಿ ನ್ಯಾಯಾಧೀಶರು, 77 ಐಎಎಸ್ ಅಧಿಕಾರಿಗಳು ಹಾಗೂ 25 ಮಾಜಿ ಸೇನಾಧಿಕಾರಿಗಳ ಗುಂಪು ಸಹಿ ಮಾಡಿದ ಪ್ರಕಟಣೆಯಲ್ಲಿ ಹೇಳಲಾಗಿದೆ.
ಸಹಿ ಮಾಡಿದವರಲ್ಲಿ ಬಾಂಬೆ ಹೈಕೋರ್ಟ್‌ನ ಮಾಜಿ ಮುಖ್ಯ ನ್ಯಾಯಮೂರ್ತಿ ಕ್ಷಿತಿಜ್ ವ್ಯಾಸ್, ಗುಜರಾತ್ ಹೈಕೋರ್ಟ್ ಮಾಜಿ ನ್ಯಾಯಾಧೀಶ ಎಸ್ ಎಂ ಸೋನಿ, ರಾಜಸ್ಥಾನ ಹೈಕೋರ್ಟ್ ಮಾಜಿ ನ್ಯಾಯಾಧೀಶರಾದ ಆರ್ ಎಸ್ ರಾಥೋಡ್ ಮತ್ತು ಪ್ರಶಾಂತ್ ಅಗರ್ವಾಲ್ ಮತ್ತು ದೆಹಲಿ ಹೈಕೋರ್ಟ್ ಮಾಜಿ ನ್ಯಾಯಾಧೀಶ ಎಸ್ ಎನ್ ಧಿಂಗ್ರಾ ಸೇರಿದ್ದಾರೆ.
ಮಾಜಿ ಐಎಎಸ್ ಅಧಿಕಾರಿಗಳಾದ ಆರ್ ಎಸ್ ಗೋಪಾಲನ್ ಮತ್ತು ಎಸ್ ಕೃಷ್ಣ ಕುಮಾರ್, ರಾಯಭಾರಿ (ನಿವೃತ್ತ) ನಿರಂಜನ್ ದೇಸಾಯಿ, ಮಾಜಿ ಡಿಜಿಪಿಗಳಾದ ಎಸ್ ಪಿ ವೈದ್ ಮತ್ತು ಬಿ ಎಲ್ ವೋಹ್ರಾ, ಲೆಫ್ಟಿನೆಂಟ್ ಜನರಲ್ ವಿ ಕೆ ಚತುರ್ವೇದಿ (ನಿವೃತ್ತ) ಮತ್ತು ಏರ್ ಮಾರ್ಷಲ್ (ನಿವೃತ್ತ) ಎಸ್ ಪಿ ಸಿಂಗ್ ಸಹ ಸಹಿ ಹಾಕಿದ್ದಾರೆ. ಇವರುಗಳ ಪ್ರಕಾರ, ನೂಪುರ್ ಶರ್ಮ ಕುರಿತಾಗಿ ಸುಪ್ರೀಂ ಕೋರ್ಟ್ ಮಾಡಿರುವ ಅವಲೋಕನಗಳು ನ್ಯಾಯಾಂಗ ನೀತಿಗೆ ಹೊಂದಿಕೆಯಾಗುವುದಿಲ್ಲ ಎಂದು ಅಭಿಮತ ವ್ಯಕ್ತಪಡಿಸಿದ್ದಾರೆ.
'ದೇಶದ ನಾಗರಿಕರಾದ ನಾವು, ಸಂವಿಧಾನದ ಪ್ರಕಾರ ಎಲ್ಲಾ ಸಂಸ್ಥೆಗಳು ತಮ್ಮ ಕರ್ತವ್ಯಗಳನ್ನು ನಿರ್ವಹಿಸುವವರೆಗೆ ಯಾವುದೇ ದೇಶದ ಪ್ರಜಾಪ್ರಭುತ್ವವು ಅಖಂಡವಾಗಿ ಉಳಿಯುತ್ತದೆ ಎಂದು ನಂಬುತ್ತೇವೆ. ಗೌರವಾನ್ವಿತ ಸುಪ್ರೀಂ ಕೋರ್ಟ್‌ನ ಇಬ್ಬರು ನ್ಯಾಯಾಧೀಶರ ಇತ್ತೀಚಿನ ಕಾಮೆಂಟ್‌ಗಳು ಲಕ್ಷ್ಮಣ ರೇಖೆಯನ್ನು ಮೀರಿದ್ದು, ನಾವು ಬಹಿರಂಗ ಹೇಳಿಕೆ ನೀಡುವಂತೆ ಒತ್ತಾಯಿಸಿದೆ.
ನೂಪುರ್ ಶರ್ಮ ತಲೆ ತಂದವರಿಗೆ ನನ್ನ ಮನೆಯನ್ನ ದಾನ ಮಾಡ್ತೇನೆ
ಪ್ರವಾದಿ ಮೊಹಮದ್ ಪೈಗಂಬರ್ ಕುರಿತಾಗಿ ನೂಪುರ್ ಶರ್ಮ ಹೇಳಿದಂತ ಮಾತುಗಳ ಬಗ್ಗೆ ಜುಲೈ 1 ರಂದು ಸುಪ್ರೀಂ ಕೋರ್ಟ್ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿತ್ತು.ಆಕೆಯ ಬೇಜವಾಬ್ದಾರಿಯ ಮಾತುಗಳಿಂದ ಇಡೀ ದೇಶಕ್ಕೆ ಬೆಂಕಿ ಹೊತ್ತಿಕೊಂಡಿತು. ಇಂದು ಇಡೀ ದೇಶದಲ್ಲಿ ಆಗಿರುವ ಘಟನೆಗೆ ಆಕೆಯೊಬ್ಬಳೇ ಕಾರಣ ಎಂದು ಹೇಳಿತ್ತು.
ಇದರ ಬೆನ್ನಲ್ಲಿಯೇ ನೂಪುರ್ ಶರ್ಮ ವಿರುದ್ಧ ವಿವಿಧ ರಾಜ್ಯಗಳಲ್ಲಿ ದಾಖಲಿಸಲಾಗಿದ್ದ ಎಫ್‌ಐಆರ್‌ಅನ್ನು ದೆಹಲಿಗೆ ವರ್ಗಾಯಿಸಲು ನಿರಾಕರಿಸಿದ ಸುಪ್ರೀಂ ಕೋರ್ಟ್ ಪೀಠ, ಅಗ್ಗದ ಪ್ರಚಾರ, ರಾಜಕೀಯ ಅಜೆಂಡಾ ಅಥವಾ ಕೆಲವು ಕೆಟ್ಟ ಚಟುವಟಿಕೆಗಳಿಗಾಗಿ ಕಾಮೆಂಟ್ ಮಾಡಲಾಗಿದೆ ಎಂದು ಹೇಳಿತ್ತು. ಸುಪ್ರೀಂ ಕೋರ್ಟ್ ಮಾಡಿರುವ ಈ ಕಾಮೆಂಟ್‌ಗಳು ದೇಶದ ಒಳಗೆ ಮತ್ತು ಹೊರಗೆ ಆಘಾತ ತಂದಿದೆ ಎಂದು ಹೇಳಿದ್ದಾರೆ.
ಪ್ರವಾದಿ ನಿಂದನೆ: ನೂಪುರ್ ಶರ್ಮಾಗೆ ಲುಕೌಟ್ ನೋಟಿಸ್
ಆಕೆ ನ್ಯಾಯಕ್ಕಾಗಿ ಸುಪ್ರೀಂ ಕೋರ್ಟ್ ಕದ ತಟ್ಟಿದ್ದರು. ಆದರೆ, ನ್ಯಾಯಾಲಯದ ಅವಲೋಕನಗಳು ಅರ್ಜಿಯಲ್ಲಿ ಪ್ರಸ್ತಾಪಿಸಲಾದ ವಿಷಯದೊಂದಿಗೆ ನ್ಯಾಯಶಾಸ್ತ್ರೀಯವಾಗಿ ಯಾವುದೇ ಸಂಬಂಧವನ್ನು ಹೊಂದಿಲ್ಲ. ಕಾಮೆಂಟ್ ಮಾಡುವ ವೇಳೆ ಎಲ್ಲಾ ರೀತಿಯ ನಿಯಮಗಳನ್ನು ಉಲ್ಲಂಘನೆ ಮಾಡಲಾಗಿದೆ ಎಂದು ಹೇಳಿಕೆ ತಿಳಿಸಿದೆ. ಸುಪ್ರೀಂ ಕೋರ್ಟ್‌ನ ಹಿಂದಿನ ಆದೇಶಗಳನ್ನು ಉಲ್ಲೇಖಿಸಿ ತನ್ನ ವಿರುದ್ಧದ ಎಲ್ಲಾ ಎಫ್‌ಐಆರ್‌ಗಳನ್ನು ಒಟ್ಟಾಗಿ ಸೇರಿಸಲು ಶರ್ಮಾ ಮಾಡಿದ ಮನವಿಯನ್ನು ಇವರು ಸಮರ್ಥನೆ ಮಾಡಿಕೊಂಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ