
ಲಕ್ನೋ(ಫೆ.13): ಇಲ್ಲಿನ ನ್ಯಾಯಾಲಯದ ಆವರಣದಲ್ಲಿ ಬಾಂಬ್ ಸ್ಫೋಟ ಸಂಭವಿಸಿದ ಪರಿಣಾಮ ಮೂವರು ವಕೀಲರು ಗಾಯಗೊಂಡಿರುವ ಘಟನೆ ನಡೆದಿದೆ.
ಲಕ್ನೋ ಬಾರ್ ಅಸೋಸಿಯೇಷನ್'ನ ಜಂಟಿ ಕಾರ್ಯದರ್ಶಿ ಸಂಜೀವ್ ಲೋಧಿಯವರನ್ನು ಗುರಿಯಾಗಿರಿಸಿ ಈ ದಾಳಿ ನಡೆಸಲಾಗಿದೆ ಎಂದು ಹೇಳಲಾಗಿದೆ.
ಹುಬ್ಬಳ್ಳಿ ರೈಲ್ವೆ ಬಾಂಬ್ ಸ್ಫೋಟ ಇನ್ನೂ ನಿಗೂಢ!
ಉತ್ತರಪ್ರದೇಶ ವಿಧಾನಸಭಗೆ ಕೆಲವೇ ದೂರಗಳಲ್ಲಿ ಇರುವ ಜಿಲ್ಲಾ ಮ್ಯಾಜಿಸ್ಟ್ರೇಟ್ ಕಚೇರಿ ಬಳಿ ಸ್ಫೋಟ ಸಂಭವಿಸಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.
ಇನ್ನು ಸುದ್ದಿ ತಿಳಿದ ಕೂಡಲೇ ಸ್ಥಳಕ್ಕೆ ಧಾವಿಸಿದ ಪೊಲೀಸರು, ಸ್ಥಳದಿಂದ ಇನ್ನೂ ಮೂರು ಜೀವಂತ ಬಾಂಬ್’ಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ