
ಕೋಲ್ಕತಾ(ಮಾ.28): ನಗರದ ನೇತಾಜಿ ಸುಭಾಷ್‌ಚಂದ್ರ ಬೋಸ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂಡಿಗೋ ವಿಮಾನವು, ನಿಂತಿದ್ದ ಏರ್ ಇಂಡಿಯಾ ವಿಮಾನದ ರೆಕ್ಕೆಕ್ಕೆ ಡಿಕ್ಕಿ ಹೊಡೆದ ಘಟನೆ ಬುಧವಾರ ಬೆಳಗ್ಗೆ ನಡೆದಿದೆ. ಇದರಿಂದಾಗಿ ಇಂಡಿಗೋ ವಿಮಾನದ ರೆಕ್ಕೆಗೆ ಹಾನಿ ಆಗಿದ್ದರೆ, ಏರ್ ಇಂಡಿಯಾ ವಿಮಾನದ ರೆಕ್ಕೆ ತುಂಡಾಗಿ ಕೆಳಗೆ ಬಿದ್ದಿದೆ. ಸುದೈವವಶಾತ್ ಎಲ್ಲ 135 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
‘ಬೆಳಗ್ಗೆ 11:15ಕ್ಕೆ ದರ್ಭಾಂಗಕ್ಕೆ ಹೊರಟಿದ್ದ ಇಂಡಿಗೋ ವಿಮಾನವು ರನ್‌ವೇ ಕ್ಲಿಯರೆನ್ಸ್‌ಗಾಗಿ ನಿಂತಿದ್ದ ಏರ್ ಇಂಡಿಯಾ ವಿಮಾನಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಏರ್ ಇಂಡಿಯಾ ವಿಮಾನದ ರೆಕ್ಕೆ ಮುರಿದಿದೆ.
ಉಕ್ರೇನ್‌ನ 65 ಮಂದಿ ಯುದ್ಧಕೈದಿಗಳಿದ್ದ ರಷ್ಯಾ ವಿಮಾನ ಪತನ
ಇಂಡಿಗೋ ವಿಮಾನದ ರೆಕ್ಕೆ ತೀವ್ರ ಹಾನಿಯಾಗಿದೆ’ ವಿಮಾನಯಾನ ಮಹಾ ನಿರ್ದೇಶನಾಲಯ (ಡಿಜಿಸಿಎ) ಹೇಳಿದೆ. ಇಂಡಿಗೋ ವಿಮಾನದಲ್ಲಿದ್ದ ಎಲ್ಲ 135 ಪ್ರಯಾಣಿಕರು ಸುರಕ್ಷಿತವಾಗಿದ್ದು, ಅವರಿಗೆ ಮತ್ತೊಂದು ವಿಮಾನ ವ್ಯವಸ್ಥೆ ಮಾಡಿ ಮುಂದೆ ಕಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಡಿಜಿಸಿಎ ಇಂಡಿಗೋ ವಿಮಾನದ ಪೈಲಟ್‌ಗಳಿಗೆ ಸಂಬಳ ರಹಿತ ಕಡ್ಡಾಯ ರಜೆ ಮೇಲೆ ಕಳುಹಿಸಿ ವಿಸ್ತೃತ ತನಿಖೆಗೆ ಆದೇಶಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ