ಕೇಂದ್ರ ಸರ್ಕಾರಿ ನೌಕರನ ಮನೇಲಿ 20 ಕೋಟಿ ನಗದು ವಶ

Published : May 03, 2023, 09:25 AM IST
ಕೇಂದ್ರ ಸರ್ಕಾರಿ ನೌಕರನ ಮನೇಲಿ 20 ಕೋಟಿ ನಗದು ವಶ

ಸಾರಾಂಶ

ಕೇಂದ್ರ ಸರ್ಕಾರಿ ಅಧಿಕಾರಿಯೊಬ್ಬರಿಗೆ ಸೇರಿದ ವಿವಿಧ ರಾಜ್ಯಗಳ 19 ಸ್ಥಳಗಳ ಮೇಲೆ ದಾಳಿ ನಡೆಸಿದ ಕೇಂದ್ರೀಯ ತನಿಖಾ ದಳ (CBI)ದ ಅಧಿಕಾರಿಗಳು 20 ಕೋಟಿ ರು.ಗೂ ಅಧಿಕ ನಗದನ್ನು ವಶಪಡಿಸಿಕೊಂಡಿದ್ದಾರೆ.

ನವದೆಹಲಿ: ಅಕ್ರಮ ಆಸ್ತಿ ಸಂಪಾದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ವಲಯದ ನೀರು ಮತ್ತು ವಿದ್ಯುತ್‌ ಸಲಹಾ ಸೇವೆ (ವ್ಯಾಪ್‌ಕಾಸ್‌) ಲಿಮಿಟೆಡ್‌ನ ಮಾಜಿ ಚೇರ್‌ಮನ್‌ ಮತ್ತು ವ್ಯವಸ್ಥಾಪಕ ನಿರ್ದೇಶಕ ರಾಜೀಂದರ್‌ ಕುಮಾರ್‌ ಗುಪ್ತಾ (Rajendra Kumar Gupta) ಅವರಿಗೆ ಸೇರಿದ ವಿವಿಧ ರಾಜ್ಯಗಳ 19 ಸ್ಥಳಗಳ ಮೇಲೆ ದಾಳಿ ನಡೆಸಿದ ಕೇಂದ್ರೀಯ ತನಿಖಾ ದಳ (CBI)ದ ಅಧಿಕಾರಿಗಳು 20 ಕೋಟಿ ರು.ಗೂ ಅಧಿಕ ನಗದನ್ನು ವಶಪಡಿಸಿಕೊಂಡಿದ್ದಾರೆ. ಇತ್ತೀಚೆಗಷ್ಟೇ ಅಕ್ರಮ ಆಸ್ತಿ ಸಂಪಾದನೆ ಪ್ರಕರಣದಲ್ಲಿ ಗುಪ್ತಾ ಹಾಗೂ ಅವರ ಕುಟುಂಬದ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿತ್ತು. ಇದಾದ ಬಳಿಕ ದಾಳಿ ನಡೆಸಿದ ಅಧಿಕಾರಿಗಳು ನಗದು ಸೇರಿದಂತೆ ಹಲವು ದಾಖಲಾತಿಗಳನ್ನು ವಶಪಡಿಸಿಕೊಂಡಿದ್ದಾರೆ. ಇದು ಕೇಂದ್ರ ಜಲಶಕ್ತಿ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುವ ಸಂಸ್ಥೆಯಾಗಿದೆ.

ಮಮತಾ ಬ್ಯಾನರ್ಜಿಗೆ ಶಾಕ್, ಸಿಬಿಐ ದಾಳಿ ವೇಳೆ ಮೊಬೈಲ್ ಕೆರೆಗೆ ಎಸೆದ ಟಿಎಂಸಿ ಶಾಸಕ ಅರೆಸ್ಟ್!

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಮಾಲೀಕನ ನಿಧನಕ್ಕೆ ಬಿಕ್ಕಿ ಬಿಕ್ಕಿ ಕಣ್ಣೀರು ಹಾಕಿದ ಶ್ವಾನ; ವಿಡಿಯೋ ನೋಡಿ ಭಾವುಕರಾದ ಜನರು
India Latest News Live: ಭಾರತ-ದಕ್ಷಿಣ ಆಫ್ರಿಕಾ 2ನೇ ಟಿ20 - ಮತ್ತೊಂದು ಗೆಲುವಿನ ವಿಶ್ವಾಸದಲ್ಲಿ ಟೀಂ ಇಂಡಿಯಾ!