2013 ಬಾಂಬ್‌ ಸ್ಫೋಟ ಪ್ರಕರಣದಲ್ಲಿ ಯಾಸಿನ್‌ ಭಟ್ಕಳ ಸೇರಿ ಐವರಿಗೆ ಗಲ್ಲು ಕಾಯಂ

Published : Apr 09, 2025, 08:47 AM IST
2013 ಬಾಂಬ್‌ ಸ್ಫೋಟ ಪ್ರಕರಣದಲ್ಲಿ ಯಾಸಿನ್‌ ಭಟ್ಕಳ ಸೇರಿ ಐವರಿಗೆ ಗಲ್ಲು ಕಾಯಂ

ಸಾರಾಂಶ

2013ರ ಹೈದರಾಬಾದ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಯಾಸಿನ್ ಭಟ್ಕಳ ಸೇರಿ ಐವರಿಗೆ ಗಲ್ಲು ಶಿಕ್ಷೆಯನ್ನು ಹೈಕೋರ್ಟ್ ಎತ್ತಿ ಹಿಡಿದಿದೆ. ದಿಲ್‌ಸುಖ್‌‌ನಗರದಲ್ಲಿ ನಡೆದ ಅವಳಿ ಸ್ಫೋಟದಲ್ಲಿ 18 ಮಂದಿ ಸಾವನ್ನಪ್ಪಿದ್ದರು.

ಹೈದರಾಬಾದ್‌: 2013ರ ಹೈದರಾಬಾದ್‌ ಬಾಂಬ್‌ ಸ್ಫೋಟ ಪ್ರಕರಣದಲ್ಲಿ ನಿಷೇಧಿತ ಭಯೋತ್ಪಾದಕ ಸಂಘಟನೆ ಇಂಡಿಯನ್ ಮುಜಾಹಿದ್ದೀನ್ ಸಂಘಟನೆಯ ಯಾಸಿನ್‌ ಭಟ್ಕಳ್‌ ಸೇರಿದಂತೆ ಐವರಿಗೆ ಮರಣದಂಡನೆ ವಿಧಿಸಿದ್ದ ವಿಚಾರಣಾ ನ್ಯಾಯಾಲಯದ ತೀರ್ಪನ್ನು ತೆಲಂಗಾಣ ಹೈಕೋರ್ಟ್‌ ಮಂಗಳವಾರ ಎತ್ತಿ ಹಿಡಿದಿದೆ. 2013ರ ಫೆಬ್ರವರಿ 21 ರಂದು ನಗರದ ಜನದಟ್ಟಣೆಯ ಶಾಪಿಂಗ್ ಪ್ರದೇಶವಾದ ದಿಲ್‌ಸುಖ್‌ನಗರದಲ್ಲಿ ಅವಳಿ ಸ್ಫೋಟ ಸಂಭವಿಸಿತ್ತು. ಘಟನೆಯಲ್ಲಿ 18 ಮಂದಿ ಸಾವನ್ನಪ್ಪಿದ್ದರೆ, 131 ಮಂದಿ ಗಾಯಗೊಂಡಿದ್ದರು.

ಈ ಪ್ರಕರಣ ಸಂಬಂಧ 2016ರ ಡಿಸೆಂಬರ್‌ 13 ರಂದು ವಿಚಾರಣಾಧೀನ ನ್ಯಾಯಾಲಯ ಕರ್ನಾಟಕದ ಭಟ್ಕಳ ಮೂಲದ ಮೊಹದ್‌ ಅಹ್ಮದ್‌ ಸಿದ್ದಿಬಾಪಾ ಅಲಿಯಾಸ್‌ ಯಾಸಿನ್ ಭಟ್ಕಳ್‌, ಜಿಯಾ- ಉರ್‌- ರಹಮಾನ್ ಅಲಿಯಾಸ್‌ ವಕಾಸ್‌, ಅಸಾದುಲ್ಲಾ ಅಖ್ತರ್‌ ಅಲಿಯಾಸ್‌ ಹಡ್ಡಿ, ತಹಸೀನ್ ಅಖ್ತರ್‌ ಅಲಿಯಾಸ್‌ ಮೋನು ಮತ್ತು ಅಜಾರನ್ನು ದೋಷಿಗಳೆಂದು ಪರಿಗಣಿಸಿ ಮರಣದಂಡನೆ ವಿಧಿಸಿತ್ತು. ಬಳಿಕ ಐವರು ಇದನ್ನು ಪ್ರಶ್ನಿಸಿ ಹೈಕೋರ್ಟ್‌ ಮೊರೆ ಹೋಗಿದ್ದರು.

ಇದನ್ನೂ ಓದಿ: ಮೈಸೂರು ಅಂದ್ರೆ ಟಿಪ್ಪು ನೆನಪಾಗ್ತಾನೆ; ಕರಾವಳಿ ಅಂದ್ರೆ ಯಾಸೀನ್ ಭಟ್ಕಳ್ ನೆನಪಾಗ್ತಾನೆ: ಪ್ರತಾಪ್ ಸಿಂಹ

ಆದರೆ ಹೈಕೋರ್ಟ್‌ ಎನ್‌ಐಎ ನ್ಯಾಯಾಲಯ ತೀರ್ಪನ್ನು ಎತ್ತಿ ಹಿಡಿದಿದ್ದು, ವಿಚಾರಣಾ ನ್ಯಾಯಾಲಯ ತೀರ್ಪನ್ನು ದೃಢೀಕರಿಸಲಾಗುತ್ತದೆ ಎಂದಿದೆ. ಈ ಕೃತ್ಯದ ಮುಖ್ಯ ರೂವಾರಿ ರಿಯಾಜ್‌ ಭಟ್ಕಳ್‌ ಈಗಲೂ ಪಾಕಿಸ್ತಾನದಲ್ಲಿ ತಲೆಮರೆಸಿಕೊಂಡಿದ್ದಾನೆ.

ಇದನ್ನೂ ಓದಿ: ಸೂರತ್‌ನಲ್ಲಿ ಅಣುಬಾಂಬ್‌ ಹಾಕಲು ಯಾಸಿನ್‌ ಭಟ್ಕಳ್‌ ಸಂಚು: ಎನ್‌ಐಎ ಚಾರ್ಜ್‌ಶೀಟ್‌

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
ಪುಟಿನ್ ಔತಣಕೂಟಕ್ಕೆ ರಾಹುಲ್ ಗಾಂಧಿ-ಖರ್ಗೆಗಿಲ್ಲ ಆಮಂತ್ರಣ, ಶಶಿ ತರೂರ್‌ಗೆ ಜಾಕ್‌ಪಾಟ್