
ನವದೆಹಲಿ (ಡಿ.22): 2024ರ ಜನವರಿ 26 ರಂದು ಭಾರತದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಆಗಮಿಸಲಿದ್ದಾರೆ. ಭಾರತ ನೀಡಿರುವ ಆಹ್ವಾನವನ್ನು ಫ್ರೆಂಚ್ ಅಧ್ಯಕ್ಷೀಯ ಕಚೇರಿ ಸ್ವೀಕರಿಸಿದೆ. ಫ್ರೆಂಚ್ ಅಧ್ಯಕ್ಷರ ಕಚೇರಿಯಿಂದ ಈ ಕುರಿತಾಗಿ ಬಂದಿರುವ ದೃಢೀಕರಣವು ಎರಡು ರಾಷ್ಟ್ರಗಳ ನಡುವಿನ ಬಾಂಧವ್ಯವನ್ನು ಬಲಪಡಿಸುವಲ್ಲಿ ನಿರ್ಣಾಯಕ ಕ್ಷಣವಾಗಿದೆ ಎಂದು ಭಾರತ ಹೇಳಿದೆ. ಭಾರತವು ಆರಂಭದಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು ಅಮೆರಿಕ ಅಧ್ಯಕ್ಷ ಜೋ ಬಿಡೆನ್‌ಗೆ ಆಹ್ವಾನವನ್ನು ನೀಡಿತ್ತು. ಆದರೆ ಸ್ಟೇಟ್ ಆಫ್ ಯೂನಿಯನ್ ಭಾಷಣ, ಮತ್ತೊಮ್ಮೆ ಚುನಾವಣೆಗೆ ಸ್ಪರ್ಧಿಸುವ ಹೋರಾಟ ಹಾಗೂ ಇಸ್ರೇಲ್ ಹಮಾಸ್ ನಡುವಿನ ಸಂಘರ್ಷದ ಕಾರಣದಿಂದಾಗಿ ಬಿಡೆನ್ ಅವರು ಬರಲು ಸಾಧ್ಯವಿಲ್ಲ ಎಂದು ವಾಷಿಂಗ್ಟನ್ ತಿಳಿಸಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ