
ಜಮ್ಮು ಕಾಶ್ಮೀರದ ಉದ್ದಂಪುರದಲ್ಲಿ ಬಸ್ಸೊಂದು ಕಂದಕಕ್ಕೆ ಉರುಳಿದ ಪರಿಣಾಮ ಬಸ್‌ನಲ್ಲಿದ್ದ 21 ಜನ ದಾರುಣವಾಗಿ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ 29 ಜನ ಗಾಯಗೊಂಡಿದ್ದು, ಗಾಯಾಳುಗಳ ಸ್ಥಿತಿಯೂ ಗಂಭೀರವಾಗಿದೆ. ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಬಸ್ ಬೆಳಿಗ್ಗೆ 10 ಗಂಟೆ ಸುಮಾರಿಗೆ ರಾಮನಗರ ಪ್ರದೇಶದ ಕಾಗೋರ್ಟ್ ಗ್ರಾಮದ ಬಳಿ ಕಡಿದಾದ ತಿರುವಿನಲ್ಲಿ ಚಲಿಸುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ್ದ ಪರಿಣಾಮ ಈ ದುರಂತ ಸಂಭವಿಸಿದೆ.
ಕೂಡಲೇ ಸ್ಥಳಕ್ಕೆ ಧಾವಿಸಿ ಬಂದ ಸ್ಥಳೀಯ ನಿವಾಸಿಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದು, ಗಾಯಾಳುಗಳನ್ನು ನಜ್ಜುಗುಜ್ಜಾದ ಬಸ್‌ನ ಅವಶೇಷಗಳಿಂದ ಹೊರಗೆ ತೆಗೆದು ಆಸ್ಪತ್ರೆಗೆ ಸಾಗಿಸಲು ನೆರವಾಗಿದ್ದಾರೆ. ತುರ್ತು ರಕ್ಷಣಾ ತಂಡಗಳು ಸ್ಥಳಕ್ಕೆ ಬರುವ ಮೊದಲೇ ಸ್ಥಳೀಯರು ಹಲವರನ್ನು ಬಸ್‌ನ ಅವಶೇಷಗಳಿಂದ ಹೊರ ತೆಗೆದಿದ್ದಾರೆ. ಅಪಘಾತಕ್ಕೀಡಾದ ಬಸ್‌ನಿಂದ 21 ಶವಗಳನ್ನು ಹೊರತೆಗೆಯಲಾಗಿದ್ದು, 29 ಜನರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ ಅವರಲ್ಲಿ ಹಲವರ ಸ್ಥಿತಿ ಗಂಭೀರವಾಗಿದೆ.
ಅಪಘಾತಕ್ಕೀಡಾದ ಈ ಬಸ್ ದೂರದ ಹಳ್ಳಿಯೊಂದರಿಂದ ಉದ್ದಂಪುರದತ್ತ ತೆರಳುತ್ತಿತ್ತು. ಅಪಘಾತಕ್ಕೆ ನಿಖರವಾದ ಕಾರಣ ತಿಳಿದು ಬಂದಿಲ್ಲ, ಘಟನೆಯ ನಂತರ ಸ್ಥಳೀಯ ಅಧಿಕಾರಿಗಳೊಂದಿಗೆ ಮಾತನಾಡಿದ್ದೇನೆ ಮತ್ತು ಗಾಯಾಳುಗಳಿಗೆ ಸಹಾಯ ಮಾಡಲು ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಹೇಳಿದ್ದಾರೆ. ಒಂದು ಗಂಟೆಯ ಹಿಂದೆ ಕಾನೋಟ್ ಗ್ರಾಮದಲ್ಲಿ ರಾಮನಗರದಿಂದ ಉಧಂಪುರಕ್ಕೆ ಹೋಗುವ ದಾರಿಯಲ್ಲಿ ಸಾರ್ವಜನಿಕ ಸಾರಿಗೆ ಬಸ್ ಅಪಘಾತಕ್ಕೀಡಾದ ವಿಚಾರ ತಿಳಿದ ನಂತರ, ಉಧಂಪುರ ಜಿಲ್ಲಾಧಿಕಾರಿ ಮಿಂಗಾ ಶೆರ್ಪಾ ಅವರೊಂದಿಗೆ ಈಗಷ್ಟೇ ಮಾತನಾಡಿದೆ. ರಕ್ಷಣಾ ಕಾರ್ಯಾಚರಣೆಯನ್ನು ತಕ್ಷಣವೇ ಕೈಗೊಳ್ಳಲಾಗಿದೆ. ಭಾರೀ ಸಾವು ನೋವು ಸಂಭವಿಸಿದ್ದು, ಅಲ್ಲಿ ಸಾಧ್ಯವಿರುವ ಎಲ್ಲ ಸಹಾಯವನ್ನು ಒದಗಿಸಲಾಗುತ್ತಿದೆ. ಗಾಯಾಳುಗಳನ್ನು ವೈದ್ಯಕೀಯ ಸಹಾಯಕ್ಕಾಗಿ ಸ್ಥಳಾಂತರಿಸಲಾಗುವುದು. ಗಂಭೀರವಾಗಿ ಗಾಯಗೊಂಡವರನ್ನು ವಿಮಾನದ ಮೂಲಕ ಸಾಗಿಸಲು ವ್ಯವಸ್ಥೆ ಮಾಡಲಾಗುತ್ತಿದೆ" ಎಂದು ಸಚಿವರು ಹೇಳಿದ್ದಾರೆ.
ಇದನ್ನೂ ಓದಿ: ಪ್ರಧಾನಿ ಕಿವಿಯಲ್ಲಿ ಹೇಳಿದ ಗುಟ್ಟು ಮಾಡಿದ ಸಿಎಂ: ಮೋದಿ ಸಿದ್ದು ಬಳಿ ಹೇಳಿದ್ದೇನು?
ಸ್ಥಳೀಯ ಆಡಳಿತ ಮತ್ತು ರಕ್ಷಣಾ ಕಾರ್ಯಾಚರಣೆಯಲ್ಲಿ ಭಾಗಿಯಾಗಿರುವ ಪಕ್ಷದ ಕಾರ್ಯಕರ್ತರೊಂದಿಗೆ ಸಂಪರ್ಕದಲ್ಲಿರುವುದಾಗಿ ಸಿಂಗ್ ಹೇಳಿದರು. ರಕ್ಷಣಾ ಕಾರ್ಯಗಳು ಮುಂದುವರೆದಿದ್ದು, ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ದುರಂತದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಆಘಾತ ಹಾಗೂ ಸಂತಾಪ ವ್ಯಕ್ತಪಡಿಸಿದ್ದು, ಮೃತರ ಸಂಬಂಧಿಕರಿಗೆ ತಲಾ 2 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಹಾಗೆಯೇ ಗಾಯಾಳುಗಳಿಗೆ ತಲಾ 50 ಸಾವಿರ ಪರಿಹಾರ ಘೋಷಿಸಲಾಗಿದೆ. ಜಮ್ಮು ಮತ್ತು ಕಾಶ್ಮೀರದ ಉಧಂಪುರದಲ್ಲಿ ಸಂಭವಿಸಿದ ಬಸ್ ಅಪಘಾತದಲ್ಲಿ ಮೃತಪಟ್ಟವರ ಬಗ್ಗೆ ಕೇಳಿ ದುಃಖವಾಯಿತು . ತಮ್ಮ ಆಪ್ತರನ್ನು ಕಳೆದುಕೊಂಡವರಿಗೆ ನನ್ನ ಹೃತ್ಪೂರ್ವಕ ಸಂತಾಪ ಸೂಚಿಸುತ್ತೇನೆ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ. ಈ ದುರಂತ ಅಪಘಾತದಲ್ಲಿ ಪ್ರಾಣ ಕಳೆದುಕೊಂಡ ಪ್ರತಿಯೊಬ್ಬರ ಹತ್ತಿರದ ಸಂಬಂಧಿಕರಿಗೆ PMNRF ನಿಂದ 2 ಲಕ್ಷ ರೂ.ಗಳ ಪರಿಹಾರ ನೀಡಲಾಗುವುದು ಎಂದು ಪ್ರಧಾನಿ ಎಕ್ಸ್‌ನಲ್ಲಿ ಹೇಳಿದ್ದಾರೆ.
ಇದನ್ನೂ ಓದಿ: ಸತ್ತ ಮೇಲೆ ಸಿಕ್ಕಿಬಿದ್ದ ಕಿಲಾಡಿ ಪ್ರೇಮಿ: ಶವಸಂಸ್ಕಾರದ ವೇಳೆ ಇಬ್ಬರು ಪ್ರೇಯಸಿಯರ ಮಧ್ಯೆ 'ಗ್ರೇಟ್ ಫೈಟ್'
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ