ರಾಜಧಾನಿಯ ಕೊರೋನಾ ಅಧ್ಯಯನ ವರದಿ ಬಹಿರಂಗ; 23.48% ಮಂದಿಯಲ್ಲಿ ಸೋಂಕು!

Published : Jul 21, 2020, 07:00 PM IST
ರಾಜಧಾನಿಯ ಕೊರೋನಾ ಅಧ್ಯಯನ ವರದಿ ಬಹಿರಂಗ; 23.48% ಮಂದಿಯಲ್ಲಿ ಸೋಂಕು!

ಸಾರಾಂಶ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿದೆ. ನಿಯಂತ್ರಣಕ್ಕೆ ಹಲವು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಇದರ ಜೊತೆಗೆ ಕೊರೋನಾ ಕುರಿತು ಅಧ್ಯಯನವೂ ನಡೆಯುತ್ತಿದೆ. NCDC, ದೆಹಲಿ ಸರ್ಕಾರ ನಡೆಸಿದ ಅಧ್ಯಯನ ವರದಿ ಬಹಿರಂಗವಾಗಿದೆ. ಈ ವರದಿ ಎಚ್ಚರಿಕೆಯ ಕರೆಗಂಟೆ ನೀಡುತ್ತಿದೆ.

ದೆಹಲಿ(ಜು.21):  ದೇಶದಲ್ಲಿ ಕೊರೋನಾ ವೈರಸ್ ಅಟ್ಟಹಾಸ ಮಿತಿ ಮೀರುತ್ತಿದೆ. ಅದರಲ್ಲೂ ರಾಜಧಾನಿ ದೆಹಲಿಯಲ್ಲಿ ಪರಿಸ್ಥಿತಿ ಗಂಭೀರ ಸ್ವರೂಪ ಪಡೆದುಕೊಂಡಿದೆ. ದೆಹಲಿ ಸರ್ಕಾರ ಹಾಗೂ ಕೇಂದ್ರ ಸರ್ಕಾರ ಕೊರೋನಾ ನಿಯಂತ್ರಣಕ್ಕೆ ಕ್ರಮಗಳನ್ನು ಕೈಗೊಂಡಿದೆ. ಇದರ ನಡವೆ NCDC, ದೆಹಲಿ ಸರ್ಕಾರ  ಜಂಟಿಯಾಗಿ ನಡೆಸಿದ ಕೊರೋನಾ ಅಧ್ಯನಯ ವರದಿ ಬಹಿರಂಗವಾಗಿದೆ. ಈ ವರದಿ ಪ್ರಕಾರ ದೆಹಯಲ್ಲಿನ 23.48% ಮಂದಿ ಕೊರೋನಾದಿಂದ ಬಾಧಿತರಾಗಿದ್ದಾರೆ. 

ರಾಜ್ಯದ ಜನತೆಯನ್ನುದ್ದೇಶಿಸಿ ಸಿಎಂ ಮಾತು: ಮಹತ್ವದ ಮಾಹಿತಿ ಬಿಚ್ಚಿಟ್ಟ ಬಿಎಸ್‌ವೈ

ನಗದಲ್ಲಿನ ಜನ ಸಂದಣಿ ಹೆಚ್ಚಿರುವ ಪ್ರದೇಶದಲ್ಲಿ ಕೊರೋನಾ ತೀವ್ರವಾಗಿ ಹರಡಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳದೆ, ಮಾಸ್ಕ್ ಧರಿಸಿದ ಕಾರಣ ಹಲವರಲ್ಲಿ ಕೊರೋನಾ ಕಾಣಿಸಿಕೊಂಡಿದೆ ಎಂದು ಈ ಸಮೀಕ್ಷೆ ಹೇಳುತ್ತಿದೆ. ಮತ್ತೊಂದು ಆಘಾತಕಾರಿ ಅಂಶ ಎಂದರೆ ದೆಹಲಿಯಲ್ಲಿ ಬಹುತೇಕ ಸೋಂಕಿತರಲ್ಲಿ ಕೊರೋನಾ ರೋಗ ಲಕ್ಷಣಗಳೇ ಇಲ್ಲ.

ರೆಮ್‌ಡೆಸಿವಿರ್‌ನ ಜೆನರಿಕ್‌ ಮಾದರಿ ರಿಲೀಸ್: ಬೆಂಗಳೂರಲ್ಲಿ ಉತ್ಪಾದನೆ!

ಸೆರೋ ಸಮೀಕ್ಷೆಯನ್ನು ಜೂನ್ 27 ರಿಂದ ಜುಲೈ 10ರ ವರೆಗೆ ನಡೆಸಲಾಗಿದೆ. ದೆಹಲಿಯ 11 ಜಿಲ್ಲೆಗಳಲ್ಲಿ ಈ ಸಮೀಕ್ಷೆಯನ್ನು ನಡೆಸಲಾಗಿದೆ. ಒಟ್ಟು 21,387 ಮಾದರಿಗಳನ್ನು ಸಂಗ್ರಹಿಸಲಾಗಿದೆ. ಅಧ್ಯಯನದ ಪ್ರಕಾರ ಇಂದಿನಿಂದಲೇ ದೆಹಲಿಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಇಳಿಮುಖವಾದರೂ ಸಹಜ ಸ್ಥಿತಿಗೆ ಮರಳಲು ಕನಿಷ್ಠ 6 ತಿಂಗಳು ಬೇಕು ಎಂದಿದೆ. 

ಸದ್ಯ ದೆಹಲಿ ಆರೋಗ್ಯ ಇಲಾಖೆ ಬಿಡುಗಡೆ ಮಾಡಿದ ಕೊರೋನಾ ವರದಿಯಲ್ಲಿ ಸೋಂಕಿತರ ಸಂಖ್ಯೆ 1, 23,747ಕ್ಕೇರಿಕೆಯಾಗಿದೆ. 3,663 ಮಂದಿ ಕೊರೋನಾ ವೈರಸ್‌ಗೆ ಬಲಿಯಾಗಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಕಾರ್‌ನಲ್ಲಿ ಜೋಡಿ 'ಸರಸ' ಸೆರೆಹಿಡಿದ ಟೋಲ್‌ ಮ್ಯಾನೇಜರ್‌, ಸಿಸಿಟಿವಿ ವಿಡಿಯೋ ತೋರಿಸಿ ಬ್ಲ್ಯಾಕ್‌ಮೇಲ್‌!
ವಿಶ್ವದ ಟಾಪ್ 10 ಬೊಟಾನಿಕಲ್ ಗಾರ್ಡನ್ ಲಿಸ್ಟ್‌ನಲ್ಲಿ ನಂ.1 ನಮ್ಮ ಲಾಲ್‌ಬಾಗ್