ಕಾಶ್ಮೀರದ ಚೋವಲ್ಗಾಮ್‌ನಲ್ಲಿ ಶಾಪಿಂಗ್ ಮಾಡಲು ತೆರಳಿದ ಬಳಿಕ 25 ವರ್ಷದ ಯೋಧ ನಾಪತ್ತೆಯಾಗಿದ್ದಾರೆ. ಜಾವೇದ್ ಅಹ್ಮದ್ ವಾನಿ ಕುಲ್ಗಾಮ್ ಜಿಲ್ಲೆಯ ಅಚಾತಲ್ ಪ್ರದೇಶದ ನಿವಾಸಿ ಎಂದು ತಿಳಿದುಬಂದಿದ್ದು, ರಜೆಯ ಮೇಲೆ ಮನೆಗೆ ಬಂದಿದ್ದರು.
ಕುಲ್ಗಾಮ್ (ಜುಲೈ 30, 2023): ರಜೆಯ ಮೇಲೆ ಮನೆಗೆ ಮರಳಿದ್ದ 25 ವರ್ಷದ ಭಾರತೀಯ ಸೇನಾ ಯೋಧ ನಾಪತ್ತೆಯಾಗಿದ್ದಾರೆ. ಜಾವೇದ್ ಅಹ್ಮದ್ ವಾನಿ ಅವರ ವಾಹನ ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಪತ್ತೆಯಾಗಿದ್ದು, ಇವರು ನಾಪತ್ತೆಯಾಗಿದ್ದಾರೆ ಎಂದು ಕುಟುಂಬ ಆತಂಕಕಾರಿ ಮಾಹಿತಿ ಹೊರ ಹಾಕಿದೆ.
ಕಾಶ್ಮೀರದ ಚೋವಲ್ಗಾಮ್‌ನಲ್ಲಿ ಶಾಪಿಂಗ್ ಮಾಡಲು ತೆರಳಿದ ಬಳಿಕ 25 ವರ್ಷದ ಯೋಧ ನಾಪತ್ತೆಯಾಗಿದ್ದಾರೆ. ಜಾವೇದ್ ಅಹ್ಮದ್ ವಾನಿ ಕುಲ್ಗಾಮ್ ಜಿಲ್ಲೆಯ ಅಚಾತಲ್ ಪ್ರದೇಶದ ನಿವಾಸಿ ಎಂದು ತಿಳಿದುಬಂದಿದ್ದು, ರಜೆಯ ಮೇಲೆ ಮನೆಗೆ ಬಂದಿದ್ದರು.
ಇದನ್ನು ಓದಿ: Kargil Vijay Diwas: ವೀರ ಸೈನಿಕರ ಜತೆಗೆ ಮಿರೇಜ್ 2000 ಮತ್ತು ಬೋಫೋರ್ಸ್ ಗನ್ ಸಹ ಈ ಯುದ್ಧದ ಹೀರೋಗಳು!
ಜಾವೇದ್ ಅಹ್ಮದ್ ವಾನಿ ಎಂಬ ಭಾರತೀಯ ಸೇನಾ ಸಿಬ್ಬಂದಿಯನ್ನು ಲೇಹ್ (ಲಡಾಖ್) ನಲ್ಲಿ ನಿಯೋಜಿಸಲಾಗಿತ್ತು ಮತ್ತು ಶನಿವಾರ ರಾತ್ರಿ 8 ಗಂಟೆ ಸುಮಾರಿಗೆ ಇವರು ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ನಿನ್ನೆ ಸಂಜೆ ಪಾರನ್ಹಾಲ್ನಲ್ಲಿ ಅವರ ಕಾರು ಪತ್ತೆಯಾಗಿದೆ ಎಂದು ಅಧಿಕಾರಿಗಳು ಪಿಟಿಐಗೆ ತಿಳಿಸಿದ್ದಾರೆ. ಜಾವೇದ್ ತನ್ನ ಕಾರನ್ನು ತೆಗೆದುಕೊಂಡು ಚೋವಲ್ಗಾಮ್‌ನಲ್ಲಿ ದಿನಸಿ ವಸ್ತುಗಳನ್ನು ಖರೀದಿಸಲು ಹೋಗಿದ್ದರು ಎಂದೂ ತಿಳಿದುಬಂದಿದೆ.
ಶನಿವಾರ ಸಂಜೆ 6.30ರ ಸುಮಾರಿಗೆ ಮಾರುಕಟ್ಟೆಯಿಂದ ಕೆಲ ವಸ್ತುಗಳನ್ನು ಖರೀದಿಸಿಲು ಯೋಧ ಶಾಪಿಂಗ್‌ಗೆ ಹೋಗಿದ್ದರು. ಈತ ಆಲ್ಟೋ ಕಾರನ್ನು ಓಡಿಸುತ್ತಿದ್ದ. ರಾತ್ರಿ 9 ಗಂಟೆಯಾದರೂ ವಾಪಸ್ ಬಾರದೇ ಇದ್ದಾಗ ಕುಟುಂಬದವರು ಹುಡುಕಾಡಿದ್ದಾರೆ. ಹತ್ತಿರದ ಪ್ರದೇಶಗಳಲ್ಲಿ ಮತ್ತು ಸುತ್ತಮುತ್ತಲಿನ ಹಳ್ಳಿಗಳಲ್ಲಿ ಅವರನ್ನು ಅವರ ಕುಟುಂಬ ಸದಸ್ಯರು ಹುಡುಕಲು ಪ್ರಾರಂಭಿಸಿದರು. ಶೋಧ ಕಾರ್ಯದ ವೇಳೆ ಪರಾನ್ಹಾಲ್ ಗ್ರಾಮದ ಮಾರುಕಟ್ಟೆಯ ಬಳಿ ಕಾರು ಪತ್ತೆಯಾಗಿದ್ದು, ವರದಿಗಳ ಪ್ರಕಾರ ಅದರಲ್ಲಿ ರಕ್ತದ ಕಲೆಗಳಿತ್ತು. ಶೋಧ ಕಾರ್ಯಾಚರಣೆಯ ವೇಳೆ ಅವರ ಕಾರಿನಲ್ಲಿ ಅವರ ಪಾದರಕ್ಷೆಗಳು ಮತ್ತು ರಕ್ತದ ಕುರುಹುಗಳು ಪತ್ತೆಯಾಗಿವೆ. ಕಾರಿನ ಬಾಗಿಲು ತೆರೆದಿತ್ತು ಎಂದೂ ವರದಿಯಾಗಿದೆ.
ಇದನ್ನೂ ಓದಿ: PUBG ಲವರ್ ಸೀಮಾ ಹೈದರ್ ಸೋದರ, ಅಂಕಲ್ ಪಾಕ್ ಸೇನೆಯಲ್ಲಿ ಕೆಲಸ: ಪಾಕ್ ಮಹಿಳೆ ಬಗ್ಗೆ ಮತ್ತಷ್ಟು ಅನುಮಾನ
ಅಪಹರಣಕ್ಕೊಳಗಾದ ಯೋಧನ ಪತ್ತೆಗೆ ಭಾರತೀಯ ಸೇನೆ ಮತ್ತು ಪೊಲೀಸರು ಭಾರೀ ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ. ಪ್ರದೇಶವನ್ನು ಸುತ್ತುವರಿದಿದೆ. ಕುಲ್ಗಾಮ್ ಜಿಲ್ಲೆಯ ಅಚತಲ್ ನೆರೆಹೊರೆಯ ಸ್ಥಳೀಯರಾದ ವಾನಿ ಅವರನ್ನು ಲಡಾಖ್ ಪ್ರದೇಶಕ್ಕೆ ಕಳುಹಿಸಲಾಗಿದೆ. ಈ ಬಗ್ಗೆ ಮಾಹಿತಿ ತಿಳಿದುಕೊಂಡ ನಂತರ, ಕಾಶ್ಮೀರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಕೆಲವು ಶಂಕಿತರನ್ನು ಬಂಧಿಸಿದ್ದಾರೆ ಎಂದುತಿಳಿದುಬಂದಿದೆ.
ಈ ಹಿಂದೆಯೂ ಈ ಪ್ರದೇಶದಲ್ಲಿ ರಜೆಯ ಮೇಲೆ ಮನೆಯಲ್ಲಿದ್ದ ಹಲವಾರು ಸೈನಿಕರನ್ನು ಉಗ್ರರು ಅಪಹರಿಸಿ ಹತ್ಯೆಗೈದಿದ್ದರು ಎಂಬುದು ಅತಂಕಕಾರಿಯಾದ ಮಾಹಿತಿಯಾಗಿದೆ.
ಇದನ್ನೂ ಓದಿ: Eid Al - Adha: ಅಟ್ಟಾರಿ-ವಾಘಾ ಗಡಿಯಲ್ಲಿ ಸಿಹಿ ಹಂಚಿಕೊಂಡ ಭಾರತ, ಪಾಕ್ ಯೋಧರು