
ನವದೆಹಲಿ/ಅಮೃತಸರ(ಏ.25): ಆಸ್ಪತ್ರೆಗಳಲ್ಲಿ ಆಮ್ಲಜನಕದ ತೀವ್ರ ಅಭಾವ ಮುಂದುವರಿದಿದ್ದು, ದೆಹಲಿಯಲ್ಲಿ 20 ಮಂದಿ ಹಾಗೂ ಪಂಜಾಬಿನ ಅಮೃತಸರದಲ್ಲಿ 6 ಮಂದಿ ಸಾವಿಗೀಡಾಗಿದ್ದಾರೆ. ನೈಋುತ್ಯ ದೆಹಲಿಯ ರೋಹಿಣಿ ಪ್ರದೇಶದಲ್ಲಿರುವ ಜೈಪುರ್ ಗೋಲ್ಡನ್ ಆಸ್ಪತ್ರೆಯಲ್ಲಿ ಶುಕ್ರವಾರ ರಾತ್ರಿ ಆಮ್ಲಜನಕ ಸಿಲಿಂಡರ್‌ಗಳು ಖಾಲಿಯಾಗಿದ್ದರಿಂದ ರೋಗಿಗಳು ಮೃತಪಟ್ಟಿದ್ದಾರೆ ಎಂದು ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಡಾ| ಕೆ.ಬಲುಜಾ ತಿಳಿಸಿದ್ದಾರೆ.
ಈ ಆಸ್ಪತ್ರೆಯಲ್ಲಿ 200 ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಅದೇ ರೀತಿ ಅಮೃತಸರದ ನೀಲಕಂಠ ಖಾಸಗಿ ಆಸ್ಪತ್ರೆಯಲ್ಲಿ ಆಮ್ಲಜನಕದ ಕೊರತೆಯಿಂದಾಗಿ 6 ಮಂದಿ ರೋಗಿಗಳು ಮೃತಪಟ್ಟಿದ್ದಾರೆ. ಅವರಲ್ಲಿ 5 ಮಂದಿ ಕೊರೋನಾ ಸೋಂಕಿತರಾಗಿದ್ದಾರೆ.
ಆಕ್ಸಿಜನ್‌ಗೆ ಹಾಹಾಕಾರ:
ಈ ಮಧ್ಯೆ ದೆಹಲಿಯ ಆಸ್ಪತ್ರೆಗಳಲ್ಲಿ 5ನೇ ದಿನವೂ ಆಮ್ಲಜನಕದ ಅಭಾವ ಮುಂದುವರಿದಿದೆ. ಕೆಲವೇ ಗಂಟೆಗಲ್ಲಿ ಆಮ್ಲಜನಕದ ಸಂಗ್ರಹ ಖಾಲಿ ಆಗುತ್ತಿವೆ. ಈ ಬಗ್ಗೆ ಸಾಮಾಜಿಕ ಜಾಲತಾಣಗಳ ಮೂಲಕ ಆಸ್ಪತ್ರೆಗಳು ತಮ್ಮ ಅಸಹಾಯಕತೆಯನ್ನು ವ್ಯಕ್ತಪಡಿಸುತ್ತಿವೆ. ಆಮ್ಲಜನಕ ಕೊರತೆ ನಿವಾರಣೆಗೆ ಪರಿಹಾರ ಕೋರಿ ಮಹಾರಾಜ ಅಗ್ರಸೇನ್ ಆಸ್ಪತ್ರೆ ದೆಹಲಿ ಹೈಕೋರ್ಟ್‌ನ ಮೊರೆ ಹೋಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ