
ನವದೆಹಲಿ(ಏ. 19): ಕೊರೋನಾ ತಡೆಗಾಗಿ ಹಲವು ಕ್ರಮಗಳನ್ನು ಕೈಗೊಂಡಿದ್ದಾಗ್ಯೂ, ದೆಹಲಿಯ ಜಹಂಗೀರ್‌ಪುರಿ ಎಂಬ ಪ್ರದೇಶದಲ್ಲಿ ಒಂದೇ ಕುಟುಂಬದ 26 ಮಂದಿ ಸೋಂಕಿಗೆ ತುತ್ತಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಈ ಪ್ರದೇಶವನ್ನು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಕಂಟೇನೆಮೆಂಟ್ ವಲಯ ಎಂದು ಘೋಷಣೆ ಮಾಡಿದ್ದಾರೆ.
ಒಬ್ಬ ಕಳ್ಳನಿಂದ 17 ಪೊಲೀಸ್, ಜಡ್ಜ್ ಕ್ವಾರಂಟೈನ್‌ಗೆ!
ಹೌದು ದೆಹಲಿಯ ಜಹಾಂಗೀರ್‌ಪುರ್ ಪ್ರದೇಶದಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಆರೋಗ್ಯ ಇಲಾಖೆ ಈ ಪ್ರದೇಶದಲ್ಲಿ 60 ಸ್ಯಾಂಪಲ್ ಪರೀಕ್ಷೆಗೆ ಒಳಪಡಿಸಿತ್ತು. ಇವರಲ್ಲಿ ಒಂದೇ ಕುಟುಂಬದ 26 ಮಂದಿ ಸೇರಿ ಒಟ್ಟು 31 ಪ್ರಕರಣಗಳು ಪಾಸಿಟಿವ್ ಬಂದಿವೆ.
ಈ ಮಾಹಿತಿ ಹೊರಬಿದ್ದ ಬೆನ್ನಲ್ಲೇ ಈ ವಲಯವನ್ನು ಕಂಟೇನೆಮೆಂಟ್ ವಲಯ ಎಂದು ಘೋಷಿಸಲಾಗಿದೆ. ಈ ಮೂಲಕ ಇದುವರೆಗೂ ದೆಹಲಿಯಲ್ಲಿ ಹಾಟ್‌ಸ್ಪಾಟ್‌ಗಳ ಸಂಖ್ಯೆ 68ರಿಂದ 69ಕ್ಕೆ ಜಿಗಿದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ